Kia Sonet: ಕಂಪ್ಯಾಕ್ಟ್ ಎಸ್ಯುವಿ ವಿಭಾಗದಲ್ಲಿ ಕಿಯಾ ಸೊನೆಟ್ ಹೊಸ ಮೈಲಿಗಲ್ಲು
ಭಾರತದಲ್ಲಿ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಮಾರಾಟ ವಿಭಾಗವು ತೀವ್ರವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಈ ವಿಭಾಗದಲ್ಲಿ ಕಿಯಾ ಸೊನೆಟ್ ಹೊಸ ಮೈಲಿಗಲ್ಲು ಸಾಧಿಸಿದೆ.
ದೇಶಿಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್ಯುವಿ ಮಾರಾಟವು ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಕಿಯಾ ಸೊನೆಟ್ (Kia Sonet) ಕಾರು ಮಾದರಿಯು ಭರ್ಜರಿ ಬೇಡಿಕೆಯೊಂದಿಗೆ ಶೇ.14 ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡಿದೆ. ಭಾರತದಲ್ಲಿ ಬಿಡುಗಡೆಯಾದ ಕೇವಲ 4 ವರ್ಷಗಳಲ್ಲಿ ಬರೋಬ್ಬರಿ 4 ಲಕ್ಷ ಯುನಿಟ್ ಮಾರಾಟಗೊಂಡಿದ್ದು, ಟಾಪ್ 10 ಸ್ಥಾನದಲ್ಲಿ ನಿರಂತರವಾಗಿ ಮುನ್ನಡೆಯುತ್ತಿದೆ.
2020ರ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಿದ್ದ ಕಿಯಾ ಸೊನೆಟ್ ಕಾರು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಮಾರುಕಟ್ಟೆಗಳಿಗೆ ಇಲ್ಲಿಂದಲೇ ರಫ್ತುಗೊಳ್ಳುತ್ತಿದ್ದು, ಒಟ್ಟು 4 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲು ಸಾಧಿಸಿದೆ. 4 ಲಕ್ಷ ಯುನಿಟ್ ನಲ್ಲಿ 3,17,754 ಯುನಿಟ್ ಗಳು ಭಾರತದಲ್ಲಿ ಮಾರಾಟಗೊಂಡಿದ್ದರೆ ಇನ್ನುಳಿದ 85,814 ಯುನಿಟ್ ಗಳು ರಫ್ತುಗೊಳ್ಳುವ ಮೂಲಕ ವಿದೇಶಿ ಮಾರುಕಟ್ಟೆಯಲ್ಲೂ ಸದ್ದು ಮಾಡುತ್ತಿದೆ.
ವಿಶೇಷ ಫೀಚರ್ಸ್ ಮತ್ತು ಆಕರ್ಷಕ ಬೆಲೆ ಹೊಂದಿರುವ ಸೊನೆಟ್ ಕಾರು ಸದ್ಯ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ವಿವಿಧ ವೆರಿಯೆಂಟ್ ಗಳೊಂದಿಗೆ ಮಾರಾಟಗೊಳ್ಳುತ್ತಿದೆ. ಇತ್ತೀಚೆಗೆ ಇದು ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೊಂಡಿದ್ದು, ಇದರಲ್ಲಿ 1.2 ಲೀಟರ್ ಎನ್ಎ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.
ಇದನ್ನೂ ಓದಿ: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭರ್ಜರಿ ರೇಟಿಂಗ್ಸ್ ಪಡೆದುಕೊಂಡ ಹೊಸ ಮಾರುತಿ ಸುಜುಕಿ ಸ್ವಿಫ್ಟ್
ಹೊಸ ವಿನ್ಯಾಸದೊಂದಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಹೊಂದಿರುವ ಸೊನೆಟ್ ಫೇಸ್‌ಲಿಫ್ಟ್ ಕಾರು ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಾನೆಟ್ ಮತ್ತು ಬಂಪರ್ ನೊಂದಿಗೆ ಹೊಸ ಎಲ್ಇಡಿ ಹೆಡ್ ಲೈಟ್ಸ್ ಯುನಿಟ್ ಹೊಂದಿದೆ. ಜೊತೆಗೆ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ಲಂಬಾಕಾರವಾಗಿರುವ ಎಲ್ಇಡಿ ಫಾಗ್ ಲೈಟ್ಸ್, 16 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಬದಿಯಲ್ಲಿ ಎಲ್ಇಡಿ ಲೈಟ್ ಬಾರ್, ಸಿ ಆಕಾರದ ಟೈಲ್ ಲೈಟ್ ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಪಡೆದುಕೊಂಡಿದೆ. ಇದರೊಂದಿಗೆ ಹೊಸ ಕಾರು ಒಟ್ಟು 8 ಮೊನೊಟೊನ್ ಮತ್ತು 2 ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿದ್ದು, ಕಾರಿನ ಒಳಭಾಗದಲ್ಲೂ ಭಾರೀ ಬದಲಾವಣೆ ಪಡೆದುಕೊಂಡಿದೆ.
ಸೊನೆಟ್ ಫೇಸ್ ಲಿಫ್ಟ್ ಕಾರಿನ ಒಳಭಾಗದಲ್ಲಿ ಕಿಯಾ ಕಂಪನಿಯು ಸೆಲ್ಟೊಸ್ ಕಾರಿನಲ್ಲಿರುವಂತೆ 10.25 ಇಂಚಿನ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಣ್ಣದಾದ ಕ್ಲೈಮೆಟ್ ಕಂಟ್ರೋಲ್ ಡಿಸ್ ಪ್ಲೇ, ಹ್ವಾಕ್ ಕಂಟ್ರೋಲ್ ಯುನಿಟ್, ಟ್ರಾಕ್ಷನ್ ಕಂಟ್ರೋಲ್, ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಅರಾಮದಾಯಕವಾದ ಆಸನ ಸೌಲಭ್ಯವನ್ನು ನೀಡಲಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಈ ಭಾರೀ ಮತ್ತೊಂದು ಬದಲಾವಣೆ ಅಂದ್ರೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗಿದೆ. ಇದು ಸೆನ್ಸಾರ್ ಮತ್ತು ರಡಾರ್ ಸೌಲಭ್ಯಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯಲು ಸಾಕಷ್ಟು ಸಹಕಾರಿಯಾಗಿದ್ದು, ಎಡಿಎಎಸ್ ಪ್ಯಾಕೇಜ್ ನಲ್ಲಿ ಫಾರ್ವಡ್ ಕೂಲಿಷನ್ ವಾರ್ನಿಂಗ್, ಲೇನ್ ಡಿಪಾರ್ಚರ್ ವಾರ್ನಿಂಗ್, ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ಲೇನ್ ಕೀಪ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ ಜನಪ್ರಿಯವಾಗಿರುವ ಟಾಪ್ 5 ಕಳಪೆ ಕಾರುಗಳಿವು!
ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಎಡಿಎಎಸ್ ಜೊತೆಗೆ ಈ ಬಾರಿ ಆರು ಏರ್ ಬ್ಯಾಗ್ ಗಳು, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕಾರ್ನರಿಂಗ್ ಲ್ಯಾಂಪ್ಸ್, ನಾಲ್ಕು ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್, 360 ಡಿಗ್ರಿ ಕ್ಯಾಮೆರಾ ಮತ್ತು ಬ್ಲೈಂಡ್ ವ್ಯೂ ಮಾನಿಟರ್ ಸೌಲಭ್ಯಗಳನ್ನು ಜೋಡಿಸಲಾಗಿದೆ. ಇದಲ್ಲದೆ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ಹೆಚ್ಚುವರಿಯಾಗಿ ಕೂಲ್ಡ್ ಫ್ರಂಟ್ ಸೀಟ್ ಗಳು, ಬಾಷ್ ಆಡಿಯೋ ಸಿಸ್ಟಂ, ಸನ್ ರೂಫ್, ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ನೀಡಲಾಗಿದೆ. ಈ ಮೂಲಕ ಇದು ಎಕ್ಸ್ ಶೋರೂಂ ಪ್ರಕಾರ ಇದು ರೂ. 7.99 ಲಕ್ಷದಿಂದ ರೂ. 15.75 ಲಕ್ಷ ಬೆಲೆ ಹೊಂದಿದೆ.
Published On - 5:31 pm, Fri, 26 April 24