ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್

ಮಹೀಂದ್ರಾ ಕಂಪನಿಯು ತನ್ನ ಬಹುಬೇಡಿಕೆಯ ಸ್ಕಾರ್ಪಿಯೋ ಎನ್ ಎಸ್ ಯುವಿ ಜೆಡ್8 ವೆರಿಯೆಂಟ್ ಹಲವು ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ.

ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್
ಮಹೀಂದ್ರಾ ಸ್ಕಾರ್ಪಿಯೋ ಎನ್
Follow us
Praveen Sannamani
|

Updated on: Jul 02, 2024 | 10:29 PM

ಮಧ್ಯಮ ಗಾತ್ರದ ಎಸ್ ಯುವಿ ಕಾರುಗಳ ಮಾರಾಟಾದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ (Mahindra) ಕಂಪನಿಯು ತನ್ನ ಜನಪ್ರಿಯ ಸ್ಕಾರ್ಪಿಯೋ ಎನ್ ಮಾದರಿಯಲ್ಲಿ ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ. ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜೆಡ್8 ವೆರಿಯೆಂಟ್ ನಲ್ಲಿ ಹೊಸ ಫೀಚರ್ಸ್ ನೀಡಲಾಗಿದ್ದು, ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂಬುವುದು ಗಮನಿಸಬೇಕಾದ ಅಂಶವಾಗಿದೆ.

ಜೆಡ್8 ವೆರಿಯೆಂಟ್ ನಲ್ಲಿರುವ ಜೆಡ್8 ಎಸ್, ಜೆಡ್8 ಮತ್ತು ಜೆಡ್8 ಎಲ್ ವೆರಿಯೆಂಟ್ ಗಳಲ್ಲಿ ಹೊಸದಾಗಿ ಮುಂಭಾಗದ ಸಾಲಿನಲ್ಲಿ ವೆಂಟಿಲೆಟೆಡ್ ಆಸನಗಳು, ಆಕ್ಟಿವ್ ಕೂಲಿಂಗ್ ಪ್ರೇರಿತ ವೈರ್ ಲೆಸ್ ಚಾರ್ಜರ್, ಆಟೋ ಡಿಮ್ಮಿಂಗ್ ರಿಯರ್ ವ್ಯೂ ಮಿರರ್ ಮತ್ತು ಹೈ ಗ್ಲೊಸ್ ಸೆಂಟರ್ ಕನ್ಸೊನ್ ಜೋಡಣೆ ಮಾಡಲಾಗಿದೆ. ಇವು ದೂರದ ಪ್ರಯಾಣವನ್ನು ಮತ್ತಷ್ಟು ಸರಳಗೊಳಿಸಲಿದ್ದು, ಎಸ್ ಯುವಿ ಪ್ರಿಯರನ್ನು ಮತ್ತಷ್ಟು ಸೆಳೆಯಲಿವೆ.

ಹೊಸ ಫೀಚರ್ಸ್ ಹೊರತಾಗಿ ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಎನ್ ನಲ್ಲಿ ಈ ಹಿಂದಿನ ಫೀಚರ್ಸ್ ಗಳನ್ನು ಮತ್ತು ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಫೀಚರ್ಸ್ ಪಡೆದುಕೊಂಡಿದೆ. ಸ್ಕಾರ್ಪಿಯೋದಲ್ಲಿ ಸದ್ಯ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತುಜೆಡ್8ಎಲ್ ವೆರಿಯೆಂಟ್ ಹೊಂದಿದ್ದು, ಇದರಲ್ಲಿ 2.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸ್ಕಾರ್ಪಿಯೋ ಎನ್ ನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಿದ್ದು, ಟಾಪ್ ಎಂಡ್ ಮಾದರಿಗಳಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಿಸಲಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಿದೆ. ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ ನೀಡಿದ್ದು, ಇದು ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?