ಭಾರತದಲ್ಲಿ ಕ್ರೆಟಾ ಜನಪ್ರಿಯತೆಗೆ ಕಾರಣಗಳನ್ನು ಬಹಿರಂಗ ಪಡಿಸಿದ ಹ್ಯುಂಡೈ

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳ ವಿಭಾಗದಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ಕ್ರೆಟಾ ಕಾರು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಆಯ್ಕೆಯಲ್ಲಿ ಅಗ್ರಸ್ಥಾನದೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಭಾರತದಲ್ಲಿ ಕ್ರೆಟಾ ಜನಪ್ರಿಯತೆಗೆ ಕಾರಣಗಳನ್ನು ಬಹಿರಂಗ ಪಡಿಸಿದ ಹ್ಯುಂಡೈ
ಹ್ಯುಂಡೈ ಕ್ರೆಟಾ
Follow us
Praveen Sannamani
|

Updated on:Jun 01, 2024 | 9:02 PM

ಭಾರತದಲ್ಲಿ ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳಿಗೆ ಕಳೆದ ಐದಾರು ವರ್ಷಗಳಿಂದ ಭಾರೀ ಪ್ರಮಾಣದ ಬೇಡಿಕೆ ದಾಖಲಾಗುತ್ತಿದ್ದು, ಈ ವಿಭಾಗದಲ್ಲಿರುವ ಹ್ಯುಂಡೈ ಕ್ರೆಟಾ (Hyundai Creta) ಕಾರು ಅಗ್ರಸ್ಥಾನದೊಂದಿಗೆ ಮುನ್ನುಗ್ಗುತ್ತಿದೆ. 2015ರ ಜುಲೈನಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಕ್ರೆಟಾ ಕಾರು ಸತತ 9 ವರ್ಷಗಳಿಂದ ತನ್ನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಇದು ಹಲವಾರು ಮಾರಾಟ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಆಕರ್ಷಕ ಬೆಲೆ, ವಿವಿಧ ಎಂಜಿನ್ ಆಯ್ಕೆಗಳು, ಗಮನಸೆಳೆಯುವ ಹೊರ ಮತ್ತು ಒಳ ವಿನ್ಯಾಸಗಳು, ಸುಧಾರಿತ ತಂತ್ರಜ್ಞಾನ ಸೇರಿದಂತೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿರುವ ಕ್ರೆಟಾ ಕಾರು ಮಧ್ಯಮ ವರ್ಗದ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಬಿಡುಗಡೆಯಾದ 9 ವರ್ಷಗಳ ನಂತರ ಬೇಡಿಕೆಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದು, ಇತ್ತೀಚೆಗೆ ಬಿಡುಗಡೆ ಹೊಸ ಆವೃತ್ತಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟವಾಗುತ್ತಿರುವ ಕ್ರೆಟಾ ಕಾರು ಈ ಹಿಂದೆಂದಿಗಿಂತಲೂ ಅತ್ಯಧಿಕ ಫೀಚರ್ಸ್ ಮತ್ತು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಎನ್ ಲೈನ್ ಆವೃತ್ತಿಯೊಂದಿಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಕ್ರೆಟಾ ಫೇಸ್‌ಲಿಫ್ಟ್‌ ಆವೃತ್ತಿಯು ಫೀಚರ್ಸ್ ಗಳಿಗೆ ಅನುಗುಣವಾಗಿ ಇ, ಇಎಕ್ಸ್, ಎಸ್, ಎಸ್ ಆಪ್ಷನ್, ಎಸ್ಎಕ್ಸ್, ಎಸ್ಎಕ್ಸ್ ಟೆಕ್ ಮತ್ತು ಎಸ್ಎಕ್ಸ್ ಆಪ್ಷನ್ ವೆರಿಯೆಂಟ್ ಗಳನ್ನು ಹೊಂದಿದ್ದು, ಇದರಲ್ಲಿ ಆರಂಭಿಕ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 20 ಲಕ್ಷ ಬೆಲೆ ಹೊಂದಿದೆ.

ವೆರ್ನಾ ಮತ್ತು ಟುಸಾನ್ ಕಾರಿನಲ್ಲಿರುವಂತೆ ಶಾರ್ಪ್ ಎಡ್ಜ್ ವಿನ್ಯಾಸ ಹೊಂದಿರುವ ಕ್ರೆಟಾ ಹೊಸ ಕಾರು ಬಾಕ್ಸಿ ಡಿಸೈನ್ ನೊಂದಿಗೆ ಮತ್ತಷ್ಟು ಆಕರ್ಷಕವಾದ ಫ್ರಂಟ್ ಗ್ರಿಲ್, ಫ್ರಂಟ್ ಬಂಪರ್ ಮತ್ತು ಎಲ್ ಶೇಫ್ ಹೊಂದಿರುವ ಎಲ್ಇಡಿ ಲೈಟ್ಸ್ ಬ್ಯಾಂಡ್ ಪಡೆದುಕೊಂಡಿದ್ದು, ಒಳಭಾಗದಲ್ಲೂ ಭಾರೀ ಬದಲಾವಣೆಯೊಂದಿಗೆ 10.25 ಇಂಚಿನ ಕನೆಕ್ಟೆಡ್ ಸ್ಕ್ರೀನ್, ಮರುವಿನ್ಯಾಸಗೊಳಿಸಲಾದ ಎಸಿ ವೆಂಟ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೊಲ್ ಸೌಲಭ್ಯಗಳನ್ನು ಹೊಂದಿದೆ.

ಇದನ್ನೂ ಓದಿ: ಆಕರ್ಷಕ ಬೆಲೆಯಲ್ಲಿರುವ ಪವರ್ ಫುಲ್ 7 ಸೀಟರ್ ಎಸ್‌ಯುವಿ ಕಾರುಗಳಿವು!

ಇನ್ನು ಕ್ರೆಟಾ ಫೇಸ್‌ಲಿಫ್ಟ್‌ ನಲ್ಲಿ ಹ್ಯುಂಡೈ ಕಂಪನಿಯು ಈ ಹಿಂದಿನ 1.5 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಮುಂದುವರೆಸಿದ್ದು, ಇದರೊಂದಿಗೆ ಹೊಸದಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಪರಿಚಯಿಸಿದೆ. ಇದು ಸೆವೆನ್ ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ 160 ಹಾರ್ಸ್ ಪವರ್ ಉತ್ಪಾದಿಸುತ್ತದೆ. ಇದರೊಂದಿಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಜೊತೆಗೆ ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಗಳು ಮತ್ತು 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

Published On - 8:55 pm, Sat, 1 June 24

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ