AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahindra XUV 3XO: ಐಷಾರಾಮಿ ಫೀಚರ್ಸ್ ಗಳೊಂದಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Mahindra XUV 3XO: ಐಷಾರಾಮಿ ಫೀಚರ್ಸ್ ಗಳೊಂದಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ
Praveen Sannamani
|

Updated on: Apr 29, 2024 | 8:52 PM

Share

ಮಹೀಂದ್ರಾ (Mahindra) ಕಂಪನಿಯು ತನ್ನ ಹೊಚ್ಚ ಹೊಸ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಪ್ರಮುಖ ಒಂಬತ್ತು ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ರೂ. 15.49 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯು ಈ ಹಿಂದಿನ ಎಕ್ಸ್ ಯುವಿ300 ಸ್ಥಾನಕ್ಕೆ ಹೊಸದಾಗಿ ಪರಿಚಯಿಸಲಾಗಿದ್ದು, ಎಕ್ಸ್‌ಯುವಿ 3ಎಕ್ಸ್ಒ ಕೂಡಾ ಈ ಹಿಂದಿನ ಮಾದರಿಯೆಂತೆ ಕೆಲವು ಫೀಚರ್ಸ್ ಗಳೊಂದಿಗೆ ಮಹತ್ವದ ಬದಲಾವಣೆ ಪಡೆದುಕೊಂಡಿದೆ.

ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರಿನಲ್ಲಿ ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ, ಎಎಕ್ಸ್5, ಎಎಕ್ಸ್5 ಎಲ್, ಎಎಕ್ಸ್7, ಎಎಕ್ಸ್7 ಎಲ್ ವೆರಿಯೆಂಟ್ ಗಳನ್ನು ಹೊಂದಿದ್ದು, ಇದರಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆ ನೀಡಲಾಗಿದೆ. ಆರಂಭಿಕ ವೆರಿಯೆಂಟ್ ಗಳಲ್ಲಿ ಮಹೀಂದ್ರಾ ಕಂಪನಿಯು 1.2 ಲೀಟರ್ ಟರ್ಬೊ ಪೆಟ್ರೋಲ್, 1.5 ಲೀಟರ್ ಡೀಸೆಲ್ ಎಂಜಿನ್ ಮತ್ತು ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ 1.2 ಲೀಟರ್ ಡೈರೆಕ್ಟ್ ಇಂಜೆಕ್ಷನ್ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಎಕ್ಸ್‌ಯುವಿ 3ಎಕ್ಸ್ಒ ಕಾರಿನಲ್ಲಿರುವ 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 111 ಹಾರ್ಸ್ ಪವರ್ ಉತ್ಪಾದಿಸಲಿದ್ದರೆ 1.5 ಲೀಟರ್ ಡೀಸೆಲ್ ಮಾದರಿಯು ಕೂಡಾ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 117 ಹಾರ್ಸ್ ಪವರ್ ಉತ್ಪಾದಿಸುತ್ತದೆ. ಹಾಗೆಯೇ 1.2 ಲೀಟರ್ ಡೈರೆಕ್ಟ್ ಇಂಜೆಕ್ಷನ್ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್ ಕೂಡಾ ಮ್ಯಾನುವಲ್ ಮತ್ತು ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 131 ಹಾರ್ಸ್ ಪವರ್ ಉತ್ಪಾದಿಸಲಿದ್ದು, ಇದರಲ್ಲಿ ಪೆಟ್ರೋಲ್ ಮಾದರಿಗಳು ಪ್ರತಿ ಲೀಟರ್ ಗೆ 18 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ನೀಡಲಿದ್ದರೆ ಡೀಸೆಲ್ ಮಾದರಿಗಳು ಪ್ರತಿ ಲೀಟರ್ ಗೆ 20 ಕಿ.ಮೀ ನಿಂದ 21.2 ಕಿ.ಮೀ ತನಕ ಮೈಲೇಜ್ ನೀಡುತ್ತವೆ.

ಇದನ್ನೂ ಓದಿ: ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ ಜೋಡಿ

ಇನ್ನು ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರಿನಲ್ಲಿ ಸಂಪೂರ್ಣವಾಗಿ ಬದಲಾಯಿಸಲಾದ ವಿನ್ಯಾಸ ವೈಶಿಷ್ಟ್ಯತೆ ನೀಡಿದ್ದು, ಇದರಲ್ಲಿರುವ ಫ್ರಂಟ್ ಬಂಪರ್ ಮತ್ತು ಹೆಡ್ ಲ್ಯಾಂಪ್ಸ್ ಹೊಸ ವಿನ್ಯಾಸದೊಂದಿಗೆ ಮತ್ತಷ್ಟು ಸ್ಪೋರ್ಟಿಯಾಗಿದೆ. ಹಾಗೆಯೇ ಹೊಸ ವಿನ್ಯಾಸದ ಎಲ್ಇಡಿ ಡಿಆರ್ ಎಲ್ಎಸ್, ಬಂಪರ್ ನಲ್ಲಿ ದೊಡ್ಡದಾಗಿರುವ ಏರ್ ಇನ್ ಟೇಕ್ ನೀಡಲಾಗಿದ್ದು, ಮರುವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್ ಲೈಟ್ ಬಾರ್, ಸಿ ಆಕಾರದ ಟೈಲ್ ಲ್ಯಾಂಪ್ ಮತ್ತು ಡಾರ್ಕ್ ಕ್ರೊಮ್ ಹೊಂದಿರುವ ಅಲಾಯ್ ವ್ಹೀಲ್ ಗಳನ್ನು ನೋಡಬಹುದಾಗಿದೆ.

ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಬದಲಾವಣೆಗಳನ್ನು ತರಲಾಗಿದ್ದು, ಎಕ್ಸ್ ಯುವಿ400 ಇವಿ ಮಾದರಿಯಿಂದ ಕೆಲವು ಫೀಚರ್ಸ್ ಗಳನ್ನು ಇದರಲ್ಲಿ ಬಳಕೆ ಮಾಡಲಾಗಿದೆ. ಕಾರು ಪ್ರಯಾಣವನ್ನು ಮತ್ತಷ್ಟು ಆರಾಮದಾಯಕಗೊಳಿಸುವುದಕ್ಕಾಗಿ 10.25 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, ಡೈವರ್ ಡಿಸ್ ಪ್ಲೇ, ಪನೊರಮಿಕ್ ಸನ್ ರೂಫ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ, ವೈರ್ ಲೆಸ್ ಚಾರ್ಜಿಂಗ್ ಸಿಸ್ಟಂ, ಹಿಂಬದಿಯ ಆಸನಗಳಲ್ಲಿ ಸಿ ಟೈಪ್ ಚಾರ್ಜಿಂಗ್ ಪೋರ್ಟ್ಸ್ ಮತ್ತು ಎಸಿ ವೆಂಟ್ಸ್ ನೊಂದಿಗೆ 295 ಬೂಟ್ ಸ್ಪೆಸ್ ನೀಡಲಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ವಿವಿಧ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರುವ ಆಡ್ರೆನೊಕ್ಸ್ ತಂತ್ರಜ್ಞಾನ ನೀಡಲಾಗಿದ್ದು, ಪ್ರೀಮಿಯಂ ಚಾಲನಾ ಅನುಭವಕ್ಕಾಗಿ ಸಾಫ್ಟ್ ಟಚ್ ಕ್ಯಾಬಿನ್, 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಹಿಂಬದಿಯ ಆಸನ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 7-ಸ್ಪೀಕರ್ಸ್ ಹೊಂದಿರುವ ಹರ್ಮನ್ ಕಾರ್ಡನ್ ಆಡಿಯೋ ಸಿಸ್ಟಂ ನೀಡಲಾಗಿದೆ. ಈ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಇದನ್ನೂ ಓದಿ: ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಸುರಕ್ಷೆತೆಗಾಗಿ ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಆರಂಭಿಕ ಮಾದರಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್ ಗಳು, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಇಎಸ್ ಪಿ ಮತ್ತು ಐಸೋಫಿಕ್ಸ್ ಆ್ಯಂಕರ್ಸ್ ನೀಡಲಾಗಿದೆ. ಹಾಗೆಯೇ ಟಾಪ್ ಎಂಡ್ ಮಾದರಿಗಳಿಗಾಗಿ ಹೆಚ್ಚುವರಿಯಾಗಿ ಎಕ್ಸ್ ಯುವಿ700 ಕಾರಿನಲ್ಲಿರುವಂತೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಟೋ ಹೋಲ್ಡ್, ಹಿಲ್ ಸ್ಟಾರ್ಟ್, ಹಿಲ್ ಡಿಸೆಂಟ್, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾರ್ಟ್ ಮಾನಿಟರ್ ಒಳಗೊಂಡಿರುವ ಲೆವಲ್ 2 ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಒಳಗೊಂಡಿದೆ.