Hyundai Creta N Line: ಸಖತ್ ಸ್ಪೋರ್ಟಿ ಫೀಚರ್ಸ್ ಹೊಂದಿರುವ ಹ್ಯುಂಡೈ ಕ್ರೆಟಾ ಎನ್-ಲೈನ್ ಅನಾವರಣ

ಭಾರತದಲ್ಲಿ ಸ್ಪೋರ್ಟಿ ಫೀಚರ್ಸ್ ಹೊಂದಿರುವ ಕಾರುಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ಹ್ಯುಂಡೈ ಕಂಪನಿ ಕ್ರೆಟಾ ಎನ್ ಲೈನ್ ಆವೃತ್ತಿಯನ್ನು ಅನಾವರಣಗೊಳಿಸಿದೆ.

Hyundai Creta N Line: ಸಖತ್ ಸ್ಪೋರ್ಟಿ ಫೀಚರ್ಸ್ ಹೊಂದಿರುವ ಹ್ಯುಂಡೈ ಕ್ರೆಟಾ ಎನ್-ಲೈನ್ ಅನಾವರಣ
ಹ್ಯುಂಡೈ ಕ್ರೆಟಾ ಎನ್-ಲೈನ್
Follow us
Praveen Sannamani
|

Updated on: Feb 29, 2024 | 10:21 PM

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಎರಡನೇ ಅತಿದೊಡ್ಡ ಕಂಪನಿಯಾಗಿರುವ ಹ್ಯುಂಡೈ (Hyundai) ತನ್ನ ಬಹುನೀರಿಕ್ಷಿತ ಕ್ರೆಟಾ ಎನ್ ಲೈನ್ ಅನಾವರಣಗೊಳಿಸಿದೆ. ಹೊಸ ಕಾರು ವಿಶೇಷವಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಅಭಿವೃದ್ದಿಗೊಂಡಿದ್ದು, ಹಲವಾರು ಸ್ಪೋರ್ಟಿ ಫೀಚರ್ಸ್ ಹೊಂದಿದೆ. ಹೊಸ ಕಾರು ಖರೀದಿದಾಗಿ ರೂ. 25 ಸಾವಿರದ ಮುಂಗಡದೊಂದಿಗೆ ಬುಕಿಂಗ್ ಆರಂಭಿಸಿದ್ದು, ಮಾರ್ಚ್ 11ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಹೊಸ ಕಾರು ವಿಶೇಷವಾದ ಬ್ಲ್ಯೂ ಮತ್ತು ಮ್ಯಾಟೆ ಗ್ರೇ ಬಣ್ಣದ ಆಯ್ಕೆ ಹೊಂದಿರಲಿದ್ದು, ಎನ್ ಲೈನ್ ಬ್ಯಾಡ್ಜ್ ಸೇರಿದಂತೆ ಸ್ಪೋರ್ಟಿಯಾಗಿರುವ ಗ್ರಿಲ್ ಮತ್ತು ಬಂಪರ್ ನೀಡಲಾಗಿದೆ. ಸಾಮಾನ್ಯ ಕ್ರೆಟಾಗಿಂತಲೂ ವಿಭಿನ್ನಗೊಳಿಸಲು ಹೊಸ ಎನ್ ಲೈನ್ ಕಾರಿನ ಹೊರ ಮತ್ತು ಒಳಾಗಂಣದಲ್ಲೂ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಎನ್ ಲೈನ್ ಬ್ಯಾಡ್ಜ್ ಜೊತೆ ಸೈಡ್ ಸ್ಕರ್ಟ್, ರೆಡ್ ಆಕ್ಸೆಂಟ್ ಮತ್ತು ರೆಡ್ ಬ್ರೇಕ್ ಕ್ಯಾಲಿಪರ್ ಗಳನ್ನು ನೀಡಲಾಗಿದೆ. ಜೊತೆಗೆ ಹೊಸ ಕಾರಿನಲ್ಲಿರುವ ಟ್ವಿನ್ ಟಿಪ್ಸ್ ಹಾಗೂ ಸ್ಪೋರ್ಟಿ ಎಕ್ಸಾಸ್ಟ್ ಮತ್ತು 18 ಇಂಚಿನ ಅಲಾಯ್ ವ್ಹೀಲ್ ಗಳು ಗಮನಸೆಳೆಯುತ್ತವೆ.

ಇದನ್ನೂ ಓದಿ: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳು!

Hyundai N line (1)

ಇದರೊಂದಿಗೆ ಹೊಸ ಕಾರಿನ ಒಳಭಾಗದಲ್ಲಿ ಪ್ರೀಮಿಯಂ ಡ್ರೈವ್ ಅನುಭವಕ್ಕಾಗಿ ಆಲ್ ಬ್ಲ್ಯಾಕ್ ಥೀಮ್ ನೊಂದಿಗೆ ಕ್ಯಾಬಿನ್, ಎನ್ ಲೈನ್ ಸ್ಪೆಕ್ ಸ್ಟೀರಿಂಗ್ ವ್ಹೀಲ್ ಮತ್ತು ಮೆಟಲ್ ಪೆಡಲ್ ನೀಡಲಾಗಿದೆ. ಇನ್ನುಳಿದಂತೆ ಹೊಸ ಎನ್ ಲೈನ್ ಕಾರು ಸಾಮಾನ್ಯ ಕ್ರೆಟಾದಂತೆ ಬಹುತೇಕ ಫೀಚರ್ಸ್ ಗಳನ್ನು ಹೊಂದಿದೆ. ಹೊಸ ಕಾರಿನಲ್ಲಿ 160 ಹಾರ್ಸ್ ಪವರ್ ಹೊಂದಿರುವ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಪಡೆದುಕೊಂಡಿದೆ.

ಇನ್ನು ಹೊಸ ಕ್ರೆಟಾ ಕಾರು ಸದ್ಯ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷ ಬೆಲೆ ಹೊಂದಿದ್ದರೆ, ಟಾಪ್ ಎಂಡ್ ಮಾದರಿಯು ರೂ. 20 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ಐದು ಪ್ರಮುಖ ವೆರಿಯೆಂಟ್ಸ್ ಹೊಂದಿದ್ದು, ಇದರಲ್ಲಿ ಎನ್ ಲೈನ್ ತುಸು ದುಬಾರಿಯಾಗಿರಲಿದೆ. ಹೊಸ ಎನ್ ಲೈನ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 19 ಲಕ್ಷದಿಂದ ರೂ. 21 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.

ಇದನ್ನೂ ಓದಿ: ಮೊದಲ ಬಾರಿ ಹೊಸ ಕಾರು ಖರೀದಿಸುತ್ತಿದ್ದೀರಾ? ಈ ವಿಚಾರಗಳು ತಪ್ಪದೇ ತಿಳಿದಿರಲಿ..

ಹ್ಯುಂಡೈ ಕಂಪನಿ ಹೊಸ ಕ್ರೆಟಾ ಕಾರಿನಲ್ಲಿ ಹಲವಾರು ಸುರಕ್ಷಾ ಫೀಚರ್ಸ್ ಗಳನ್ನು ಜೋಡಣೆ ಮಾಡಿದೆ. ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಂಭಾವ್ಯ ಅಪಘಾತಗಳನ್ನು ತಡೆಯಬಲ್ಲ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗಿದೆ. ಇದು ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಗಳ ಪ್ಯಾಕೇಜ್ ಹೊಂದಿದ್ದು, ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಗಳ ಜೊತೆ 360 ಡಿಗ್ರಿ ಕ್ಯಾಮೆರಾ ಸೇರಿ ಹಲವಾರು ಫೀಚರ್ಸ್ ಹೊಂದಿದೆ.

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ