Mahindra XUV700: ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಮಹೀಂದ್ರಾ ಎಕ್ಸ್‌ಯುವಿ700

|

Updated on: Oct 30, 2023 | 4:10 PM

ಮಹೀಂದ್ರಾ ಕಂಪನಿ ಎಕ್ಸ್ ಯುವಿ700 ಎಸ್ ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Mahindra XUV700: ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಮಹೀಂದ್ರಾ ಎಕ್ಸ್‌ಯುವಿ700
ಮಹೀಂದ್ರಾ ಎಕ್ಸ್ ಯುವಿ700
Follow us on

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ(Mahindra) ಕಂಪನಿಯು ಎಕ್ಸ್‌ಯುವಿ700(XUV700) ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಕಳೆದ ತಿಂಗಳು ಸೆಪ್ಟೆಂಬರ್ ನಲ್ಲಿ ಒಟ್ಟು 8,555 ಯುನಿಟ್ ಮಾರಾಟಗೊಂಡಿರುವುದಾಗಿ ಮಹೀಂದ್ರಾ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ವೆರಿಯೆಂಟ್ ಗಳೊಂದಿಗೆ ಭರ್ಜರಿ ಫೀಚರ್ಸ್ ಮತ್ತು ಆಕರ್ಷಕ ಬೆಲೆ ಹೊಂದಿರುವ ಎಕ್ಸ್ ಯುವಿ700 ಕಾರು ಮಾದರಿಯು ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಯುನಿಟ್ ಗಳಿಗಾಗಿ ಬುಕಿಂಗ್ ಪಡೆದುಕೊಂಡಿದ್ದು, ಇದರಲ್ಲಿ ಈಗಾಗಲೇ 1 ಲಕ್ಷ ಯುನಿಟ್ ಕಾರುಗಳನ್ನು ವಿತರಣೆ ಮಾಡಲಾಗಿದೆ. ಬುಕಿಂಗ್ ಪ್ರಮಾಣ ಹೆಚ್ಚಿರುವುದರಿಂದ ಉತ್ಪಾದನಾ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದ್ದು, ಕಳೆದ ತಿಂಗಳು ಅತಿಹೆಚ್ಚು ಯುನಿಟ್‌ ಮಾರಾಟಗೊಳಿಸಲಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿವೆ ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!

ಎಕ್ಸ್ ಯುವಿ700 ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ವೆರಿಯೆಂಟ್‌ ಗಳೊಂದಿಗೆ 2.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ 5 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳು ಖರೀದಿಗೆ ಲಭ್ಯವಿವೆ. ಇದರಲ್ಲಿ ಸದ್ಯ ಡೀಸೆಲ್ ವೆರಿಯೆಂಟ್ ಗಳಿಗೆ ಶೇ. 80 ರಷ್ಟು ಬೇಡಿಕೆಯಿದ್ದಲ್ಲಿ ಶೇ.20 ರಷ್ಟು ಗ್ರಾಹಕರು ಪೆಟ್ರೋಲ್ ಮಾದರಿಗಳನ್ನು ಖರೀದಿಸುತ್ತಿದ್ದಾರೆ.

ಹೊಸ ಎಕ್ಸ್ ಯುವಿ700 ಮಾದರಿಯು ಬಿಡುಗಡೆಯ ನಂತರ ಈಗಾಗಲೇ ಹಲವಾರು ಬಾರಿ ಬೆಲೆ ಏರಿಕೆ ಪಡೆದುಕೊಂಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 14.03 ಲಕ್ಷದಿಂದ ರೂ. 26.57 ಲಕ್ಷ ಬೆಲೆ ಹೊಂದಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಎಕ್ಸ್ ಯುವಿ700 ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಇದನ್ನೂ ಓದಿ: ಫೀಚರ್ಸ್ ವಿಚಾರದಲ್ಲಿ ಮಹೀಂದ್ರಾ ಎಕ್ಸ್ ಯುವಿ700 ಹಿಂದಿಕ್ಕಿದ ಟಾಟಾ ಸಫಾರಿ

ಹಾಗೆಯೇ ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲೂ ಗಮನಸೆಳೆದಿರುವ ಎಕ್ಸ್‌ಯುವಿ700 ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್ ಮತ್ತು ಪೆಡೆಟ್ರೆಷಿಯನ್ ಪ್ರೊಟೆಕ್ಷನ್ ಸೌಲಭ್ಯಗಳಿಗೆಗಾಗಿ ‘ಸೇಫರ್ ಛಾಯ್ಸ್’ ಪ್ರಶಸ್ತಿ ನೀಡಿದೆ.

Published On - 4:09 pm, Mon, 30 October 23