Hyundai Exter vs Tata Punch: ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ನಡುವೆ ಭರ್ಜರಿ ಪೈಪೋಟಿ ಶುರು!

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹ್ಯುಂಡೈ ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್ ಆಪ್ಷನ್(ಕನೆಕ್ಟ್) ಎನ್ನುವ ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಬೆಸ್ ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ರೂ. 10 ಲಕ್ಷ ಬೆಲೆ ಹೊಂದಿದೆ.

ಜೊತೆಗೆ ಹೊಸ ಕಾರು ಪೆಟ್ರೋಲ್ ಮತ್ತು ಸಿಎನ್ ಜಿ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿರುವ ಸಿಎಸ್ ಜಿ ಆವೃತ್ತಿಯು ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ.

Hyundai Exter (4)

ಹೊಸ ಎಕ್ಸ್‌ಟರ್ ನಲ್ಲಿ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 83 ಹಾರ್ಸ್ ಪವರ್ 114 ಎನ್ಎಂ ಉತ್ಪಾದನೆ ಮೂಲಕ ಪ್ರತಿ ಲೀಟರ್ ಗೆ ಗರಿಷ್ಠ 19.4 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹಾಗಾಯೇ ಫಾಕ್ಟರಿ ಸಿಎನ್ ಜಿ ಕಿಟ್ ಜೋಡಣೆ ಹೊಂದಿರುವ ಮಾದರಿಯು ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 69 ಹಾರ್ಸ್ ಪವರ್ ಮತ್ತು 95.2 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 27.10 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Loading...
Unable to load recommendations.
Follow Us