ಡ್ಯುಯಲ್ ಸಿಲಿಂಡರ್ ಹೊಂದಿರುವ ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಕಾರು ಬಿಡುಗಡೆ

ಹ್ಯುಂಡೈ ಇಂಡಿಯಾ ಕಂಪನಿಯು ಮೊದಲ ಬಾರಿಗೆ ಡ್ಯುಯಲ್ ಸಿಲಿಂಡರ್ ತಂತ್ರಜ್ಞಾನ ಪ್ರೇರಿತ ಎಕ್ಸ್‌ಟರ್ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡಿದೆ.

ಡ್ಯುಯಲ್ ಸಿಲಿಂಡರ್ ಹೊಂದಿರುವ ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಕಾರು ಬಿಡುಗಡೆ
ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ
Follow us
|

Updated on: Jul 16, 2024 | 5:31 PM

ದೇಶದ ಎರಡನೇ ಅತಿದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಹ್ಯುಂಡೈ ಇಂಡಿಯಾ (Hyundai India) ಕಂಪನಿಯು ತನ್ನ ಜನಪ್ರಿಯ ಎಕ್ಸ್‌ಟರ್ ಕಾರಿನ ಸಿಎನ್ ಜಿ ಮಾದರಿಯಲ್ಲಿ ಡ್ಯುಯಲ್ ಸಿಲಿಂಡರ್ ತಂತ್ರಜ್ಞಾನ ಪರಿಚಯಿಸಿದೆ. ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 8.50 ಲಕ್ಷ ಬೆಲೆ ಹೊಂದಿದ್ದು, ಇದು ಈ ಹಿಂದಿನ ಮಾದರಿಗಿಂತಲೂ ರೂ. 7 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದೆ.

ಸಿಎನ್‌ಜಿ ಎಕ್ಸ್‌ಟರ್ ಕಾರಿನಲ್ಲಿ ಈ ಹಿಂದೆ ಸಿಂಗಲ್ ಸಿಲಿಂಡರ್ ತಂತ್ರಜ್ಞಾನ ಅಳವಡಿಸಿದ್ದ ಹ್ಯುಂಡೈ ಕಂಪನಿಯು ಇದೀಗ ಡ್ಯುಯಲ್ ಸಿಲಿಂಡರ್ ಪರಿಚಯಿಸಿದ್ದು, ಹೊಸ ಸೌಲಭ್ಯದಿಂದಾಗಿ ಬೂಟ್ ಸ್ಪೆಸ್ ನಲ್ಲಿ ಕಾರು ಮಾಲೀಕರಿಗೆ ಹೆಚ್ಚಿನ ಮಟ್ಟದ ಲಗೇಜ್ ಸ್ಥಳಾವಕಾಶ ದೊರೆಯುತ್ತದೆ. ಸಿಂಗಲ್ ಸಿಲಿಂಡರ್ ಸೌಲಭ್ಯವಿದ್ದಲ್ಲಿ ಅಷ್ಟಾಗಿ ಲಗೇಜ್ ಸ್ಥಳಾವಕಾಶ ಸಿಗದಿರುವುದಕ್ಕೆ ಹಲವು ಕಾರು ಮಾಲೀಕರು ಅಸಮಾಧಾನ ಹೊಂದಿದ್ದರು. ಆದರೆ ಡ್ಯುಯಲ್ ಸಿಲಿಂಡರ್ ನಿಂದಾಗಿ ಇನ್ಮುಂದೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದ್ದು, ಇದು ಟಾಟಾ ಕಾರು ಮತ್ತಷ್ಟು ಪೈಪೋಟಿ ನೀಡಲಿದೆ.

ಸಿಎನ್‌ಜಿ ಕಾರುಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ಡ್ಯುಯಲ್ ಸಿಲಿಂಡರ್ ಪರಿಚಯಿಸುವ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದ್ದು, ಇದೀಗ ಗ್ರಾಹಕರ ಬೇಡಿಕೆ ಆಧರಿಸಿ ಹ್ಯುಂಡೈ ಕೂಡಾ ಡ್ಯುಯಲ್ ಸಿಲಿಂಡರ್ ಸೌಲಭ್ಯವನ್ನು ಅಳವಡಿಸಿಕೊಂಡಿದೆ. ಸದ್ಯ ಎಕ್ಸ್‌ಟರ್ ಕಾರಿನಲ್ಲಿ ಹೊಸ ಸೌಲಭ್ಯ ಪರಿಚಯಿಸಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲಿಯೇ ಐ10 ನಿಯೋಸ್ ಮತ್ತು ಔರಾ ಕಾರುಗಳಲ್ಲೂ ಡ್ಯುಯಲ್ ಸಿಲಿಂಡರ್ ಪರಿಚಯಿಸಲಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಇನ್ನು ಎಕ್ಸ್‌ಟರ್ ಕಾರು ವಿನೂತನ ಫೀಚರ್ಸ್ ಮತ್ತು ಆಕರ್ಷಕ ಬೆಲೆಯೊಂದಿಗೆ ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಬಿಡುಗಡೆಯಾದ ಮೊದಲ ವರ್ಷದ ಸಂಭ್ರಮದೊಂದಿಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟ ದಾಖಲೆ ತನ್ನದಾಗಿಸಿಕೊಂಡಿದೆ. ಮೈಕ್ರೊ ಎಸ್ ಯುವಿ ವೈಶಿಷ್ಟ್ಯತೆ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದು ಸಣ್ಣ ಗಾತ್ರದ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದೆ. ಎಕ್ಸ್‌ಟರ್ ಕಾರು ಸದ್ಯ ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ರೂ. 6.13 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ರೂ. 10.43 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಟರ್ ಕಾರು ಗ್ರ್ಯಾಂಡ್ ಐ10 ನಿಯೋಸ್ ಮತ್ತು ಔರಾ ಕಾರು ಮಾದರಿಗಳೊಂದಿಗೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನ ಹಂಚಿಕೊಂಡಿದ್ದು, ಇದು ಬಾಕ್ಸಿ ಡಿಸೈನ್ ನೊಂದಿಗೆ 3,815 ಎಂಎಂ ಉದ್ದಳತೆ, 1,710 ಎಂಎಂ ಅಗಲ ಮತ್ತು 1,631 ಎಂಎಂ ಎತ್ತರ ಪಡೆದುಕೊಂಡಿದೆ. ಇದರೊಂದಿಗೆ ಹೊಸ ಕಾರಿನಲ್ಲಿ 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 83 ಹಾರ್ಸ್ ಪವರ್ ಮತ್ತು 114 ಎನ್ಎಂ ಉತ್ಪಾದಿಸುತ್ತದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಈ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಠ 19.4 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಅದೇ ರೀತಿಯಾಗಿ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಹೊಂದಿರುವ ಎಕ್ಸ್ ಟರ್ ಕಾರು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 69 ಹಾರ್ಸ್ ಪವರ್ ಮತ್ತು 95.2 ಎನ್ಎಂ ಟಾರ್ಕ್ ಉತ್ಪಾದಿಸಿ ಪ್ರತಿ ಕೆಜೆ ಸಿಎನ್ ಜಿಗೆ 27.10 ಮೈಲೇಜ್ ನೀಡುತ್ತದೆ. ಜೊತೆಗೆ ಹೊಸ ಎಕ್ಸ್ ಟರ್ ಕಾರು ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದ್ದು, ಆರಂಭಿಕ ಮಾದರಿಗೂ ಅನ್ವಯಿಸುವಂತೆ ಆರು ಏರ್ ಬ್ಯಾಗ್ ಗಳ ಜೊತೆಗೆ ಇಎಸ್ ಸಿ, ಹಿಲ್ ಅಸಿಸ್ಟ್ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ, ರಿಯರ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿ ಹಲವು ಸೌಲಭ್ಯಗಳಿವೆ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್