AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಮೈಲೇಜ್ ನೀಡುತ್ತೆ ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್‌

ಕಿಯಾ ಕಂಪನಿಯು ಇಂದೇ ತಿಂಗಳಾಂತ್ಯಕ್ಕೆ ತನ್ನ ಹೊಸ ಸೊನೆಟ್ ಫೇಸ್‌ಲಿಫ್ಟ್‌ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಿಡುಗಡೆಗೂ ಮುನ್ನ ಹೊಸ ಕಾರಿನ ಅಧಿಕೃತ ಇಂಧನ ದಕ್ಷತೆಯ ಮಾಹಿತಿಯನ್ನು ಹಂಚಿಕೊಂಡಿದೆ.

ಭರ್ಜರಿ ಮೈಲೇಜ್ ನೀಡುತ್ತೆ ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್‌
ಕಿಯಾ ಸೊನೆಟ್ ಫೇಸ್‌ಲಿಫ್ಟ್‌
Praveen Sannamani
|

Updated on:Jan 09, 2024 | 7:53 PM

Share

ಮಧ್ಯಮ ಗಾತ್ರದ ಪ್ರೀಮಿಯಂ ಕಾರು ಮಾದರಿಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿರುವ ಕಿಯಾ (KIA) ಕಂಪನಿಯು ಇದೇ ತಿಂಗಳಾಂತ್ಯಕ್ಕೆ ಹೊಸ ಸೊನೆಟ್ ಫೇಸ್‌ಲಿಫ್ಟ್‌ (Sonet facelift) ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಹೊಸ ಕಾರು ಖರೀದಿಗಾಗಿ ಈಗಾಗಲೇ ಬುಕಿಂಗ್ ಆರಂಭಿಸಿರುವ ಕಿಯಾ ಕಂಪನಿ ಅಧಿಕೃತ ಇಂಧನ ದಕ್ಷತೆ ಮಾಹಿತಿ ಹಂಚಿಕೊಳ್ಳುವ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ಸುಳಿವು ನೀಡಿದೆ.

ಸೊನೆಟ್ ಫೇಸ್‌ಲಿಫ್ಟ್‌ ನಲ್ಲಿ ಗ್ರಾಹಕರ ಆದ್ಯತೆಗೆ ಅನುಗುಣವಾಗಿ ಹಿಂದಿನ 1.2 ಲೀಟರ್ ಎನ್ಎ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಇವು ಬಿಎಸ್ 6 2ನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡಗಳೊಂದಿಗೆ ಉತ್ತಮ ಇಂಧನ ದಕ್ಷತೆ ಹೊಂದಿವೆ. ಹೊಸ ಕಾರಿನಲ್ಲಿರುವ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಪ್ರೇರಿತ 1.2 ಲೀಟರ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ 18.83 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಐಎಂಟಿ ಮಾದರಿಯು 18.7 ಕಿ.ಮೀ ಮತ್ತು ಡಿಸಿಟಿ ಮಾದರಿಯು 19.2 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ಮೊದಲ ಬಾರಿಗೆ ಹೊಸ ಕಾರು ಖರೀದಿಸಿದ್ದೀರಾ? ಹಾಗಾದ್ರೆ ಈ ಟಿಪ್ಸ್ ತಪ್ಪದೇ ಪಾಲಿಸಿ..

ಹೊಸ ಕಾರಿನಲ್ಲಿರುವ 1.5 ಲೀಟರ್ ಡೀಸೆಲ್ 6-ಸ್ಪೀಡ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್ ಗೆ 22.3 ಕಿ.ಮೀ ಮೈಲೇಜ್ ನೀಡದರೆ ಆಟೋಮ್ಯಾಟಿಕ್ ಮಾದರಿಯು 18.6 ಕಿ.ಮೀ ಮೈಲೇಜ್ ನೀಡಲಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಭರ್ಜರಿ ಸೇಫ್ಟಿ ಫೀಚರ್ಸ್ ಹೊಂದಿರಲಿದೆ.

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಇದು ಸೆನ್ಸಾರ್ ಮತ್ತು ರಡಾರ್ ಸೌಲಭ್ಯಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯಲು ಸಾಕಷ್ಟು ಸಹಕಾರಿಯಾಗಿದೆ. ಹೊಸ ಎಡಿಎಎಸ್ ಸೌಲಭ್ಯವನ್ನು ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ವೆನ್ಯೂನಲ್ಲೂ ಈಗಾಗಲೇ ನೀಡಲಾಗಿದ್ದು, ಎಡಿಎಎಸ್ ಪ್ಯಾಕೇಜ್ ನಲ್ಲಿ ಫಾರ್ವಡ್ ಕೂಲಿಷನ್ ವಾರ್ನಿಂಗ್, ಲೇನ್ ಡಿಪಾರ್ಚರ್ ವಾರ್ನಿಂಗ್, ಫಾರ್ವಡ್ ಕೂಲಿಷನ್ ಅವಾಯ್ಡ್ಡೆನ್ಸ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್ ಸೌಲಭ್ಯಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಸಾಮಾನ್ಯ ವಾಹನಗಳಿಂತಲೂ ಎಲೆಕ್ಟ್ರಿಕ್ ವಾಹನಗಳ ಇನ್ಸುರೆನ್ಸ್ ಯಾಕೆ ದುಬಾರಿ ಗೊತ್ತಾ?

ಎಡಿಎಎಸ್ ಜೊತೆಗೆ ಹೊಸ ಕಾರಿನಲ್ಲಿ ಈ ಬಾರಿ ಆರು ಏರ್ ಬ್ಯಾಗ್ ಗಳು, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕಾರ್ನರಿಂಗ್ ಲ್ಯಾಂಪ್ಸ್, ನಾಲ್ಕು ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ವ್ಯೂ ಮಾನಿಟರ್ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದಲ್ಲದೆ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ಹೆಚ್ಚುವರಿಯಾಗಿ ಕೂಲ್ಡ್ ಫ್ರಂಟ್ ಸೀಟ್ ಗಳು, ಬಾಷ್ ಆಡಿಯೋ ಸಿಸ್ಟಂ, ಸನ್ ರೂಫ್, ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ನೀಡಲಾಗಿದೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Published On - 7:53 pm, Tue, 9 January 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ