AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahindra: ಆಕರ್ಷಕ ಬೆಲೆಗೆ ಮಹೀಂದ್ರಾ ಹೊಸ 4X2 ಥಾರ್ ವೆರಿಯೆಂಟ್ ಬಿಡುಗಡೆ

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಆಫ್ ರೋಡ್ ಎಸ್ ಯುವಿ ಕಾರು ಮಾದರಿಯಾದ ಥಾರ್ ನಲ್ಲಿ ಹೊಸದಾಗಿ ರಿಯರ್ ವ್ಹೀಲ್ ಡ್ರೈವ್ ಸಿಸ್ಟಂ ವೆರಿಯೆಂಟ್ ಬಿಡುಗಡೆ ಮಾಡಿದೆ.

Mahindra: ಆಕರ್ಷಕ ಬೆಲೆಗೆ ಮಹೀಂದ್ರಾ ಹೊಸ 4X2 ಥಾರ್ ವೆರಿಯೆಂಟ್ ಬಿಡುಗಡೆ
ಮಹೀಂದ್ರಾ ಹೊಸ 4X2 ಥಾರ್ ವೆರಿಯೆಂಟ್ ಬಿಡುಗಡೆ
Praveen Sannamani
Praveen Sannamani|

Updated on:Jan 09, 2023 | 5:55 PM

Share

ಆಫ್ ರೋಡ್(Off-Road) ಕಾರುಗಳ ವಿಭಾಗದಲ್ಲಿ ಮಹೀಂದ್ರಾ ಥಾರ್(Mahindra Thar) ಮುಂಚೂಣಿಯಲ್ಲಿದ್ದು, ಆಫ್ ರೋಡ್ ಜೊತೆಗೆ ಲೈಫ್ ಸ್ಟೈಲ್ ಮಾದರಿಯಾಗಿ ಬದಲಾಗುತ್ತಿರುವ ಥಾರ್ ಇದೀಗ ಮತ್ತೊಂದು ಮಹತ್ವದ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಥಾರ್ ಕಾರಿನಲ್ಲಿ ಹೊಸದಾಗಿ ರಿಯರ್ ವ್ಹೀಲ್ ಡ್ರೈವ್ ಸಿಸ್ಟಂ ವೆರಿಯೆಂಟ್ ಬಿಡುಗಡೆ ಮಾಡಲಾಗಿದ್ದು, ಇದು ಹೈ ಎಂಡ್ ಮಾದರಿಯಾದ ಆಲ್‌ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯದ ವೆರಿಯೆಂಟ್ ಗಿಂತಲೂ ಕಡಿಮೆ ಬೆಲೆಯೊಂದಿಗೆ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದೆ.

ಆಫ್ ರೋಡ್ ಎಸ್ ಯುವಿ ಕಾರುಗಳ ವಿಭಾಗದಲ್ಲಿ ಮಹೀಂದ್ರಾ ಥಾರ್ ತನ್ನದೇ ಆದ ಜನಪ್ರಿಯತೆ ಹೊಂದಿದ್ದು, ಹಲವಾರು ವಿಶೇಷತೆಗಳೊಂದಿಗೆ ಕಳೆದ 2019ರಲ್ಲಿ ಹೊಸ ತಲೆಮಾರಿನ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿತ್ತು. ಇದೀಗ ಮತ್ತೊಂದು ಮಹತ್ವದ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ವೆರಿಯೆಂಟ್ ನೊಂದಿಗೆ ಲೈಫ್ ಸ್ಟೈಲ್ ವಿಭಾಗದಲ್ಲಿ ಈ ಬಾರಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವೆರಿಯೆಂಟ್ ಮತ್ತು ಬೆಲೆ

4X4 ಡ್ರೈವ್ ಸಿಸ್ಟಂನೊಂದಿಗೆ ಆಫ್ ರೋಡ್ ಪ್ರಿಯರನ್ನು ಸೆಳೆದಿರುವ ಥಾರ್ ಕಾರು ಈ ಬಾರಿ 4X2 ವೆರಿಯೆಂಟ್ ನೊಂದಿಗೆ ಬಿಡುಗಡೆಯಾಗಿದೆ. ಹೊಸ 4X2 ವೆರಿಯೆಂಟ್ ರಿಯಲ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಇದು ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.28 ಲಕ್ಷ ಬೆಲೆ ಹೊಂದಿದೆ. ಇದು ಒಟ್ಟು ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದ್ದು, 4X4 ವೆರಿಯೆಂಟ್ ಗಿಂತಲೂ ಕಡಿಮೆ ಬೆಲೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

Mahindra Thar

ಥಾರ್ 4×4 ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.29 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಹೊಸ ವೆರಿಯೆಂಟ್ ಟಾಪ್ ಎಂಡ್ ವೆರಿಯೆಂಟ್ ಗಿಂತಲೂ ಸುಮಾರು ರೂ. 1 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿದಂತಾಗಿದೆ. ಹೀಗಾಗಿ ಬೆಸ್ ವೆರಿಯೆಂಟ್ ಎಸ ಯುವಿ ಕಾರು ಖರೀದಿಸುವ ಗ್ರಾಹಕರಿಗೆ ಹೊಸ ವೆರಿಯೆಂಟ್ ಅತ್ಯುತ್ತಮ ಆಯ್ಕೆಯಾಗಿದೆ ಎನ್ನಬಹುದು.

ಎಂಜಿನ್ ಆಯ್ಕೆ

ಮಹೀಂದ್ರಾ ಕಂಪನಿಯು ಥಾರ್ ಹೊಸ 4X2 ವೆರಿಯೆಂಟ್ ನಲ್ಲಿ 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯ ಜೊತೆಗೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ. ಇದರಲ್ಲಿ ಡೀಸೆಲ್ ಮಾದರಿಯು 6- ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ ಪೆಟ್ರೋಲ್ ಮಾದರಿಯು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ. ಆದರೆ 4X4 ಮಾದರಿಯಲ್ಲಿ ಮಹೀಂದ್ರಾ ಕಂಪನಿಯು 2.2 ಲೀಟರ್ ಡೀಸೆಲ್ ಜೊತೆಗೆ ಹೆಚ್ಚು ಹಾರ್ಸ್ ಪವರ್ ಹೊಂದಿರುವ 2.0 ಲೀಟರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ. ಇದರಲ್ಲಿ ಹೈ ಎಂಡ್ ಮಾದರಿಯು ಹೆಚ್ಚಿನ ಸಾಮಾರ್ಥ್ಯದೊಂದಿಗೆ ಆಫ್ ರೋಡ್ ಕೌಶಲ್ಯತೆ ಹೊಂದಿದ್ದರೆ 4X2 ವೆರಿಯೆಂಟ್ ಲೈಫ್ ಸ್ಟೈಲ್ ಉದ್ದೇಶಕ್ಕೆ ಉತ್ತಮವಾಗಿರಲಿದೆ.

ಡಿಸೈನ್ ಮತ್ತು ಫೀಚರ್ಸ್

ಹೊಸ ಥಾರ್ ವೆರಿಯೆಂಟ್ ನಲ್ಲಿ ಮಹೀಂದ್ರಾ ಕಂಪನಿಯು ಎಂಜಿನ್ ಮತ್ತು ಡ್ರೈವ್ ಸಿಸ್ಟಂ ಹೊರತಾಗಿ ಯಾವುದೇ ಗುರುತರ ಬದಲಾವಣೆ ಪರಿಚಯಿಸಿಲ್ಲ. ಹೊಸ ವೆರಿಯೆಂಟ್ ಸದ್ಯ ಹಾರ್ಡ್ ಟಾಪ್ ಆಯ್ಕೆಯಲ್ಲಿ ಮಾತ್ರ ಲಭ್ಯವಿರಲಿದ್ದು, ಹೊಸ ವೆರಿಯೆಂಟ್ ಖರೀದಿಗಾಗಿ ಇಂದಿನಿಂದಲೇ ಬುಕಿಂಗ್ ಆರಂಭವಾಗಿದೆ. ಹೊಸ ಬುಕಿಂಗ್ ಸಲ್ಲಿಸಲು ರೂ. 10 ಸಾವಿರ ಮುಂಗಡ ದರ ನಿಗದಿಪಡಿಸಲಾಗಿದ್ದು, ಇದೇ ತಿಂಗಳು 14ರಿಂದ ಹೊಸ ಕಾರಿನ ವಿತರಣೆ ಆರಂಭವಾಗಲಿದೆ.

Published On - 5:23 pm, Mon, 9 January 23

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್