ಎಡಿಎಎಸ್ ಫೀಚರ್ಸ್ ಹೊಂದಿರುವ ಕಿಯಾ ಸೊನೆಟ್ ಫೇಸ್‌ಲಿಫ್ಟ್‌ ಮೊದಲ ಟೀಸರ್ ಬಹಿರಂಗ

|

Updated on: Dec 03, 2023 | 3:23 PM

ಕಿಯಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಸೊನೆಟ್ ಫೇಸ್‌ಲಿಫ್ಟ್‌ ಆವೃತ್ತಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಟೀಸರ್ ಪ್ರಕಟಿಸಿ ಗ್ರಾಹಕರಲ್ಲಿ ಕುತೂಹಲ ಮೂಡಿಸಿದೆ.

ಎಡಿಎಎಸ್ ಫೀಚರ್ಸ್ ಹೊಂದಿರುವ ಕಿಯಾ ಸೊನೆಟ್ ಫೇಸ್‌ಲಿಫ್ಟ್‌ ಮೊದಲ ಟೀಸರ್ ಬಹಿರಂಗ
ಕಿಯಾ ಸೊನೆಟ್ ಫೇಸ್‌ಲಿಫ್ಟ್‌
Follow us on

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಕಿಯಾ ಇಂಡಿಯಾ (Kia India) ಕಂಪನಿಯು ಶೀಘ್ರದಲ್ಲಿಯೇ ತನ್ನ ಸೊನೆಟ್ ಫೇಸ್‌ಲಿಫ್ಟ್‌ (Sonet facelift) ಆವೃತ್ತಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯು ಶೀಘ್ರದಲ್ಲಿಯೇ ಹಲವಾರು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಸೊನೆಟ್ ಫೇಸ್‌ಲಿಫ್ಟ್‌ ಮಾದರಿಯು ಇದೇ ತಿಂಗಳು 14ರಂದು ಅಧಿಕೃತವಾಗಿ ಬಿಡುಗಡೆಯಾಗುತ್ತಿದೆ ಎನ್ನಲಾಗಿದ್ದು, ಜನವರಿ ಆರಂಭದಲ್ಲಿ ಗ್ರಾಹಕರಿಗೆ ವಿತರಣೆಯಾಗುವ ಸಾಧ್ಯತೆಗಳಿವೆ. ಹೊಸ ಕಾರು ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ ಮತ್ತು ಹ್ಯುಂಡೈ ವೆನ್ಯೂ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಜಿಟಿ ಲೈನ್‌ ಮತ್ತು ಹೆಚ್‌ಟಿ ಲೈನ್‌ ವೆರಿಯೆಂಟ್‌ಗಳನ್ನು ಹೊಂದಿರುವ ಸೊನೆಟ್ ಕಾರು ಭಾರತದಲ್ಲಿ ಇದುವರೆಗೆ ಸುಮಾರು 3 ಲಕ್ಷಕ್ಕೂ ಹೆಚ್ಚು ಯುನಿಟ್ ಗಳ ಮಾರಾಟ ದಾಖಲೆ ಹೊಂದಿದ್ದು, ಈ ಬಾರಿ ಹೊಸ ಮಾದರಿಯೊಂದಿಗೆ ಮತ್ತಷ್ಟು ಸ್ಪೋರ್ಟಿಯಾಗಿರುವ ಫ್ರಂಟ್ ಗ್ರಿಲ್, ಮರುವಿನ್ಯಾಸಗೊಳಿಸಲಾದ ಫಾಗ್ ಲ್ಯಾಂಪ್ ಕನ್ಸೊಲ್, ಮರುವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್ ಲ್ಯಾಂಪ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಖರೀದಿಸಬಹುದಾದ ಅತ್ಯುತ್ತಮ 7 ಸೀಟರ್ ಕಾರುಗಳಿವು!

ಹೊಸ ಕಾರಿನ ಒಳಾಂಗಣದಲ್ಲೂ ಸಾಕಷ್ಟು ಬದಲಾವಣೆ ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಡ್ಯಾಶ್ ಬೋರ್ಡ್, ಸ್ಪೋರ್ಟಿಯಾಗಿರುವ ಆಸನಗಳು, ದೊಡ್ಡದಾದ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಹೊಸ ಫೀಚರ್ಸ್ ಹೊಂದಿರುವ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿರಲಿದೆ. ಈ ಮೂಲಕ ಕಾರು ಪ್ರಯಾಣವನ್ನು ಮತ್ತಷ್ಟು ಅರಾಮದಾಯಕಗೊಳಿಸುವ ಹೊಸ ಕಾರು ಪ್ರತಿಸ್ಪರ್ಧಿ ಗ್ರಾಹಕರನ್ನು ಸೆಳೆಯಲಿದೆ.

ಮತ್ತೊಂದು ಮಹತ್ವದ ಬದಲಾವಣೆಯೆಂದರೆ ಹೊಸ ಕಾರಿನಲ್ಲಿ ಈ ಬಾರಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಜೋಡಣೆ ಮಾಡಲಾಗುತ್ತಿದೆ. ಹೊಸ ಎಡಿಎಎಸ್ ಸುರಕ್ಷಾ ಸೌಲಭ್ಯವನ್ನು ಸೊನೆಟ್ ಕಾರಿನ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ನೀಡಬಹುದಾಗಿದ್ದು, ಇದು ಕಾರು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡುವ ಮೂಲಕ ಅಪಘಾತದ ತೀವ್ರತೆಯನ್ನು ತಡೆಯಲು ಸಹಕಾರಿಯಾಗಲಿದೆ.

ಎಡಿಎಎಸ್ ಸೌಲಭ್ಯವನ್ನು ಹ್ಯುಂಡೈ ಕಂಪನಿಯು ಈಗಾಗಲೇ ನವೀಕೃತ ವೆನ್ಯೂ ಕಾರಿನ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ನೀಡಿದ್ದು, ಇದೀಗ ಗ್ರಾಹಕರ ಬೇಡಿಕೆಯೆಂತೆ ಕಿಯಾ ಕಂಪನಿಯು ಸಹ ಸೊನೆಟ್ ಕಾರಿನಲ್ಲಿ ಜೋಡಣೆ ಮಾಡುತ್ತಿದೆ. ಹೊಸ ಸೇಫ್ಟಿ ಫೀಚರ್ಸ್ ಸೆನ್ಸಾರ್ ಮತ್ತು ರಡಾರ್ ಮೇಲೆ ಕಾರ್ಯನಿರ್ವಹಿಸಲಿದ್ದು, ಇದು ಚಾಲಕನ ಗಮನಕ್ಕೆ ಬಾರದೆ ಆಗಬಹುದಾದ ಅಪಘಾತಗಳನ್ನು ಎಚ್ಚರಿಸುವ ಮೂಲಕ ಅನಾಹುತಗಳನ್ನು ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತದೆ.

ಇದನ್ನೂ ಓದಿ: ಪೆಟ್ರೋಲ್ ಕಾರುಗಳು Vs ಪೆಟ್ರೋಲ್ ಸಿಎನ್‌ಜಿ ಕಾರುಗಳು.. ಖರೀದಿಗೆ ಯಾವುದು ಬೆಸ್ಟ್?

ಹೊಸ ಕಾರಿನಲ್ಲಿ ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ 1.2 ಲೀಟರ್ ಎನ್ಎ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ. ಹೊಸ ಎಂಜಿನ್ ಆಯ್ಕೆಯಲ್ಲಿ ಬಿಎಸ್ 6 2ನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಅಳವಡಿಸಲಾಗಿದ್ದು, ಇದು ಅತಿ ಕಡಿಮೆ ಮಾಲಿನ್ಯ ಹೊರಸೂವಿಕೆಯೊಂದಿಗೆ ಪರಿಸರ ಸ್ನೇಹಿಯಾಗಿದೆ ಎನ್ನಬಹುದು. ಇದರೊಂದಿಗೆ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ದುಬಾರಿಯಾಗಬಹುದಾಗಿದ್ದು, ಎಡಿಎಎಸ್ ಫೀಚರ್ಸ್ ಹೊಂದಿರುವ ಮಾದರಿಯು ಸುಮಾರು ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ ಎನ್ನಬಹುದು.