Kia Seltos facelift: ವಿನೂತನ ಫೀಚರ್ಸ್ ಗಳೊಂದಿಗೆ ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್ ಅನಾವರಣ

ಕಿಯಾ ಇಂಡಿಯಾ ಕಂಪನಿಯು ತನ್ನ ನವೀಕೃತ ಸೆಲ್ಟೊಸ್ ಫೇಸ್ ಲಿಫ್ಟ್ ಆವೃತ್ತಿಯನ್ನು ವಿಶೇಷ ಫೀಚರ್ಸ್ ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಳಿಸಿದೆ.

Kia Seltos facelift: ವಿನೂತನ ಫೀಚರ್ಸ್ ಗಳೊಂದಿಗೆ ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್ ಅನಾವರಣ
ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್ ಅನಾವರಣ
Follow us
Praveen Sannamani
|

Updated on:Jul 04, 2023 | 6:51 PM

ಮಧ್ಯಮ ಕ್ರಮಾಂಕದ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕಿಯಾ ಇಂಡಿಯಾ(Kia India) ಕಂಪನಿಯು ತನ್ನ ಜನಪ್ರಿಯ ಸೆಲ್ಟೊಸ್ ಕಂಪ್ಯಾಕ್ಟ್ ಎಸ್ ಯುವಿಯ ಫೇಸ್ ಲಿಫ್ಟ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನಿಟ್ಟಿನಲ್ಲಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

2023ರ ಸೆಲ್ಟೊಸ್ ಅನಾವರಣದೊಂದಿಗೆ ಕಿಯಾ ಕಂಪನಿಯು ಇದೇ ತಿಂಗಳು 15ರಂದು ಅಧಿಕೃತ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಿದ್ದು, ಹೊಸ ಕಾರಿನ ಬೆಲೆಯನ್ನು ಈ ತಿಂಗಳಾಂತ್ಯಕ್ಕೆ ಇಲ್ಲವೇ ಅಗಸ್ಟ್ ಆರಂಭದಲ್ಲಿ ಘೋಷಣೆ ಮಾಡಬಹುದಾಗಿದೆ. ಹೊಸ ಕಾರು ಈ ಹಿಂದಿನ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬದಲಾವಣೆಗಳೊಂದಿಗೆ ಬಲಿಷ್ಠವಾದ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

Kia Seltos facelift (1)

ಸೆಲ್ಟೊಸ್ ಫೇಸ್ ಲಿಫ್ಟ್ ವಿಶೇಷತೆಗಳೇನು?

ಹೊಸ ಸೆಲ್ಟೊಸ್ ಆವೃತ್ತಿಯಲ್ಲಿ ಕಿಯಾ ಕಂಪನಿಯು ಬದಲಾವಣೆಗೊಳಿಸಲಾದ ಸ್ಪೋರ್ಟಿ ಮುಂಭಾಗದ ವಿನ್ಯಾಸದೊಂದಿಗೆ ಬಂಪರ್, ಗ್ರಿಲ್ ಮತ್ತು ಆಲ್ ಎಲ್ಇಡಿ ಲೈಟಿಂಗ್ಸ್, ಅಲಾಯ್ ವ್ಹೀಲ್, ಲೈಟ್ ಬಾರ್ ನೀಡಲಾಗಿದ್ದು, ಇದರಲ್ಲಿ ಹೈ ಎಂಡ್ ವೆರಿಯೆಂಟ್ ಎಕ್ಸ್ ಲೈನ್ ಆವೃತ್ತಿಗಳು ತುಸು ಹೆಚ್ಚಿನ ಮಟ್ಟದ ಫೀಚರ್ಸ್ ಪಡೆದುಕೊಂಡಿರಲಿವೆ.

ಇದನ್ನೂ ಓದಿ: ವಿನೂತನ ಹೋಂಡಾ ಎಲಿವೇಟ್ ಎಸ್ ಯುವಿ ಬುಕಿಂಗ್ ಶುರು

ಹಾಗೆಯೇ ಹೊಸ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಡ್ಯುಯಲ್ ಕನೆಕ್ಟ್ ಡಿಸ್ ಪ್ಲೇ, ಹೊಸ ಡ್ಯಾಶ್ ಬೋರ್ಡ್, ಇನ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸರ್ಪೊಟ್ ಹೊಂದಿರುವ ಇನ್ಪೋಟೈನ್ ಮೆಂಟ್ ಸಿಸ್ಟಂ, ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಏರ್ ಕಂಡಿಷನರ್, ಪನೊರಮಿಕ್ ಸನ್ ರೂಫ್‌, ವೈರ್ ಲೆಸ್ ಚಾರ್ಜರ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

Kia Seltos facelift (2)

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸೆಲ್ಟೊಸ್ ಕಾರಿನಲ್ಲಿ ಕಿಯಾ ಕಂಪನಿಯು 1.5 ಲೀಟರ್ ಟರ್ಬೊ ಪೆಟ್ರೋಲ್, 1.5 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ ಪೆಟ್ರೋಲ್ ಟರ್ಬೊ ಆವೃತ್ತಿಯು ಡ್ಯುಯಲ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಇಲ್ಲವೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 158 ಹಾರ್ಸ್ ಪವರ್ ಮತ್ತು 253 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಸಾಮಾನ್ಯ ಎನ್ಎ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಇಲ್ಲವೆ 6-ಸ್ಪೀಡ್ ಐಎಂಟಿ ಗೇರ್ ಬಾಕ್ಸ್ ನೊಂದಿಗೆ 113 ಹಾರ್ಸ್ ಪವರ್ ಮತ್ತು 144 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹಾಗೆಯೇ 1.5 ಲೀಟರ್ ಟರ್ಬೊ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಇಲ್ಲವೆ 6-ಸ್ಪೀಡ್ ಐಎಂಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 114 ಹಾರ್ಸ್ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಇದು ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಇದನ್ನೂ ಓದಿ: ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

Kia Seltos facelift (3)

ಸುರಕ್ಷಾ ಸೌಲಭ್ಯಗಳು

ಹೊಸ ಸೆಲ್ಟೊಸ್ ಕಾರಿನಲ್ಲಿ ಕಿಯಾ ಕಂಪನಿಯು ಈ ಬಾರಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಮೊದಲ ಬಾರಿಗೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ(ADAS) ಜೋಡಣೆ ಮಾಡಿದೆ. ಎಡಿಎಎಸ್ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆ ನೀಡಲಿದ್ದು, ಇದರಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೊಲ್, ಲೇನ್ ಕೀಪ್ ಅಸಿಸ್ಟ್, ಬ್ಲೈಡ್ ಸ್ಪಾಟ್ ಕೂಲಿಷನ್ ವಾರ್ನಿಂಗ್, ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.

ಈ ಮೂಲಕ ಹೊಸ ಕಾರು ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಫೋಕ್ಸ್ ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ಎಡಿಎಎಸ್ ಫೀಚರ್ಸ್ ಹೊಂದಿರುವ ಆವೃತ್ತಿಯು ತುಸು ದುಬಾರಿ ಎನ್ನಿಸಲಿದೆ.

Published On - 6:46 pm, Tue, 4 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ