Hyundai i20: ವಿನೂತನ ಫೀಚರ್ಸ್ ಹೊಂದಿರುವ ಹ್ಯುಂಡೈ ಐ20 ಫೇಸ್ ಲಿಫ್ಟ್ ಬಿಡುಗಡೆ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ನವೀಕರಿಸಿದ ಐ20 ಪ್ರೀಮಿಯಂ ಹ್ಯಾಚ್ ಬ್ಯಾಕ್ ಬಿಡುಗಡೆ ಮಾಡಿದೆ.

Hyundai i20: ವಿನೂತನ ಫೀಚರ್ಸ್ ಹೊಂದಿರುವ ಹ್ಯುಂಡೈ ಐ20 ಫೇಸ್ ಲಿಫ್ಟ್ ಬಿಡುಗಡೆ
ಹ್ಯುಂಡೈ ಐ20 ಫೇಸ್ ಲಿಫ್ಟ್ ಬಿಡುಗಡೆ
Follow us
Praveen Sannamani
|

Updated on: Sep 09, 2023 | 10:00 AM

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಇಂಡಿಯಾ(Hyundai India) ಕಂಪನಿಯು ತನ್ನ ಜನಪ್ರಿಯ ಐ20(i20) ಕಾರಿನ ಫೇಸ್ ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.99 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಹೊಸ ಐ20 ಪ್ರೀಮಿಯಂ ಹ್ಯಾಚ್ ಬ್ಯಾಕ್ ಕಾರು ಮಾದರಿಯು ವಿವಿಧ ಎಂಜಿನ್ ಮತ್ತು ಫೀಚರ್ಸ್ ಗಳಿಗೆ ಅನುಗುಣವಾಗಿ ಎರಾ, ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ ಆಪ್ಷನ್ ವೆರಿಯೆಂಟ್ ಗಳನ್ನು ಹೊಂದಿದ್ದು, ಇದರಲ್ಲಿ ಆರಂಭಿಕ ವೆರಿಯೆಂಟ್ ರೂ. 6.99 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ರೂ. 11.01 ಲಕ್ಷ ಬೆಲೆ ಪಡೆದುಕೊಂಡಿದೆ.

Hyundai i20 facelift (3) ಐ20 ಫೇಸ್ ಲಿಫ್ಟ್ ಕಾರು ಮಾದರಿಯು ಸದ್ಯಕ್ಕೆ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಹಿಂದಿನ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯು ಇನ್ಮುಂದೆ ಐ20 ಎನ್-ಲೈನ್ ಆವೃತ್ತಿಯಲ್ಲಿ ಮಾತ್ರ ದೊರೆಯಲಿದ್ದು, ಶೀಘ್ರದಲ್ಲಿಯೇ ನವೀಕರಿಸಿದ ಎನ್-ಲೈನ್ ಆವೃತ್ತಿಯು ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ 2023ರ ಟಾಟಾ ನೆಕ್ಸಾನ್ ಇವಿ ಅನಾವರಣ

ಹೊಸ ಐ20 ಕಾರು ಮಾದರಿಯಲ್ಲಿರುವ 1.2 ಲೀಟರ್ ಪೆಟ್ರೋಲ್ ಎಂಜಿನ್ ನಲ್ಲಿ ಉತ್ತಮ ಇಂಧನ ದಕ್ಷತೆಗಾಗಿ ಐಡೆಲ್ ಸ್ಟಾಪ್ ಮತ್ತು ಗೋ ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಹೊಸ ತಂತ್ರಜ್ಞಾನದ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ.

Hyundai i20 facelift (1)

ಇನ್ನು ಹೊಸ ಐ20 ಕಾರು ಮಾದರಿಯು ಹೊರ ಮತ್ತು ಒಳಭಾಗದಲ್ಲಿ ನವೀಕರಿಸಿದ ವಿನ್ಯಾಸ ಹೊಂದಿದ್ದು, ಹೊಸ ವಿನ್ಯಾಸದ ಎಲ್ಇಡಿ ಹೆಡ್ ಲ್ಯಾಂಪ್ ಗಳು, ಎಲ್ಇಡಿ ಡಿಆರ್ ಎಲ್ ಮತ್ತು ಮರುವಿನ್ಯಾಸಗೊಳಿಸಲಾದ ಫ್ರಂಟ್ ಅಂಡ್ ರಿಯರ್ ಬಂಪರ್ ಪಡೆದುಕೊಂಡಿದೆ. ಜೊತೆಗೆ ಹೊಸ ಕಾರಿನಲ್ಲಿ ಏರೋಡೈನಾಮಿಕ್ ವಿನ್ಯಾಸದ 16 ಇಂಚಿನ ಅಲಾಯ್ ವ್ಹೀಲ್ ಗಳನ್ನು ಪಡೆದುಕೊಂಡಿದ್ದು, ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಹೊಸ ಕಾರಿನಲ್ಲಿ ಆಕರ್ಷಕವಾದ ಡ್ಯಾಶ್ ಬೋರ್ಡ್ ನೊಂದಿಗೆ ಲೆದರ್ ಹೊದಿಕೆ ಹೊಂದಿರುವ ಡಿ ಕಟ್ ಸ್ಟೀರಿಂಗ್ ವ್ಹೀಲ್, ಡೋರ್ ಆರ್ಮ್ ರೆಸ್ಟ್, ಬಾಷ್ ಪ್ರೀಮಿಯಂ ಸೌಂಡ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, 52 ಹಿಂಗ್ಲಿಷ್(ಹಿಂದಿ ಮತ್ತು ಇಂಗ್ಲಿಷ್ ಮಿಶ್ರಿತ) ವಾಯ್ಸ್ ಕಮಾಂಡ್ ಗಳು, ಸಿ ಟೈರ್ ಫೋನ್ ಚಾರ್ಜರ್ ಮತ್ತು 60 ಕ್ಕೂ ಹೆಚ್ಚು ಕಾರ್ ಕನೆಕ್ಟಿವಿಟಿ ಸೌಲಭ್ಯಗಳಿವೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

Hyundai i20 facelift (2)

ಹ್ಯುಂಡೈ ಕಂಪನಿಯು ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಕಾರಿನಲ್ಲಿ ಇದೀಗ 26 ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ. ಇದರಲ್ಲಿ 6 ಏರ್ ಬ್ಯಾಗ್ ಗಳು, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್ಮೆಂಟ್, ಎಬಿಎಸ್, ಎಲೆಕ್ಟ್ರಾನಿಕ್ ಬ್ರೇಕ್ ಡಿಸ್ಟ್ರಿಬ್ಯೂಷನ್ ಸೇರಿದಂತೆ ಎರ್ಮಜೆನ್ಸಿ ಸ್ಟಾಪ್ ಸಿಗ್ನಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಫೀಚರ್ಸ್ ನೀಡಲಾಗಿದೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ