ಕೇವಲ ಒಂದೇ ಗಂಟೆಯಲ್ಲಿ ದಾಖಲೆ ಪ್ರಮಾಣದ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್ ರಾಕ್ಸ್

Mahindra Thar ROXX: ಮಹೀಂದ್ರಾ ಕಂಪನಿಯು ಇಂದಿನಿಂದ ತನ್ನ ಹೊಸ ಥಾರ್ ರಾಕ್ಸ್ 5 ಡೋರ್ ಎಸ್ ಯುವಿ ಖರೀದಿಗೆ ಬುಕಿಂಗ್ ಆರಂಭಿಸಿದ್ದು, ಹೊಸ ಕಾರಿಗೆ ಬುಕಿಂಗ್ ಆರಂಭವಾದ ಕೇವಲ ಒಂದೇ ಗಂಟೆಯಲ್ಲಿ ದಾಖಲೆ ಪ್ರಮಾಣದ ಬುಕಿಂಗ್ ಹರಿದುಬಂದಿದೆ.

ಕೇವಲ ಒಂದೇ ಗಂಟೆಯಲ್ಲಿ ದಾಖಲೆ ಪ್ರಮಾಣದ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್ ರಾಕ್ಸ್
ಮಹೀಂದ್ರಾ ಥಾರ್ ರಾಕ್ಸ್
Follow us
Praveen Sannamani
|

Updated on: Oct 03, 2024 | 5:03 PM

ಬಹುನೀರಿಕ್ಷಿತ ಮಹೀಂದ್ರಾ ಥಾರ್ ರಾಕ್ಸ್ (Mahindra Thar ROXX) ಎಸ್ ಯುವಿ ಮಾದರಿಯ ಖರೀದಿಗೆ ಇಂದಿನಿಂದ ಅಧಿಕೃತವಾಗಿ ಬುಕಿಂಗ್ ತೆರೆಯಲಾಗಿದ್ದು, ಬುಕಿಂಗ್ ಆರಂಭವಾದ ಕೇವಲ ಒಂದು ಗಂಟೆಯ ಅವಧಿಯಲ್ಲಿ ದಾಖಲೆ ಪ್ರಮಾಣದ ಬುಕಿಂಗ್ ಸ್ವಿಕರಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದ ಬುಕಿಂಗ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 1,76,218 ಯುನಿಟ್ ಗಳಿಗೆ ಬೇಡಿಕೆ ಹರಿದುಬಂದಿದ್ದು, ಮುಂದಿನ ಎರಡು ವಾರಗಳ ಅವಧಿಯಲ್ಲಿ ಹೊಸ ಕಾರಿನ ವಿತರಣೆ ಆರಂಭವಾಗಲಿದೆ.

ಥಾರ್ ರಾಕ್ಸ್ ಕಾರನ್ನು ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ 4×2 ಅಥವಾ 4×4 ಡ್ರೈವ್ ಸಿಸ್ಟಂ ಆಯ್ಕೆಗಳಲ್ಲಿ ಖರೀದಿಸಬಹುದಾಗಿದ್ದು, ಇವು ಎಂಎಕ್ಸ್1, ಎಂಎಕ್ಸ್3, ಎಎಕ್ಸ್3 ಎಲ್, ಎಂಎಕ್ಸ್5, ಎಎಕ್ಸ್5 ಎಲ್ ಮತ್ತು ಎಎಕ್ಸ್7 ಎಲ್ ಎನ್ನುವ ಆರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿವೆ. ಇವುಗಳಲ್ಲಿ 4×2 ಥಾರ್ ರಾಕ್ಸ್ ವೆರಿಯೆಂಟ್ ಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.99 ಲಕ್ಷದಿಂದ ರೂ. 20.49 ಲಕ್ಷ ಬೆಲೆ ಹೊಂದಿದ್ದರೆ 4×4 ಥಾರ್ ರಾಕ್ಸ್ ವೆರಿಯೆಂಟ್ ಗಳು ರೂ. 18.79 ಲಕ್ಷದಿಂದ ರೂ. 22.49 ಲಕ್ಷ ಬೆಲೆ ಹೊಂದಿವೆ.

ಲೈಫ್ ಸ್ಟೈಲ್ ಜೊತೆಗೆ ಕುಟುಂಬ ಸಮೇತರಾಗಿ ಪ್ರಯಾಣಿಸಲು ಅನುಕೂಲಕರವಾಗುವಂತೆ ಮಹೀಂದ್ರಾ ಕಂಪನಿಯು ಸಾಮಾನ್ಯ ಥಾರ್ ಜೊತೆಗೆ ಇದೀಗ ಹೊಸದಾಗಿ ಥಾರ್ ರಾಕ್ಸ್ ಮಾದರಿಯನ್ನು ಪರಿಚಯಿಸಿದ್ದು, ಹೊಸ ಕಾರಿನಲ್ಲಿ 5 ಡೋರ್ ಸೌಲಭ್ಯದ ಜೊತೆ ಹಲವು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ. ಹೊಸ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಪ್ರೇರಿತ 2.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 4×4 ಮಾದರಿಗಳು ಕೇವಲ ಡೀಸೆಲ್ ಎಂಜಿನ್ ಆಯ್ಕೆ ಹೊಂದಿವೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಇನ್ನು ಆಕರ್ಷಕವಾದ ವಿನ್ಯಾಸದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಆರಂಭಿಕ ಮಾದರಿಗೂ ಅನ್ವಯಿಸುವಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್ಸ್, ಸಿ ಆಕಾರದ ಹೋಲುವ ಎಲ್‌ಇಡಿ ಡಿಆರ್‌ಎಲ್ಸ್, ಸರ್ಕ್ಯೂಲರ್ ಆಗಿರೋ ಫಾಗ್ ಲೈಟ್ಸ್ ಜೊತೆಗೆ ಸ್ಪೋರ್ಟಿಯಾಗಿ ಬಂಪರ್ ನೀಡಲಾಗಿದೆ. ಜೊತೆಗೆ 19 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಹ್ ಗಳು, ಟೈಲ್‌ಗೇಟ್ ಮೌಂಟೆಡ್ ಸ್ಪೇರ್ ವ್ಹೀಲ್, ಎಲ್ಇಡಿ ಟೈಲ್‌ಲೈಟ್ಸ್ ನೀಡಲಾಗಿದೆ.

ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್ ಗಳಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಸರ್ಪೊಟ್ ಮಾಡುವ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಲಭ್ಯವಿದೆ. ಇದಲ್ಲದೇ ಸಂಪೂರ್ಣ ಡಿಜಿಟಲ್ ಆಗಿರುವ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮುಂಭಾಗದಲ್ಲಿ ವೆಂಟಿಲೇಟೆಡ್ ಆಸನಗಳು, ಪನೊರಮಿಕ್ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ರಿಯರ್ ಎಸಿ ವೆಂಟ್ಸ್ ನೀಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ 6 ಏರ್ ಬ್ಯಾಗ್ ಗಳು, ಇಎಸ್ಇ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಆಟೋ ಹೆಡ್ ಲೈಟ್ ಅಂಡ್ ವೈಪರ್ಸ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಂ ನೀಡಲಾಗಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಸೌಲಭ್ಯವಿದ್ದು, ಇದು ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯುತ್ತದೆ.

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ