AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahindra Thar Roxx: ಅ.3ರಿಂದ ಥಾರ್ ರಾಕ್ಸ್ ಖರೀದಿಗೆ ಬುಕಿಂಗ್ ಆರಂಭಿಸಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಹೊಸ ಥಾರ್ ರಾಕ್ಸ್ ಕಾರು ಖರೀದಿಗಾಗಿ ಅಧಿಕೃತ ಬುಕಿಂಗ್ ಆರಂಭಿಸುತ್ತಿದ್ದು, ಶೀಘ್ರದಲ್ಲಿಯೇ ಹೊಸ ಕಾರು ಗ್ರಾಹಕರಿಗೆ ವಿತರಣೆಯಾಗಲಿದೆ.

Mahindra Thar Roxx: ಅ.3ರಿಂದ ಥಾರ್ ರಾಕ್ಸ್ ಖರೀದಿಗೆ ಬುಕಿಂಗ್ ಆರಂಭಿಸಲಿದೆ ಮಹೀಂದ್ರಾ
ಮಹೀಂದ್ರಾ ಥಾರ್ ರಾಕ್ಸ್
Praveen Sannamani
Praveen Sannamani|

Updated on: Sep 26, 2024 | 10:46 PM

Share

ಮಹೀಂದ್ರಾ (Mahindra) ಕಂಪನಿಯು ತನ್ನ ಬಹುನೀರಿಕ್ಷಿತ ಥಾರ್ ರಾಕ್ಸ್ (Thar Roxx) ಖರೀದಿಗೆ ಅಕ್ಟೋಬರ್ 3ರಿಂದ ರೂ. 21 ಸಾವಿರ ಮುಂಗಡದೊಂದಿಗೆ ಅಧಿಕೃತವಾಗಿ ಬುಕಿಂಗ್ ಆರಂಭಿಸುತ್ತಿದ್ದು, ಹೊಸ ಕಾರು ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ. 4×2 ಮತ್ತು 4×4 ಆವೃತ್ತಿಗಳನ್ನು ಹೊಂದಿರುವ ಥಾರ್ ರಾಕ್ಸ್ ಕಾರು ಹಲವು ವಿಶೇಷತೆಗಳನ್ನು ಹೊಂದಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

4×2 ಡ್ರೈವ್ ಸಿಸ್ಟಂ ಹೊಂದಿರವ ಥಾರ್ ರಾಕ್ಸ್ ವೆರಿಯೆಂಟ್ ಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.99 ಲಕ್ಷದಿಂದ ರೂ. 20.49 ಲಕ್ಷ ಬೆಲೆ ಹೊಂದಿದ್ದರೆ 4×4 ಡ್ರೈವ್ ಸಿಸ್ಟಂ ಆಯ್ಕೆ ಹೊಂದಿರುವ ಥಾರ್ ರಾಕ್ಸ್ ವೆರಿಯೆಂಟ್ ಗಳು ಆರಂಭಿಕವಾಗಿ ರೂ. 18.79 ಲಕ್ಷದಿಂದ ರೂ. 22.49 ಲಕ್ಷ ಬೆಲೆ ಹೊಂದಿವೆ. ಆದರೆ ಹೊಸ 4×4 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳು ಡೀಸೆಲ್ ಎಂಜಿನ್ ನಲ್ಲಿ ಮಾತ್ರ ಲಭ್ಯವಿದ್ದು, 4×2 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿವೆ.

ಜೊತೆಗೆ ಹೊಸ 4×4 ವೆರಿಯೆಂಟ್ ಗಳು ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಹೊಂದಿದ್ದು, ಇವು ಸ್ನೋ, ಮಡ್ ಮತ್ತು ಸ್ಯಾಂಡ್ ಎನ್ನುವ ಮೂರು ಡ್ರೈವ್ ಮೋಡ್ ಗಳನ್ನು ಒಳಗೊಂಡ ಫೋರ್ ಎಕ್ಸ್ ಪ್ಲೋರ್ ಡ್ರೈವ್ ಟೆಕ್ನಾಲಜಿ ಪಡೆದುಕೊಂಡಿದೆ. ಜೊತೆಗೆ ಹೊಸ 4×4 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳಲ್ಲಿ ಆಫ್ ರೋಡ್ ಕೌಶಲ್ಯಕ್ಕೆ ಸಹಕಾರಿಯಾಗುವ ಸ್ಮಾರ್ಟ್ ಕ್ರೌಲ್, ಇಂಟೆಲಿಟರ್ನ್ ತಂತ್ರಜ್ಞಾನಗಳನ್ನು ನೀಡಲಾಗಿದ್ದು, ಇನ್ನುಳಿದಂತೆ 4×2 ಡ್ರೈವ್ ಸಿಸ್ಟಂ ಆಯ್ಕೆಯ ವೆರಿಯೆಂಟ್ ಗಳಲ್ಲಿನ ಫೀಚರ್ಸ್ ಗಳನ್ನೇ ಹೊಸ ಮಾದರಿಯಲ್ಲೂ ಮುಂದುವರಿಸಲಾಗಿದೆ.

ಇನ್ನು ಆಕರ್ಷಕವಾದ ವಿನ್ಯಾಸದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಆರಂಭಿಕ ಮಾದರಿಗೂ ಅನ್ವಯಿಸುವಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್ಸ್, ಸಿ ಆಕಾರದ ಹೋಲುವ ಎಲ್‌ಇಡಿ ಡಿಆರ್‌ಎಲ್ಸ್, ಸರ್ಕ್ಯೂಲರ್ ಆಗಿರೋ ಫಾಗ್ ಲೈಟ್ಸ್ ಜೊತೆಗೆ ಸ್ಪೋರ್ಟಿಯಾಗಿ ಬಂಪರ್ ನೀಡಲಾಗಿದೆ. ಜೊತೆಗೆ 19 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಹ್ ಗಳು, ಟೈಲ್‌ಗೇಟ್ ಮೌಂಟೆಡ್ ಸ್ಪೇರ್ ವ್ಹೀಲ್, ಎಲ್ಇಡಿ ಟೈಲ್‌ಲೈಟ್ಸ್ ನೀಡಲಾಗಿದೆ.

ಕಾರಿನ ಒಳಭಾಗದಲ್ಲೂ ಹಲವಾರು ಫೀಚರ್ಸ್ ಗಳಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಸರ್ಪೊಟ್ ಮಾಡುವ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಲಭ್ಯವಿದೆ. ಇದಲ್ಲದೇ ಸಂಪೂರ್ಣ ಡಿಜಿಟಲ್ ಆಗಿರುವ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮುಂಭಾಗದಲ್ಲಿ ವೆಂಟಿಲೇಟೆಡ್ ಆಸನಗಳು, ಪನೊರಮಿಕ್ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ರಿಯರ್ ಎಸಿ ವೆಂಟ್ಸ್ ನೀಡಲಾಗಿದೆ.

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ 6 ಏರ್ ಬ್ಯಾಗ್ ಗಳು, ಇಎಸ್ಇ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಆಟೋ ಹೆಡ್ ಲೈಟ್ ಅಂಡ್ ವೈಪರ್ಸ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಂ ನೀಡಲಾಗಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಸೌಲಭ್ಯವಿದ್ದು, ಇದು ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯುತ್ತದೆ.

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!