Kinetic e-Luna: ಕಡಿಮೆ ಬೆಲೆಯ ಕೈನೆಟಿಕ್ ಇ-ಲೂನಾ ಬಿಡುಗಡೆಗೆ ದಿನಾಂಕ ಫಿಕ್ಸ್

ಭಾರತೀಯ ಆಟೋ ಉದ್ಯಮದಲ್ಲಿ ಇತಿಹಾಸ ನಿರ್ಮಿಸಿದ್ದ ಕೈನೆಟಿಕ್ ಲೂನಾ ಇದೀಗ ಮರಳಿ ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುತ್ತಿರುವ ಹೊಸ ಇವಿ ಸ್ಕೂಟರ್ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Kinetic e-Luna: ಕಡಿಮೆ ಬೆಲೆಯ ಕೈನೆಟಿಕ್ ಇ-ಲೂನಾ ಬಿಡುಗಡೆಗೆ ದಿನಾಂಕ ಫಿಕ್ಸ್
ಕೈನೆಟಿಕ್ ಇ-ಲೂನಾ
Follow us
Praveen Sannamani
|

Updated on: Jan 30, 2024 | 5:19 PM

ಬಹುನೀರಿಕ್ಷಿತ ಕೈನೆಟಿಕ್ ಇ-ಲೂನಾ (Kinetic e-Luna) ಬಿಡುಗಡೆಗೆ ಸಿದ್ದವಾಗಿರುವ ಕೈನೆಟಿಕ್ ಗ್ರೀನ್ (Kinetic Green) ಕಂಪನಿಯು ಹೊಸ ಇವಿ ಮೊಪೆಡ್ ಮಾದರಿಯನ್ನು ಫೆಬ್ರವರಿ 7ರಂದು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದು, ಹೊಸ ಇವಿ ಮೊಪೆಡ್ ಆಕರ್ಷಕ ಬೆಲೆಯೊಂದಿಗೆ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದಿರಲಿದೆ.

ಹೊಸ ಕೈನೆಟಿಕ್ ಇ-ಲೂನಾ ಖರೀದಿಗಾಗಿ ಈಗಾಗಲೇ ರೂ. 500 ಮುಂಗಡದೊಂದಿಗೆ ಬುಕಿಂಗ್ ಆರಂಭಿಸಿರುವ ಕೈನೆಟಿಕ್ ಗ್ರೀನ್ ಕಂಪನಿ ಫೆಬ್ರವರಿ ಅಂತ್ಯಕ್ಕೆ ಇವಿ ಮೊಪೆಡ್ ವಿತರಿಸುವ ಭರವಸೆ ನೀಡಿದ್ದು, ಇದು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಇವಿ ಸ್ಕೂಟರ್ ಗಳಿಂತಲೂ ಕಡಿಮೆ ಬೆಲೆ ಮತ್ತು ಅತ್ಯುತ್ತಮ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಹೊಂದಿರಲಿದೆ.

ಇನ್ನೂ ಓದಿ: ಭರ್ಜರಿ ಫೀಚರ್ಸ್ ಹೊಂದಿರುವ ಎಥರ್ 450 ಅಪೆಕ್ಸ್ ಪ್ರೀಮಿಯಂ ಇವಿ ಸ್ಕೂಟರ್ ಬಿಡುಗಡೆ

ಕೈನೆಟಿಕ್ ಇ-ಲೂನಾ ಮಾದರಿಯು ಸಾಮಾನ್ಯ ಪೆಟ್ರೋಲ್ ಮಾದರಿಗಳಂತೆ ಗುಣಮಟ್ಟದ ಬಿಡಿಭಾಗಗಳೊಂದಿಗೆ ನಿರ್ಮಾಣಗೊಂಡಿದ್ದು, ಇದು ದಿನನಿತ್ಯದ ಸಂಚಾರ ಅನುಕೂಲಕರವಾಗುವ ಹಲವಾರು ಫೀಚರ್ಸ್ ಹೊಂದಿರಲಿದೆ. ಹೊಸ ಇವಿ ಮೊಪೆಡ್ ನಲ್ಲಿ ಗಂಟೆಗೆ 50 ಕಿಮೀ ಟಾಪ್ ಸ್ಪೀಡ್ ಹೊಂದಿರುವ ಎಲೆಕ್ಟ್ರಿಕ್ ಮೋಟಾರ್ ಜೋಡಿಸಲಾಗಿದ್ದು, ಪ್ರತಿ ಚಾರ್ಜ್ ಗೆ ಗರಿಷ್ಠ 110 ಕಿ.ಮೀ ಮೈಲೇಜ್ ನೀಡಬಹುದಾದ ಬ್ಯಾಟರಿ ಪ್ಯಾಕ್ ನೀಡಲಾಗಿದೆ.

ಫೇಮ್ 2 ಯೋಜನೆಯಡಿಯಲ್ಲಿ ಕೈನೆಟಿಕ್ ಇ-ಲೂನಾ ಖರೀದಿಗೆ ರಿಯಾಯಿತಿ ಸಹ ಸಿಗಲಿದ್ದು, ಇದು ಸುಮಾರು ರೂ. 70 ಸಾವಿರದಿಂದ ರೂ. 85 ಸಾವಿರ ತನಕ ಬೆಲೆ ಪಡೆಯಬಹುದಾಗಿದೆ. ಈ ಮೂಲಕ ಇದು ಬಜಾಜ್ ಚೇತಕ್ ಎಲೆಕ್ಟ್ರಿಕ್ ಮತ್ತು ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್ ಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಪೆಟ್ರೋಲ್ ಸ್ಕೂಟರ್ ಗಳಿಗೆ ಇದು ಉತ್ತಮ ಪೈಪೋಟಿ ನೀಡಲಿದೆ.

ಇನ್ನೂ ಓದಿ: ಹೀರೋ ವಿಡಾ ವಿ1 ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಖರೀದಿದಾರರಿಗೆ ಭರ್ಜರಿ ಆಫರ್

ಕೈನೆಟಿಕ್ ಗ್ರೀನ್ ಕಂಪನಿಯು ಹೊಸ ಕೈನೆಟಿಕ್ ಇ-ಲೂನಾವನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿರುವ ತನ್ನ ಹೊಸ ಉತ್ಪಾದನಾ ಸ್ಥಾವರದಲ್ಲಿ ತಯಾರಿಸುತ್ತಿದ್ದು, ಈ ಸ್ಥಾವರದಲ್ಲಿ ಪ್ರತಿ ತಿಂಗಳು ಸುಮಾರು 5 ಸಾವಿರ ಇ-ಲೂನಾವನ್ನು ಉತ್ಪಾದಿಸಲು ನಿರ್ಧರಿಸಲಾಗಿದೆ. ಹೀಗಾಗಿ ಹೊಸ ಇವಿ ಸ್ಕೂಟರ್ ಭಾರೀ ಪ್ರಮಾಣದಲ್ಲಿ ಮಾರಾಟವಾಗುವ ನೀರಿಕ್ಷೆಗಳಿದ್ದು, 90ರ ದಶಕದಲ್ಲಿ ತನ್ನ ಬೇಡಿಕೆಯನ್ನು ಮರಳಿ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ