ದೀಪಾವಳಿ ಡಿಸ್ಕೌಂಟ್: ಬೊಲೆರೊ, ಎಕ್ಸ್ ಯುವಿ300, ಸ್ಕಾರ್ಪಿಯೋ ಖರೀದಿ ಮೇಲೆ ರೂ. 1.75 ಲಕ್ಷ ತನಕ ಆಫರ್

ಮಹೀಂದ್ರಾ ಕಂಪನಿಯು ದೀಪಾವಳಿ ವಿಶೇಷವಾಗಿ ತನ್ನ ಪ್ರಮುಖ ಕಾರುಗಳ ಖರೀದಿಗೆ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಬೊಲೆರೊ, ಎಕ್ಸ್ ಯುವಿ300, ಸ್ಕಾರ್ಪಿಯೋ ಕಾರುಗಳ ಖರೀದಿಗೆ ಮೇಲೆ ಗರಿಷ್ಠ ಪ್ರಮಾಣದ ಆಫರ್ ನೀಡುತ್ತಿದೆ.

ದೀಪಾವಳಿ ಡಿಸ್ಕೌಂಟ್:  ಬೊಲೆರೊ, ಎಕ್ಸ್ ಯುವಿ300, ಸ್ಕಾರ್ಪಿಯೋ ಖರೀದಿ ಮೇಲೆ ರೂ. 1.75 ಲಕ್ಷ ತನಕ ಆಫರ್
Mahindra Cars Offers
Follow us
Praveen Sannamani
|

Updated on:Oct 17, 2022 | 7:31 PM

ಹೊಸ ಡಿಸ್ಕೌಂಟ್ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳಲ್ಲಿ ಮಹೀಂದ್ರಾ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಘೋಷಣೆ ಮಾಡಿದೆ. ಹಾಗಾದರೆ ಹೊಸ ಆಫರ್ ನಲ್ಲಿ ಯಾವ ಕಾರಿನ ಎಷ್ಟು ಪ್ರಮಾಣದ ಡಿಸ್ಕೌಂಟ್ ಘೋಷಣೆ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ತನ್ನ ತಲೆಮಾರಿನ ಸ್ಕಾರ್ಪಿಯೋ ಎಸ್ ಯುವಿ ಮಾದರಿಯ ಮೇಲೆ ಗರಿಷ್ಠ ರೂ. 1.75 ಲಕ್ಷದ ತನಕ ಆಫರ್ ನೀಡುತ್ತಿದ್ದು, ಜೊತೆಗೆ ರೂ. 20 ಸಾವಿರ ಮೌಲ್ಯದ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಸಿಗಲಿದೆ. ಸದ್ಯ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಹೊಸ ಸ್ಕಾರ್ಪಿಯೋ-ಎನ್ ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಬದಲಾವಣೆಗೊಳಿಸಲಾದ ಹಳೆಯ ತಲೆಮಾರಿನ ಸ್ಕಾರ್ಪಿಯೋ-ಕ್ಲಾಸಿಕ್ ಮಾರಾಟ ಮಾಡುತ್ತಿದ್ದು, ಸ್ಟಾಕ್ ಇರುವ ಸಾಮಾನ್ಯ ಸ್ಕಾರ್ಪಿಯೋ ಮಾದರಿಯ ಮೇಲೆ ಮಾತ್ರವೇ ಈ ಆಫರ್ ಅನ್ವಯವಾಗಲಿದೆ.

ಇದನ್ನು ಓದಿ: Safest Cars: ಭಾರತದಲ್ಲಿ ಸದ್ಯ ಖರೀದಿಸಬಹುದಾದ ಅತಿಹೆಚ್ಚು ಸುರಕ್ಷಿತ ಮಧ್ಯಮ ಕ್ರಮಾಂಕದ ಕಾರುಗಳಿವು!

ಎಕ್ಸ್ ಯುವಿ300

ಹೊಸ ಆಫರ್ ನಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್ ಯುವಿ300 ಕಂಪ್ಯಾಕ್ಟ್ ಎಸ್ ಯುವಿ ಮೇಲೆ ರೂ. 58,500 ಆಫರ್ ನೀಡುತ್ತಿದ್ದು, ಇದರಲ್ಲಿ ಡೀಸೆಲ್ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಆಫರ್ ಸಿಗಲಿದ್ದರೆ ಪೆಟ್ರೋಲ್ ವೆರಿಯೆಂಟ್ ಗಳ ಖರೀದಿ ಮೇಲೆ ಕಡಿಮೆ ಆಫರ್ ಸಿಗಲಿದೆ. ರೂ. 58,500 ಡಿಸ್ಕೌಂಟ್ ನಲ್ಲಿ ಗ್ರಾಹಕರಿಗೆ ರೂ. 25 ಸಾವಿರ ತನಕ ಎಕ್ಸ್ ಚೆಂಜ್ ಆಫರ್, ರೂ. 4 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ರೂ. 10 ಸಾವಿರ ತನಕ ಉಚಿತ ಆಕ್ಸೆಸರಿಸ್ ಪಡೆದುಕೊಳ್ಳಬಹುದಾಗಿದೆ.

Mahindra

ಮರಾಜೋ

ಎಂಪಿವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮರಾಜೋ ಕಾರಿನ ಮೇಲೆ ಕಂಪನಿಯು ರೂ. 35,200 ಡಿಸ್ಕೌಂಟ್ ಘೋಷಣೆ ಮಾಡಿದ್ದು, ಇದರಲ್ಲಿ ರೂ. 20 ಸಾವಿರ ತನಕ ಕ್ಯಾಶ್ ಬ್ಯಾಕ್, ರೂ. 10 ಸಾವಿರ ತನಕ ಎಕ್ಸ್ ಚೆಂಜ್ ಆಫರ್ ಮತ್ತು ರೂ. 5,200 ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆಯಬಹುದಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಮತ್ತು ಕಿಯಾ ಕಾರೆನ್ಸ್ ಕಾರುಗಳಿಗೆ ಪೈಪೋಟಿಯಾಗಿ ಹೊಸ ಆಫರ್ ನೀಡುತ್ತಿದ್ದು, ಈ ತಿಂಗಳಾಂತ್ಯದ ತನಕ ಆಫರ್ ಲಭ್ಯವಿರಲಿದೆ.

ಮಹೀಂದ್ರಾ ಬೊಲೆರೊ

ಬೊಲೆರೊ ಕಾರು ಖರೀದಿಯ ಮೇಲೆ ಗ್ರಾಹಕರು ರೂ. 19,500 ತನಕ ಡಿಸ್ಕೌಂಟ್ ಪಡೆಯಬಹುದಾಗಿದ್ದು, ಇದರಲ್ಲಿ ರೂ.10 ಸಾವಿರ ತನಕ ಎಕ್ಸ್ ಚೆಂಜ್, ರೂ. 6,500 ತನಕ ಕ್ಯಾಶ್ ಬ್ಯಾಕ್ ರೂ. 3 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ವಿಶೇಷ ಸೂಚನೆ: ಆಯ್ದ ಡೀಲರ್ಸ್ ಗಳಲ್ಲಿ ಪ್ರಮುಖ ಕಾರುಗಳ ಖರೀದಿಗೆ ಮೇಲೆ ಕಂಪನಿಯ ಆಫರ್ ಹೊರತುಪಡಿಸಿ ಇನ್ನು ಹೆಚ್ಚಿನ ಮಟ್ಟದ ಆಫರ್ ಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರ ಶೋರೂಂಗೆ ಭೇಟಿ ನೀಡಬಹುದು.

Published On - 7:24 pm, Mon, 17 October 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು