ಎಸ್ ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಕಾರು ಮಾರಾಟದಲ್ಲಿ ಮಹೀಂದ್ರಾ ಕಂಪನಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ತಿಂಗಳ ಕಾರು ಮಾರಾಟದಲ್ಲಿ ಮಹೀಂದ್ರಾ ಎಸ್ ಯುವಿ ಮಾದರಿಗಳು ಹೊಸ ದಾಖಲೆ ನಿರ್ಮಿಸಿವೆ.

ಎಸ್ ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಮಹೀಂದ್ರಾ ಸ್ಕಾರ್ಪಿಯೋ
ಮಹೀಂದ್ರಾ ಸ್ಕಾರ್ಪಿಯೋ-ಎನ್
Follow us
Praveen Sannamani
|

Updated on: Nov 14, 2023 | 9:07 PM

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ (Mahindra) ಕಂಪನಿಯು ಹೊಸ ಸ್ಕಾರ್ಪಿಯೋ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದು, ಕಳೆದ ತಿಂಗಳ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ. ಕಳೆದ ತಿಂಗಳು ಅಕ್ಟೋಬರ್‌ ನಲ್ಲಿ ಹೊಸ ಸ್ಕಾರ್ಪಿಯೋ-ಎನ್ ಮತ್ತು ಸ್ಕಾರ್ಪಿಯೋ ಕಾರುಗಳು ಬರೋಬ್ಬರಿ 13,578 ಯುನಿಟ್ ಮಾರಾಟಗೊಂಡಿದ್ದು, ಇವು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಿವೆ.

ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಗೊಂಡಿದ್ದ ಸ್ಕಾರ್ಪಿಯೋ-ಎನ್ ಹೊಸ ಆವೃತ್ತಿಯು ವಾರ್ಷಿಕ ಮಾರಾಟದಲ್ಲಿ ಶೇ. 83 ರಷ್ಟು ಬೆಳವಣಿಗೆ ಸಾಧಿಸಿದ್ದು, ಕಳೆದ ಕಳೆದ ವರ್ಷದ ಅಕ್ಟೋಬರ್ ನಲ್ಲಿ 7,438 ಯುನಿಟ್ ಮಾರಾಟಗೊಂಡಿತ್ತು. ಆದರೆ ಕಳೆದ ತಿಂಗಳು ದಾಖಲೆ ಮಟ್ಟದ ಬೇಡಿಕೆ ಪಡೆದುಕೊಂಡಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟೊ ಹೈರೈಡರ್ ಮತ್ತು ಸ್ಕೋಡಾ ಕುಶಾಕ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಇದನ್ನೂ ಓದಿ: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!

ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಹೊಸ ಸ್ಕಾರ್ಪಿಯೋ-ಎನ್ ಜೊತೆಗೆ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಗಳು ಮಾರಾಟಗೊಳಿಸುತ್ತಿದ್ದು, ಇದರಲ್ಲಿ ಹೊಸ ತಲೆಮಾರಿನ ಸ್ಕಾರ್ಪಿಯೋ-ಎನ್ ಮಾದರಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೊಸ ಸ್ಕಾರ್ಪಿಯೋ-ಎನ್ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದ್ದು, ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 13.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.54 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಆವೃತ್ತಿಗಳು ಮ್ಯಾನುವಲ್ ಮಾದರಿಗಳಿಂತಲೂ ತುಸು ಹೆಚ್ಚಿನ ಬೆಲೆ ಹೊಂದಿವೆ.

ಸ್ಕಾರ್ಪಿಯೋ-ಎನ್ ಮಾದರಿಯು ಆನ್ ರೋಡ್‌ನಲ್ಲಿ ಮಾತ್ರವಲ್ಲ ಆಫ್ ರೋಡ್‌ನಲ್ಲೂ ಗಮನಸೆಳೆಯುತ್ತಿದ್ದು, 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.

ಈ ಮೂಲಕ ಹೊಸ ಕಾರು ಉತ್ತಮ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರಿನ 2.2 ಲೀಟರ್ ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ ನಗರ ಪ್ರದೇಶದಲ್ಲಿ 12.16 ಕಿ.ಮೀ ನಿಂದ 12.80 ಕಿ.ಮೀ ಮೈಲೇಜ್ ನೀಡಿದರೆ ಹೆದ್ದಾರಿಗಳಲ್ಲಿ ಇದೇ ಮಾದರಿಯು ಪ್ರತಿ ಲೀಟರ್‌ಗೆ 14.64 ಕಿ.ಮೀ ನಿಂದ 15.50 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹಾಗೆಯೇ 2.0 ಲೀಟರ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ ನಗರದಲ್ಲಿ 7.9 ಕಿ.ಮೀ ನಿಂದ 8.50 ಕಿ.ಮೀ ತನಕ ಮೈಲೇಜ್ ನೀಡಿದಲ್ಲಿ ಹೆದ್ದಾರಿಗಳಲ್ಲಿ ಇದರ ಮೈಲೇಜ್ ಪ್ರಮಾಣವು ಪ್ರತಿ ಲೀಟರ್‌ಗೆ 8.50 ಕಿ.ಮೀ ನಿಂದ 9.40 ಕಿಮೀ ಮೈಲೇಜ್ ಹಿಂದಿರುಗಿಸುತ್ತದೆ.

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿ ಗಮನಸೆಳೆಯುತ್ತಿದ್ದು, ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ. ಹಾಗೆಯೇ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಹಾಗೆಯೇ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿದ್ದು, ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯೂ ಕೂಡಾ 2.2 ಲೀಟರ್ ಡೀಸೆಲ್ ಎಂಜಿನ್ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ.