Hydrogen Fuel Cell Bus: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ

ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಮೊದಲ ಹಸಿರು ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

Hydrogen Fuel Cell Bus: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ
ಹೈಡ್ರೋಜನ್ ಇಂಧನ ಚಾಲಿತ ಬಸ್
Follow us
Praveen Sannamani
|

Updated on: Sep 25, 2023 | 4:59 PM

ಭಾರತ ಸರ್ಕಾರವು ನವೀಕರಿಸಬಹುದಾದ ಶಕ್ತಿಯ ಮೂಲಗಳನ್ನು ಬಳಸಿಕೊಂಡು ಹಸಿರು ಚಲನಶೀಲತೆಯತ್ತ ಮಹತ್ವದ ದಾಪುಗಾಲು ಹಾಕುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಹಸಿರು ಹೈಡ್ರೋಜನ್ ಇಂಧನ ಚಾಲಿತ(Green Hydrogen Fuel Cell) ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ದೇಶದ ಮೊದಲ ಹಸಿರು ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇದು ಸಾರ್ವಜನಿಕ ಸಾರಿಗೆ ವಲಯದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗುತ್ತಿದೆ.

ದೆಹಲಿಯ ಕರ್ತವ್ಯ ಪಥ್‌ನಲ್ಲಿ ಭಾರತದ ಮೊದಲ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಳಕೆಯ ಬಸ್ ಸಂಚಾರಕ್ಕೆ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಇದು ಆಮದು ಮಾಡಲಾಗುವ ಇಂಧನಗಳ ಮೇಲಿನ ಅವಲಂಬನೆ ತಗ್ಗಿಸುವುದರ ಜೊತೆಗೆ ಮಾಲಿನ್ಯ ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

Hydrogen Fuel Cell Bus (1)

ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಆಯ್ದ ಮಾರ್ಗಗಳಲ್ಲಿ ಒಟ್ಟು 15 ಹಸಿರು ಹೈಡ್ರೋಜನ್‌ನಿಂದ ಚಾಲಿತವಾಗುವ ಬಸ್‌ಗಳನ್ನು ಪ್ರಾಯೋಗಿಕವಾಗಿ ಸಂಚರಿಸಲಿದ್ದು, ಇಂಡಿಯನ್ ಆಯಿಲ್‌ ಕಂಪನಿಯ ಪ್ರಯತ್ನಗಳ ಭಾಗವಾಗಿ ಹೊಸ ಯೋಜನೆಗೆ ಚಾಲನೆ ನೀಡಲಾಗಿದೆ. ಫರಿದಾಬಾದ್‌ನಲ್ಲಿರುವ ಇಂಡಿಯನ್ ಆಯಿಲ್‌ ಆರ್ ಅಂಡ್ ಡಿ ಕ್ಯಾಂಪಸ್‌ನಲ್ಲಿ ಹೈಡ್ರೋಜನ್‌ ಬಸ್ ಗಳಿಗೆ ಇಂಧನ ತುಂಬುವ ಸೌಲಭ್ಯವನ್ನು ಸ್ಥಾಪಿಸಲಾಗಿದ್ದು, ಇದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

ಹೈಡ್ರೋಜನ್ ಇಂಧನ ಚಾಲಿತ ಬಸ್ ಗಳಿಗೆ ಸೌರ ಪಿವಿ ಪ್ಯಾನೆಲ್‌ಗಳನ್ನು ಬಳಸಿಕೊಂಡು ವಿದ್ಯುದ್ವಿಭಜನೆಯ ಮೂಲಕ ಉತ್ಪಾದಿಸಲಾದ ಹಸಿರು ಹೈಡ್ರೋಜನ್ ಇಂಧನವನ್ನು ತುಂಬಿಸಲಿದ್ದು, ಹೈಡ್ರೋಜನ್ ಇಂಧನವನ್ನು ಹೆಚ್ಚಿನ ಒತ್ತಡದಲ್ಲಿ ಅಂದರೆ 350 ಬಾರ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಇಂಧನ ಕೋಶಗಳಲ್ಲಿನ ಎಲೆಕ್ಟ್ರೋ-ರಾಸಾಯನಿಕ ಪ್ರಕ್ರಿಯೆಯು ಹೈಡ್ರೋಜನ್ ಮತ್ತು ಆಮ್ಲಜನಕವು ನೀರಿಗೆ ಪರಿಣಾಮಕಾರಿಯಾಗಿ ಪರಿವರ್ತಿಸುವ ಮೂಲಕ ಅದು ವಿದ್ಯುತ್ ಶಕ್ತಿಯನ್ನು ಉತ್ಪಾದಿಸುತ್ತದೆ.

Hydrogen Fuel Cell Bus (3)

ಜೊತೆಗೆ ಹೈಡ್ರೋಜನ್ ಇಂಧನ ಚಾಲಿತ ಬಸ್ ಗಳು ಬ್ಯಾಟರಿ ಚಾಲಿತ ಬಸ್ ಸಂಚಾರಕ್ಕೆ ಹೋಲಿಸಿದರೆ ದೀರ್ಘ ಶ್ರೇಣಿ ಮತ್ತು ಕಡಿಮೆ ಇಂಧನದಂತಹ ಪ್ರಯೋಜನಗಳನ್ನು ಹೊಂದಿರಲಿದ್ದು, ಈ ಮೂಲಕ ಇಂಧನ ಚಾಲಿತ ವಾಹನಗಳ ಬಳಕೆಯನ್ನು ಹಂತ ಹಂತವಾಗಿ ತಗ್ಗಿಸಲು ನೆರವಾಗಲಿದೆ.

ಇದನ್ನೂ ಓದಿ: ಹೊಸ ಕಾರುಗಳಿಗೆ ಕಡ್ಡಾಯ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಜಾರಿ

ಸದ್ಯಕ್ಕೆ ಇಂಡಿಯನ್ ಆಯಿಲ್‌ ಕಂಪನಿಯು ಒಟ್ಟು 15 ಹಸಿರು ಹೈಡ್ರೋಜನ್‌ ಬಸ್ ಗಳ ಮೂಲಕ ಬರೋಬ್ಬರಿ 3 ಲಕ್ಷ ಕಿ.ಮೀ ಸಂಚಾರವನ್ನು ಪ್ರಾಯೋಗಿಕವಾಗಿ ನಡೆಸುವ ಯೋಜನೆ ಹೊಂದಿದ್ದು, ಹೊಸ ಪ್ರಯೋಗದಲ್ಲಿ ಸಂಗ್ರಹಿಸಲಾದ ಡೇಟಾ ಆಧರಿಸಿ ಮುಂಬರುವ ದಿನಗಳಲ್ಲಿ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರದ ಮಾರ್ಗಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ