Mahindra XUV700: ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಎಕ್ಸ್‌ಯುವಿ700 ಎಸ್ ಯುವಿ ಮಾದರಿಯು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

Follow us
Praveen Sannamani
|

Updated on: Jul 07, 2023 | 9:55 PM

ಮಹೀಂದ್ರಾ(Mahindra) ಕಂಪನಿಯು ಹೊಸ ಎಕ್ಸ್ ಯುವಿ700(XUV700) ಎಸ್ ಯುವಿ ಬಿಡುಗಡೆಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟಗೊಂಡಿದೆ. ಎಕ್ಸ್ ಯುವಿ700 ಕಾರು ಮಾದರಿ ಖರೀದಿಗಾಗಿ ಇದುವರೆಗೆ ಸುಮಾರು 2 ಲಕ್ಷಕ್ಕೂ ಹೆಚ್ಚು ಗ್ರಾಹಕರು ಬುಕಿಂಗ್ ದಾಖಲಿಸಿದ್ದು, ಉತ್ಪಾದನಾ ಪ್ರಮಾಣ ಆಧರಿಸಿ ಇದುವರೆಗೆ 1 ಲಕ್ಷ ಗ್ರಾಹಕರಿಗೆ ವಿತರಣೆ ಮಾಡಲಾಗಿದೆ.

2021ರ ಅಂತ್ಯದಲ್ಲಿ ಬಿಡುಗಡೆಗೊಂಡಿದ್ದ ಎಕ್ಸ್ ಯುವಿ700 ಕಾರು ಮಾದರಿಯು ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಬುಕಿಂಗ್ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿತ್ತು. ತದನಂತರದಲ್ಲಿ ಬುಕಿಂಗ್ ಪ್ರಮಾಣವು 2.50 ಲಕ್ಷಕ್ಕೂ ಅಧಿಕ ದಾಖಲಾಗಿದ್ದು, ಇದರಲ್ಲಿ ಇದೀಗ 1 ಲಕ್ಷ ಯುನಿಟ್ ಕಾರುಗಳನ್ನು ಅಧಿಕೃತವಾಗಿ ವಿತರಣೆ ಮಾಡಲಾಗಿದೆ. ಹೊಸ ಕಾರು ಖರೀದಿಗಾಗಿ ಕಂಪನಿಯು ವಿವಿಧ ವೆರಿಯೆಂಟ್ ಗಳನ್ನು ಆಧರಿಸಿ 7 ರಿಂದ 8 ತಿಂಗಳು ಕಾಯುವಿಕೆ ಅವಧಿಯನ್ನು ನಿಗದಿಪಡಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇನ್ವಿಕ್ಟೊ ಎಂಪಿವಿ ಬಿಡುಗಡೆ

ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಎಕ್ಸ್ ಯುವಿ700 ಕಾರು ಉತ್ಪಾದನೆಯನ್ನು ಪ್ರತಿ ತಿಂಗಳು 6 ಸಾವಿರ ಯುನಿಟ್ ನಿಂದ 8 ಸಾವಿರಕ್ಕೆ ಏರಿಕೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಖರೀದಿಗಾಗಿ ಕಾಯುವಿಕೆ ಅವಧಿಯು ತಗ್ಗುವ ನೀರಿಕ್ಷೆಗಳಿವೆ.

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.01 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 26.18 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದ್ದು, ಇದರಲ್ಲಿ 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 450-ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಇದನ್ನೂ ಓದಿ: ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಇನ್ನು ಎಕ್ಸ್‌ಯುವಿ700 ಮಾದರಿಯಲ್ಲಿ ಕಂಪನಿಯು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ವೆರಿಯೆಂಟ್‌ ಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಕಾರಿನಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿದೆ. ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಜೊತೆಗೆ 7 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?