Mahindra Thar Roxx 4X4: ಮಹೀಂದ್ರಾ ಥಾರ್ ರಾಕ್ಸ್ 4X4 ವೆರಿಯೆಂಟ್ ಗಳ ಬೆಲೆ ಬಹಿರಂಗ

Mahindra Thar Roxx 4X4: ಮಹೀಂದ್ರಾ ಕಂಪನಿ ತನ್ನ ಬಹುನೀರಿಕ್ಷಿತ ಥಾರ್ ರಾಕ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು 5 ಡೋರ್ ಸೌಲಭ್ಯ ಸೇರಿದಂತೆ 4x2 ಮತ್ತು 4x4 ಡ್ರೈವ್ ಸಿಸ್ಟಂ ಆಯ್ಕೆಗಳನ್ನು ಹೊಂದಿದೆ.

Mahindra Thar Roxx 4X4: ಮಹೀಂದ್ರಾ ಥಾರ್ ರಾಕ್ಸ್ 4X4 ವೆರಿಯೆಂಟ್ ಗಳ ಬೆಲೆ ಬಹಿರಂಗ
ಮಹೀಂದ್ರಾ ಥಾರ್ ರಾಕ್ಸ್ 4X4
Follow us
Praveen Sannamani
|

Updated on:Sep 25, 2024 | 10:35 PM

ಮಧ್ಯಮ ಗಾತ್ರದ ಎಸ್ ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ (Mahindra) ಕಂಪನಿ ತನ್ನ ಬಹುನೀರಿಕ್ಷಿತ ಥಾರ್ ರಾಕ್ಸ್ ಆವೃತ್ತಿಯನ್ನು ಕಳೆದ ವಾರವಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಹೊಸ ಕಾರಿನ 4X4 ವೆರಿಯೆಂಟ್ ಗಳ ಬೆಲೆ ಬಹಿರಂಗಪಡಿಸಿದೆ. ಹೊಸ ಕಾರು ಆವೃತ್ತಿಯು ಪ್ರಮುಖ ಐದು ವೆರಿಯೆಂಟ್ ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ 4×2 ಮತ್ತು 4×4 ಡ್ರೈವ್ ಸಿಸ್ಟಂ ಆಯ್ಕೆ ಮಾಡಬಹುದುಗಾಗಿದೆ.

4×2 ಡ್ರೈವ್ ಸಿಸ್ಟಂ ಹೊಂದಿರವ ಥಾರ್ ರಾಕ್ಸ್ ವೆರಿಯೆಂಟ್ ಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.99 ಲಕ್ಷದಿಂದ ರೂ. 20.49 ಲಕ್ಷ ಬೆಲೆ ಹೊಂದಿದ್ದರೆ 4×4 ಡ್ರೈವ್ ಸಿಸ್ಟಂ ಆಯ್ಕೆ ಹೊಂದಿರುವ ಥಾರ್ ರಾಕ್ಸ್ ವೆರಿಯೆಂಟ್ ಗಳು ಆರಂಭಿಕವಾಗಿ ರೂ. 18.79 ಲಕ್ಷದಿಂದ ರೂ. 22.49 ಲಕ್ಷ ಬೆಲೆ ಹೊಂದಿವೆ. ಆದರೆ ಹೊಸ 4×4 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳು ಡೀಸೆಲ್ ಎಂಜಿನ್ ನಲ್ಲಿ ಮಾತ್ರ ಲಭ್ಯವಿದ್ದು, 4×2 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿವೆ. ಜೊತೆಗೆ ಹೊಸ 4×4 ವೆರಿಯೆಂಟ್ ಗಳು ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಹೊಂದಿದ್ದು, ಇವು ಸ್ನೋ, ಮಡ್ ಮತ್ತು ಸ್ಯಾಂಡ್ ಎನ್ನುವ ಮೂರು ಡ್ರೈವ್ ಮೋಡ್ ಗಳನ್ನು ಒಳಗೊಂಡ ಫೋರ್ ಎಕ್ಸ್ ಪ್ಲೋರ್ ಡ್ರೈವ್ ಟೆಕ್ನಾಲಜಿ ಪಡೆದುಕೊಂಡಿದೆ.

ಜೊತೆಗೆ ಹೊಸ 4×4 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳಲ್ಲಿ ಆಫ್ ರೋಡ್ ಕೌಶಲ್ಯಕ್ಕೆ ಸಹಕಾರಿಯಾಗುವ ಸ್ಮಾರ್ಟ್ ಕ್ರೌಲ್, ಇಂಟೆಲಿಟರ್ನ್ ತಂತ್ರಜ್ಞಾನಗಳನ್ನು ನೀಡಲಾಗಿದ್ದು, ಇನ್ನುಳಿದಂತೆ 4×2 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳಲ್ಲಿನ ಫೀಚರ್ಸ್ ಗಳನ್ನೇ ಹೊಸ ಮಾದರಿಯಲ್ಲೂ ಮುಂದುವರಿಸಲಾಗಿದೆ. ಆಕರ್ಷಕವಾದ ವಿನ್ಯಾಸದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಆರಂಭಿಕ ಮಾದರಿಗೂ ಅನ್ವಯಿಸುವಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್ಸ್, ಸಿ ಆಕಾರದ ಹೋಲುವ ಎಲ್‌ಇಡಿ ಡಿಆರ್‌ಎಲ್ಸ್, ಸರ್ಕ್ಯೂಲರ್ ಆಗಿರೋ ಫಾಗ್ ಲೈಟ್ಸ್ ಜೊತೆಗೆ ಸ್ಪೋರ್ಟಿಯಾಗಿ ಬಂಪರ್ ನೀಡಲಾಗಿದೆ. ಜೊತೆಗೆ 19 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಹ್ ಗಳು, ಟೈಲ್‌ಗೇಟ್ ಮೌಂಟೆಡ್ ಸ್ಪೇರ್ ವ್ಹೀಲ್, ಎಲ್ಇಡಿ ಟೈಲ್‌ಲೈಟ್ಸ್ ನೀಡಲಾಗಿದೆ.

ಹೊರಭಾಗದಂತೆ ಕಾರಿನ ಒಳಗೂ ಹಲವಾರು ಫೀಚರ್ಸ್ ಗಳಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಸರ್ಪೊಟ್ ಮಾಡುವ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಲಭ್ಯವಿದೆ. ಇದಲ್ಲದೇ ಸಂಪೂರ್ಣ ಡಿಜಿಟಲ್ ಆಗಿರುವ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮುಂಭಾಗದಲ್ಲಿ ವೆಂಟಿಲೇಟೆಡ್ ಆಸನಗಳು, ಪನೊರಮಿಕ್ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ರಿಯರ್ ಎಸಿ ವೆಂಟ್ಸ್ ನೀಡಲಾಗಿದೆ.

ಥಾರ್ ರಾಕ್ಸ್ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಇಎಸ್ಇ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಆಟೋ ಹೆಡ್ ಲೈಟ್ ಅಂಡ್ ವೈಪರ್ಸ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಂ ನೀಡಲಾಗಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಸೌಲಭ್ಯವಿದ್ದು, ಇದು ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯುತ್ತದೆ.

Published On - 10:29 pm, Wed, 25 September 24