ಆಕರ್ಷಕ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಹೊಸ ಎಸ್ ಯುವಿ ಆವೃತ್ತಿಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಥಾರ್ 5 ಡೋರ್ ವರ್ಷನ್ ಬಿಡುಗಡೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಆಕರ್ಷಕ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಥಾರ್  5 ಡೋರ್ ವರ್ಷನ್
ಮಹೀಂದ್ರಾ ಥಾರ್
Follow us
Praveen Sannamani
|

Updated on:Dec 20, 2023 | 4:06 PM

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳ ಮಾದರಿಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಮಹೀಂದ್ರಾ (Mahindra) ಕಂಪನಿಯು ಮುಂದಿನ 5 ವರ್ಷಗಳಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳಲ್ಲಿ ಥಾರ್ 5 ಡೋರ್ ವರ್ಷನ್ ಸಹ ಪ್ರಮುಖ ಆವೃತ್ತಿಯಾಗಿದೆ. ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಹೊಸ ಆವೃತ್ತಿಯ ಅಧಿಕೃತ ಹೆಸರಿನ ಕುರಿತಾಗಿ ಕುತೂಹಲ ಮೂಡಿಸಿದೆ.

ಮಹೀಂದ್ರಾ ಕಂಪನಿಯು ಇತ್ತೀಚೆಗೆ ಕೇಂದ್ರ ಸಾರಿಗೆ ಇಲಾಖೆ ಸಲ್ಲಿಸಿರುವ ಹೊಸ ಕಾರುಗಳ ಅಧಿಕೃತ ಹೆಸರಿನ ಟ್ರೇಡ್ ಮಾರ್ಕ್ ನೋಂದಣಿ ಪತ್ರದಲ್ಲಿ ಥಾರ್ 5 ವರ್ಷನ್ ಹೆಸರನ್ನು ಕೂಡಾ ನಮೂದಿಸಿದ್ದು, ಹೊಸ ಕಾರು ಥಾರ್ ಅರ್ಮಾಡಾ ಹೆಸರಿನಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ. ಥಾರ್ ಅರ್ಮಾಡಾ ಹೆಸರನ್ನು ಮಹೀಂದ್ರಾ ಕಂಪನಿಯು ತನ್ನ ಹಳೆಯ ಥಾರ್ ಮಾದರಿಯಿಂದ ಎರವಲು ಪಡೆದುಕೊಂಡಿದೆ ಎನ್ನಲಾಗಿದ್ದು, ಥಾರ್ ಅರ್ಮಾಡಾ ಜೊತೆಗೆ ಕಲ್ಟ್, ರೆಕ್ಸ್, ರೋಕ್ಸ್, ಸವನ್ನಾ, ಗ್ಲಾಡಿಯಸ್ ಮತ್ತು ಸೆಂಚುರಿಯನ್ ಹೆಸರನ್ನು ಸಹ ನೋಂದಣಿ ಮಾಡಿದೆ.

ಇದನ್ನೂ ಓದಿ: ಭಾರತದ ಜನಪ್ರಿಯ ಎಸ್ ಯುವಿ ಕಾರು ಖರೀದಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನ ಪುತ್ರಿ

ಐದು ಬಾಗಿಲು ಸೌಲಭ್ಯದ ಥಾರ್ ಕಾರು ಥಾರ್ ಅರ್ಮಾಡಾ ಹೆಸರಿನಲ್ಲಿ ಬಿಡುಗಡೆಯಾಗಲಿದ್ದರೆ ಮಹೀಂದ್ರಾ ಇತರೆ ಹೊಸ ಎಸ್ ಯುವಿ ಕಾರುಗಳು ನೋಂದಣಿಯಾಗಿರುವ ಇತರೆ ಹೆಸರುಗಳಲ್ಲಿ ಹಂತ-ಹಂತವಾಗಿ ಬಿಡುಗಡೆಯಾಗಲಿದ್ದು, ಥಾರ್ ಹೊಸ ಆವೃತ್ತಿಯು 2024ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಆಫ್-ರೋಡ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಥಾರ್ ಕಾರು ಮಾದರಿಯು ಸದ್ಯ 3 ಡೋರ್ ಸೌಲಭ್ಯದೊಂದಿಗೆ ಇದುವರೆಗೆ 1 ಲಕ್ಷಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ಇದು ಇದೀಗ ಆಫ್ ರೋಡ್ ಗಿಂತಲೂ ಹೆಚ್ಚು ಲೈಫ್‌ಸ್ಟೈಲ್ ಕಾರು ಮಾದರಿಗಾಗಿ ಬದಲಾಗುತ್ತಿದೆ. ಹೀಗಾಗಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 3 ಡೋರ್ ಮಾದರಿಯ ಜೊತೆಗೆ 5 ಡೋರ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, 5 ಡೋರ್ ಆವೃತ್ತಿಯಲ್ಲಿ ಸಾಕಷ್ಟು ಹೊಸ ಫೀಚರ್ಸ್ ಮತ್ತು ಬದಲಾವಣೆಗೊಳಿಸಲಾದ ವಿನ್ಯಾಸ ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿರಲಿದ್ದು, ಇದರಲ್ಲಿ ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 10-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ, ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್, ಸನ್ ರೂಫ್ ಸೇರಿದಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ.

ಇದನ್ನೂ ಓದಿ: ದುಬಾರಿ ಬೆಲೆಯ ಬಿಎಂಡಬ್ಲ್ಯು ಎಕ್ಸ್ಎಂ ಕಾರು ಖರೀದಿಸಿದ ಎಂಟಿಬಿ ನಾಗರಾಜ್

ಇನ್ನು ಹೊಸ ಕಾರು ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 4X2 ಮತ್ತು 4X4 ಡ್ರೈವ್ ಸಿಸ್ಟಂನೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಮೂಲಕ ಹೊಸ ಕಾರು 3 ಡೋರ್ ಥಾರ್ ಗಿಂತಲೂ ರೂ. 1 ಲಕ್ಷದಿಂದ ರೂ. 1.50 ಲಕ್ಷ ಹೆಚ್ಚುವರಿ ಬೆಲೆಯೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಗಳಿವೆ.

Published On - 2:09 pm, Wed, 20 December 23

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ