Mahindra EV Plant: ಕರ್ನಾಟಕ ಕೈ ತಪ್ಪಿತು ರೂ. 10 ಸಾವಿರ ಕೋಟಿ ಮೌಲ್ಯದ ಮಹೀಂದ್ರಾ ಬೃಹತ್ ಯೋಜನೆ
ಮಹೀಂದ್ರಾ ಕಂಪನಿಯು ತನ್ನ ನ್ಯೂ ಜನರೇಷನ್ ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ಹೊಸ ಪ್ಲ್ಯಾಟ್ ಫಾರ್ಮ್ ತೆರಿದಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಿದೆ.
ಎಲೆಕ್ಟ್ರಿಕ್ ಕಾರುಗಳ(Electric Cars) ಉತ್ಪಾದನೆಗಾಗಿ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ(Mahindra) ಕಂಪನಿಯು ನ್ಯೂ ಜನರೇಷನ್ ಇವಿ ಕಾರುಗಳಿಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ಆರಂಭಿಸಿದೆ. ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಇವಿ ಕಾರು ಉತ್ಪಾದನಾ ಘಟಕವನ್ನು ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದ ಪುಣೆಯಲ್ಲಿ ಆರಂಭಿಸಿದೆ. ಹೊಸ ಇವಿ ಕಾರು ಉತ್ಪಾದನಾ ಘಟಕದ ಯೋಜನೆಗಾಗಿ ಮಹೀಂದ್ರಾ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 10 ಸಾವಿರ ಕೋಟಿ ಹೂಡಿಕೆ ಮಾಡುತ್ತಿದ್ದು, ಹೊಸ ಕಾರು ಉತ್ಪಾದನಾ ಘಟಕವು 2024ರ ವೇಳೆಗೆ ಅಧಿಕೃತವಾಗಿ ಉತ್ಪಾದನೆ ಆರಂಭಿಸಲಿದೆ.
ಮಹೀಂದ್ರಾ ಕಂಪನಿಯು ಈ ವರ್ಷದ ಆರಂಭದಲ್ಲಿ ಹೊಸ ಇವಿ ಕಾರುಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ಘೋಷಣೆ ಮಾಡಿತ್ತು. ಈ ಸಂಬಂಧ ಮಹೀಂದ್ರಾ ಕಂಪನಿಯು ಹೊಸ ಉತ್ಪಾದನಾ ಘಟಕ ಆರಂಭಕ್ಕಾಗಿ ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿತ್ತು. ವಿವಿಧ ರಾಜ್ಯ ಸರ್ಕಾರಗಳೊಂದಿಗಿನ ಮಾತುಕತೆ ನಂತರ ಇದೀಗ ಮಹೀಂದ್ರಾ ಕಂಪನಿಯು ಹೊಸ ಯೋಜನೆಗಾಗಿ ಮಹಾರಾಷ್ಟ್ರ ರಾಜ್ಯವನ್ನು ಆಯ್ಕೆ ಮಾಡಿದೆ. ಮಹಾರಾಷ್ಟ್ರ ಸರ್ಕಾರವು ಇವಿ ಉತ್ಪಾದನಾ ವಲಯಕ್ಕಾಗಿ ಘೋಷಣೆ ಮಾಡಲಾಗಿರುವ ವಿಶೇಷ ಯೋಜನೆ ಅಡಿ ಉತ್ತಮ ಸ್ಪಂದನೆ ಸಿಕ್ಕ ಹಿನ್ನಲೆಯಲ್ಲಿ ಪುಣೆ ಹೊರ ವಲಯದಲ್ಲಿ ಹೊಸ ಇವಿ ಕಾರು ಉತ್ಪಾದನಾ ಘಟಕವನ್ನು ಆರಂಭಿಸುತ್ತಿರುವುದಾಗಿ ಮಹೀಂದ್ರಾ ಅಧಿಕೃತವಾಗಿ ಘೋಷಣೆ ಮಾಡಿದೆ.
ಇದನ್ನೂ ಓದಿ: ಅಪಘಾತಗಳನ್ನು ತಪ್ಪಿಸಲು ನೆರವಾಗುವ ಎಡಿಎಎಸ್ ಫೀಚರ್ಸ್ ಹೇಗೆ ಕಾರ್ಯನಿರ್ವಹಿಸುತ್ತೆ ಗೊತ್ತಾ?
ಮಹಾರಾಷ್ಟ್ರದಲ್ಲಿ ಈಗಾಗಲೇ ಸುಮಾರು 70 ವರ್ಷಗಳಿಂದ ವಾಹನ ಉತ್ಪಾದನಾ ಕಾರ್ಯಾಚರಣೆ ಹೊಂದಿರುವ ಮಹೀಂದ್ರಾ ಕಂಪನಿಯು ಇದೀಗ ಹೊಸ ಯೋಜನೆಯನ್ನು ತನ್ನ ಹಳೆಯ ಘಟಕಗಳ ಸನೀಹದಲ್ಲಿಯೇ ತೆರೆಯುತ್ತಿದ್ದು, ಹೊಸ ತಲೆಮಾರಿನ ಇವಿ ಕಾರು ಮಾದರಿಗಳನ್ನು ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ.ಇ(XUV.e) ಮತ್ತು ಬಿಇ (BE) ಎನ್ನುವ ಎರಡು ಬ್ರಾಂಡ್‌ಗಳ ಅಡಿಯಲ್ಲಿ ಮಾರಾಟ ಮಾಡು ನಿರ್ಧರಿಸಿದೆ.
ಮಹೀಂದ್ರಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಇನ್‌ಗ್ಲೊ(INGLO) ಪ್ಲಾಟ್‌ಫಾರ್ಮ್ ಆರ್ಕಿಟೆಕ್ಚರ್‌ನಲ್ಲಿ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಹೊಸ ಇವಿ ಕಾರುಗಳಲ್ಲಿ ಮೂರು ಎಸ್‌ಯುವಿ ಮಾದರಿಗಳಾಗಿದ್ದರೆ ಎರಡು ಎಸ್‌ಯುವಿ ಕೂಪೆ ಶೈಲಿಯಲ್ಲಿ ಆಧರಿಸಿರಲಿವೆ. ಎಕ್ಸ್‌ಯುವಿ.ಇ(XUV.e) ಬ್ರಾಂಡ್ ಅಡಿಯಲ್ಲಿ ಎಕ್ಸ್‌ಯುವಿ.ಇ8(XUV.E8) ಮತ್ತು ಎಕ್ಸ್‌ಯುವಿ.ಇ9(XUV.E9) ಮಾರಾಟಗೊಳ್ಳಲಿದ್ದರೆ ಬಿಇ(BE) ಬ್ರಾಂಡ್ ಅಡಿಯಲ್ಲಿ ಬಿಇ.05(BE.05). ಬಿಇ.07(BE.07) ಮತ್ತು ಬಿಇ.09(BE.09) ಕಾರುಗಳು ಮಾರಾಟಗೊಳ್ಳಲಿವೆ.
ಮಹೀಂದ್ರಾ ಕಂಪನಿಯು ಮೊದಲ ಹಂತದಲ್ಲಿ ಎಕ್ಸ್‌ಯುವಿ.ಇ ಬ್ರಾಂಡ್ ಕಾರುಗಳನ್ನು ಮಾರಾಟಗೊಳಿಸಲಿದ್ದು, ತದನಂತರವಷ್ಟೇ ಬಿಇ ಬ್ರಾಂಡ್ ಇವಿ ಕಾರುಗಳನ್ನು ಬಿಡುಗಡೆ ಮಾಡಲಿದೆ. 2024ರ ಕೊನೆಯಲ್ಲಿ ಎಕ್ಸ್‌ಯುವಿ.ಇ ಕಾರುಗಳ ಮಾರಾಟ ಆರಂಭವಾಗಲಿದ್ದು, ಬಿಇ ಬ್ರಾಂಡ್ ಕಾರುಗಳ ಮಾರಾಟವು 2025ರ ಕೊನೆಯಲ್ಲಿ ಆರಂಭವಾಗಲಿದೆ. ಹೊಸ ಇವಿ ಕಾರುಗಳು ಅತ್ಯಾಧುನಿಕ ಸೌಲಭ್ಯದೊಂದಿಗೆ ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಇವಿ ಕಾರು ಮಾದರಿಗಳು ಅಡ್ವಾನ್ಸ್ ಫ್ಯೂಚರಿಸ್ಟಿಕ್ ವಿನ್ಯಾಸವನ್ನು ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿವೆ.
ಇದನ್ನೂ ಓದಿ: ರತನ್ ಟಾಟಾ ಕನಸಿನ ಕಾರಿಗೆ ಮತ್ತೆ ಮರುಜೀವ!
ಹೊಸ ಪ್ಲ್ಯಾಟ್‌ಫಾರ್ಮ್‌ನಲ್ಲಿ ನಿರ್ಮಾಣವಾಗಲಿರುವ ಮಹೀಂದ್ರಾ ಬಾರ್ನ್ ಇವಿ ಕಾರುಗಳು 60 kWh ರಿಂದ 80 kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದ್ದು, ಇವು ಪ್ರತಿ ಚಾರ್ಜ್ ಗೆ 450 ಕಿ.ಮೀ ನಿಂದ 550 ಕಿ.ಮೀ . ಈ ಮೂಲಕ ಹೊಸ ಮಾದರಿಗಳು ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ರಿಯಲ್ ವ್ಹೀಲ್ ಮಾದರಿಗಳು 231 ಬಿಎಚ್‌ಪಿಯಿಂದ 285 ಬಿಎಚ್‌ಪಿ ಉತ್ಪಾದಿಸಲಿದ್ದರೆ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿರುವ ಕಾರು ಮಾದರಿಗಳು 340 ಬಿಎಚ್‌ಪಿಯಿಂದ 394 ಬಿಎಚ್‌ಪಿ ಉತ್ಪಾದಿಸಬಲ್ಲವು.
Published On - 6:04 pm, Thu, 15 December 22