Mahindra: ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್

ಮಹೀಂದ್ರಾ ಕಂಪನಿಯು ತನ್ನ ಪ್ರಮುಖ ಎಸ್ ಯುವಿ ಕಾರುಗಳ ಖರೀದಿ ಮೇಲೆ ನವೆಂಬರ್ ಅವಧಿಯ ಆಫರ್ ಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಇವಿ ಕಾರಿನ ಮೇಲೆ ಹೆಚ್ಚಿನ ಆಫರ್ ಪಡೆದುಕೊಳ್ಳಬಹುದು.

Mahindra: ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್
ಮಹೀಂದ್ರಾ ಕಾರುಗಳು
Follow us
Praveen Sannamani
|

Updated on:Nov 03, 2023 | 4:04 PM

ಮಹೀಂದ್ರಾ(Mahindra) ಕಂಪನಿಯು ದೀಪಾವಳಿ ವಿಶೇಷವಾಗಿ ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದ್ದು, ತನ್ನ ಜನಪ್ರಿಯ ಎಸ್ ಯುವಿ ಕಾರುಗಳ ಖರೀದಿ ಮೇಲೆ ಐತಿಹಾಸಿಕ ಆಫರ್ ಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳಲ್ಲಿ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಹೆಚ್ಚಿನ ಡಿಸ್ಕೌಂಟ್ ಲಭ್ಯವಿದೆ.

ಹೊಸ ಆಫರ್ ಗಳಲ್ಲಿ ಮಹೀಂದ್ರಾ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಎಕ್ಸ್ ಚೆಂಜ್ ಆಫರ್ ಗಳನ್ನು ನೀಡುತ್ತಿದ್ದು, ಎಲೆಕ್ಟ್ರಿಕ್ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಎಕ್ಸ್ ಯುವಿ400 ಎಲೆಕ್ಟ್ರಿಕ್

ಹೊಸ ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರು ಖರೀದಿಯ ಮೇಲೆ ಮಹೀಂದ್ರಾ ಕಂಪನಿಯು ಹೆಚ್ಚಿನ ಮಟ್ಟದ ಆಫರ್ ನೀಡುತ್ತಿದ್ದು, ಬರೋಬ್ಬರಿ ರೂ. 3.50 ಲಕ್ಷ ಕ್ಯಾಶ್ ಡಿಸ್ಕೌಂಟ್ ಆಫರ್ ನೀಡುತ್ತಿದೆ. ಎಕ್ಸ್ ಯುವಿ400 ಕಾರು ಸದ್ಯ ಇಸಿ, ಇಸಿ ಇಎಸ್ಇ ಮತ್ತು ಇಎಲ್ ಎನ್ನುವ ಮೂರು ವೆರಿಯೆಂಟ್ ಗಳನ್ನು ಹೊಂದಿದ್ದು, ಇದರಲ್ಲಿ ಇಸಿ ಟಾಪ್ ಎಂಡ್ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ರೂ. 3.50 ಲಕ್ಷ ಕ್ಯಾಶ್ ಡಿಸ್ಕೌಂಟ್ ನೀಡಲಾಗುತ್ತಿದ್ದರೆ ಇಸಿ ಇಎಸ್ಇ ವೆರಿಯೆಂಟ್ ಮೇಲೆ ರೂ. 3 ಲಕ್ಷ ಮತ್ತು ಇಎಲ್ ವೆರಿಯೆಂಟ್ ಖರೀದಿ ಮೇಲೆ ರೂ. 1.50 ಲಕ್ಷ ಕ್ಯಾಶ್ ಡಿಸ್ಕೌಂಟ್ ನೀಡಲಾಗುತ್ತಿದೆ. ಇನ್ನು ಎಕ್ಸ್ ಯುವಿ400 ಇವಿ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 15.99 ಲಕ್ಷದಿಂದ ರೂ. 19.19 ಲಕ್ಷ ಬೆಲೆ ಹೊಂದಿದ್ದು, ಇದು 39.4kWh ಮತ್ತು 34.5kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ 375 ರಿಂದ 456 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!

ಎಕ್ಸ್ ಯುವಿ300

ಎಕ್ಸ್ ಯುವಿ300 ಕಂಪ್ಯಾಕ್ಟ್ ಎಸ್ ಯುವಿ ಮೇಲೆ ಮಹೀಂದ್ರಾ ಕಂಪನಿಯು ರೂ. 1.20 ಲಕ್ಷ ಆಫರ್ ನೀಡುತ್ತಿದ್ದು, ಇದರಲ್ಲಿ ರೂ. 95 ಸಾವಿರ ಮೌಲ್ಯದ ಕ್ಯಾಶ್ ಡಿಸ್ಕೌಂಟ್ ದೊರೆಯಲಿದ್ದರೆ ರೂ. 25 ಸಾವಿರ ಮೌಲ್ಯದ ಅಧಿಕೃತ ಆಕ್ಸೆಸರಿಸ್ ಪ್ಯಾಕೇಜ್ ಸಿಗಲಿದೆ. ಎಕ್ಸ್ ಯುವಿ300 ಕಾರು ಮಾದರಿಯು ಸದ್ಯ ಮೂರು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಆಫರ್ ಗಳು ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ತುಸು ಬದಲಾವಣೆಯಾಗಲಿವೆ.

ಮರಾಜೋ ಎಂಪಿವಿ

ಮಹೀಂದ್ರಾ ಕಂಪನಿ ಮರಾಜೋ ಎಂಪಿವಿ ಆವೃತ್ತಿಯ ಖರೀದಿಯ ಮೇಲೂ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಗ್ರಾಹಕರು ರೂ. 73,300 ಉಳಿತಾಯ ಮಾಡಬಹುದಾಗಿದೆ. ಹೊಸ ಆಫರ್ ನಲ್ಲಿ ರೂ.58,300 ಕ್ಯಾಶ್ ಡಿಸ್ಕೌಂಟ್ ನೊಂದಿಗೆ ರೂ. 15 ಸಾವಿರದಷ್ಟು ಆಕ್ಸೆಸರಿಸ್ ಪ್ಯಾಕೇಜ್ ನೀಡಲಾಗಿದ್ದು, ಇದು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

ಬೊಲೆರೊ

ಮಹೀಂದ್ರಾ ಕಂಪನಿಯು ಬೊಲೆರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 35 ಸಾವಿರದಿಂದ ರೂ. 70 ಸಾವಿರದಷ್ಟು ಆಫರ್ ನೀಡುತ್ತಿದ್ದು, ಇದು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

ಇದನ್ನೂ ಓದಿ: ಸಿಟ್ರನ್ ಹೊಸ ಎಸ್‍ಯುವಿ ಖರೀದಿ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಣೆ

ಬೊಲೆರೊ ನಿಯೋ

ಸಬ್ ಕಂಪ್ಯಾಕ್ಟ್ ಎಸ್ ಯುವಿಯಾಗಿರುವ ಬೊಲೆರೊ ನಿಯೋ ಕಾರಿನ ಖರೀದಿಯ ಮೇಲೂ ಮಹೀಂದ್ರಾ ಕಂಪನಿಯು ರೂ. 50 ಸಾವಿರ ಆಫರ್ ನೀಡುತ್ತಿದ್ದು, ರೂ. 50 ಸಾವಿರ ಮೌಲ್ಯದ ಆಫರ್ ನಲ್ಲಿ ವಿವಿಧ ವೆರಿಯೆಂಟ್ ಗಳ ಮೇಲೆ ರೂ. 7 ಸಾವಿರದಿಂದ ರೂ. 35 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 15 ಸಾವಿರ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ನೀಡಲಾಗುತ್ತಿದೆ.

Published On - 3:55 pm, Fri, 3 November 23

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್