AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahindra: ಮಹೀಂದ್ರಾ ಕಾರುಗಳ ಖರೀದಿ ಮೇಲೆ ರೂ. 1.25 ಲಕ್ಷದ ತನಕ ಆಫರ್ ಘೋಷಣೆ

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಎಸ್ ಯುವಿ ಕಾರುಗಳ ಖರೀದಿ ಮೇಲೆ ಸೆಪ್ಟೆಂಬರ್ ಅವಧಿಯ ಆಫರ್ ಘೋಷಣೆ ಮಾಡಿದೆ.

Mahindra: ಮಹೀಂದ್ರಾ ಕಾರುಗಳ ಖರೀದಿ ಮೇಲೆ ರೂ. 1.25 ಲಕ್ಷದ ತನಕ ಆಫರ್ ಘೋಷಣೆ
ಮಹೀಂದ್ರಾ ಕಾರುಗಳ ಖರೀದಿ ಮೇಲೆ ಭರ್ಜರಿ ಆಫರ್
Praveen Sannamani
|

Updated on: Sep 12, 2023 | 5:42 PM

Share

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ(Mahindra) ಕಂಪನಿಯು ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದ್ದು, ಪ್ರಮುಖ ಎಸ್ ಯುವಿ ಕಾರುಗಳ ಖರೀದಿ ಮೇಲೆ ರೂ. 1.25 ಲಕ್ಷ ತನಕ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳಲ್ಲಿ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಹೆಚ್ಚಿನ ಡಿಸ್ಕೌಂಟ್ ಲಭ್ಯವಿದೆ.

ಮಹೀಂದ್ರಾ ಕಂಪನಿಯು ಘೋಷಣೆ ಮಾಡಲಾಗಿರುವ ಹೊಸ ಆಫರ್ ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಎಕ್ಸ್ ಚೆಂಜ್ ಆಫರ್ ಗಳು ಲಭ್ಯವಿದ್ದು, ಹೊಸ ಆಫರ್ ಗಳು ಸ್ಟಾಕ್ ಮಾದರಿಗಳ ಮೇಲೆ ಮಾತ್ರ ಅನ್ವಯಿಸುತ್ತವೆ.

ಎಕ್ಸ್ ಯುವಿ400 ಎಲೆಕ್ಟ್ರಿಕ್

ಮಹೀಂದ್ರಾ ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರು ಹೆಚ್ಚಿನ ಮಟ್ಟದ ಆಫರ್ ನೀಡುತ್ತಿದ್ದು, ಇವಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಭರ್ಜರಿ ಆಫರ್ ಸಿಗಲಿದೆ. ಎಕ್ಸ್ ಯುವಿ400 ಕಾರು ಖರೀದಿಸುವ ಗ್ರಾಹಕರಿಗೆ ರೂ. 1.25 ಲಕ್ಷ ಆಫರ್ ಲಭ್ಯವಿದ್ದು, ಆಫರ್ ಹಿನ್ನಲೆಯಲ್ಲಿ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಜೋಡಣೆ ಲಭ್ಯವಿರುವುದಿಲ್ಲ. ಆಫರ್ ಮೇಲೆ ಹೊಸ ಕಾರು ಖರೀದಿಸುವ ಗ್ರಾಹಕರು ಆಕ್ಸೆಸರಿಸ್ ಪ್ಯಾಕೇಜ್ ಖರೀದಿಗಾಗಿ ಪ್ರತ್ಯೇಕವಾಗಿ ದರ ಪಾವತಿಸಬೇಕಿದ್ದು, ಎಕ್ಸ್ ಯುವಿ400 ಕಾರು ಸದ್ಯ ಇಸಿ ಮತ್ತು ಇಎಲ್ ಎನ್ನುವ ಎರಡು ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 15.99 ಲಕ್ಷದಿಂದ ರೂ. 19.19 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಆಕರ್ಷಕ ಬೆಲೆಗೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಎಸ್ ಯುವಿ ಬಿಡುಗಡೆ

ಮರಾಜೋ ಎಂಪಿವಿ

ಮರಾಜೋ ಎಂಪಿವಿ ಆವೃತ್ತಿಯ ಖರೀದಿಯ ಮೇಲೆ ಮಹೀಂದ್ರಾ ಕಂಪನಿ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಮರಾಜೋ ಖರೀದಿಸುವ ಗ್ರಾಹಕರು ರೂ. 73 ಸಾವಿರ ಉಳಿತಾಯ ಮಾಡಬಹುದಾಗಿದೆ. ರೂ. 73 ಸಾವಿರದಲ್ಲಿ ರೂ.58 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 15 ಸಾವಿರದಷ್ಟು ಆಕ್ಸೆಸರಿಸ್ ನೀಡಲಾಗಿದ್ದು, ಇದು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

ಎಕ್ಸ್ ಯುವಿ300

ಮಹೀಂದ್ರಾ ಕಂಪನಿ ಎಕ್ಸ್ ಯುವಿ300 ಕಂಪ್ಯಾಕ್ಟ್ ಎಸ್ ಯುವಿ ಮೇಲೆ ರೂ. 71 ಸಾವಿರದಷ್ಟು ಆಫರ್ ನೀಡುತ್ತಿದೆ. ಎಕ್ಸ್ ಯುವಿ300 ಕಾರಿನ ಪೆಟ್ರೋಲ್ ಆವೃತ್ತಿಯ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ರೂ. 4,500 ರಿಂದ ರೂ. 71 ಸಾವಿರದಷ್ಟು ಆಫರ್ ಲಭ್ಯವಿದ್ದರೆ ಡೀಸೆಲ್ ಕಾರಿನ ವಿವಿಧ ವೆರಿಯೆಂಟ್ ಗಳ ಮೇಲೆ ರೂ. 46 ಸಾವಿರದಿಂದ ರೂ. 71 ಸಾವಿರದಷ್ಟು ಆಫರ್ ಅನ್ವಯಿಸಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಇವಿ ಸ್ಕೂಟರ್ ಗಳಿವು!

ಬೊಲೆರೊ ನಿಯೋ

ಸಬ್ ಕಂಪ್ಯಾಕ್ಟ್ ಎಸ್ ಯುವಿ ಬೊಲೆರೊ ನಿಯೋ ಕಾರು ಖರೀದಿಯ ಮೇಲೆ ಮಹೀಂದ್ರಾ ಕಂಪನಿ ರೂ. 50 ಸಾವಿರ ಆಫರ್ ನೀಡುತ್ತಿದೆ. ರೂ. 50 ಸಾವಿರ ಮೌಲ್ಯದ ಆಫರ್ ನಲ್ಲಿ ವಿವಿಧ ವೆರಿಯೆಂಟ್ ಗಳ ಮೇಲೆ ರೂ. 7 ಸಾವಿರದಿಂದ ರೂ. 35 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 15 ಸಾವಿರ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ನೀಡಲಾಗುತ್ತಿದೆ.

ಬೊಲೆರೊ

ಬೊಲೆರೊ ಎಸ್ ಯುವಿ ಕಾರು ಖರೀದಿಯ ಮೇಲೆ ಮಹೀಂದ್ರಾ ಕಂಪನಿಯು ವಿವಿಧ ವೆರಿಯೆಂಟ್ ಗಳ ಮೇಲೆ ರೂ. 25 ಸಾವಿರದಿಂದ ರೂ. 60 ಸಾವಿರದಷ್ಟು ಆಫರ್ ನೀಡುತ್ತಿದ್ದು, ರೂ. 60 ಸಾವಿರ ಮೌಲ್ಯದ ಆಫರ್ ನಲ್ಲಿ ಕ್ಯಾಶ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!