ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ

ಸಿಎನ್ ಜಿ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಾರುತಿ ಸುಜುಕಿ ಕಂಪನಿ ಇದೀಗ ಹೊಸ ಮೈಲಿಗಲ್ಲು ಸಾಧಿಸಿದೆ.

ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ ಸಿಎನ್ ಜಿ ಕಾರುಗಳು
Follow us
|

Updated on: Oct 02, 2024 | 10:52 PM

ದೇಶಿಯ ಮಾರುಕಟ್ಟೆಯಲ್ಲಿ ಸಾಂಪ್ರದಾಯಿಕ ಇಂಧನ ಪ್ರೇರಿತ ವಾಹನಗಳ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವುದರಿಂದ ಪರಿಸರ ಸ್ನೇಹಿ ವಾಹನಗಳ ಮಾರಾಟ ಕೂಡಾ ಗಮನಸೆಳೆಯುತ್ತಿದ್ದು, ಸಿಎನ್ ಜಿ (CNG) ಪ್ರೇರಿತ ವಾಹನಗಳ ಖರೀದಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ. ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಸದ್ಯ ಅಗ್ರಸ್ಥಾನದಲ್ಲಿದ್ದು, ಪ್ರತಿ ಕಾರು ಮಾದರಿಯಲ್ಲೂ ಸಿಎನ್ ಜಿ ಆವೃತ್ತಿಯನ್ನು ಮಾರಾಟ ಮಾಡುತ್ತಿದೆ.

2010ರಲ್ಲಿ ಮೊದಲ ಬಾರಿಗೆ ಸಿಎನ್ ಜಿ ಕಾರುಗಳ ಮಾರಾಟವನ್ನು ಪರಿಚಯಿಸಿದ ಮಾರುತಿ ಸುಜುಕಿ ಕಂಪನಿಯು ಇದೀಗ ತನ್ನ ಒಟ್ಟು ಕಾರು ಮಾರಾಟದಲ್ಲಿ ಶೇ. 36.1 ಪಾಲು ಹೊಂದಿದೆ. ಆರಂಭದಲ್ಲಿ ಪ್ರತಿ ತಿಂಗಳಿಗೆ 1 ಸಾವಿರದಿಂದ 2 ಸಾವಿರ ಯುನಿಟ್ ಮಾರಾಟ ಮಾಡುತ್ತಿದ್ದ ಮಾರುತಿ ಸುಜುಕಿ ಕಂಪನಿಯು ಇದೀಗ ಪ್ರತಿ ತಿಂಗಳಿಗೆ 50 ಸಾವಿರ ಯುನಿಟ್ ಮಾರಾಟ ಮಾಡುತ್ತಿದೆ. ಕಳೆದ ತಿಂಗಳು ಒಟ್ಟು 53,431 ಯುನಿಟ್ ಸಿಎನ್ ಜಿ ಕಾರುಗಳನ್ನು ಮಾರಾಟ ಮಾಡಿದ್ದು, ಹೊಸ ದಾಖಲೆ ನಿರ್ಮಿಸಿದೆ.

ಮೊದಲ ಬಾರಿಗೆ ಸಿಎನ್ ಜಿ ಕಾರುಗಳ ಬಿಡುಗಡೆಯ ನಂತರ ಇದುವರೆಗೆ ಬರೋಬ್ಬರಿ 10 ಲಕ್ಷಕ್ಕಿಂತಲೂ ಹೆಚ್ಚು ಸಿಎನ್ ಜಿ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ 2025ರ ವೇಳೆಗೆ ವಾರ್ಷಿಕವಾಗಿ 6 ಲಕ್ಷ ಸಿಎನ್ ಜಿ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಲಾಗಿದೆ. ಮಾರುತಿ ಸುಜುಕಿ ಸಿಎನ್ ಜಿ ಕಾರುಗಳಲ್ಲಿ ಸದ್ಯ ವ್ಯಾಗನ್ಆರ್, ಸೆಲೆರಿಯೊ, ಡಿಜೈರ್ ಮತ್ತು ಸ್ವಿಫ್ಟ್ ಕಾರುಗಳು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಮೈಲೇಜ್ ನೊಂದಿಗೆ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಗಮನಸೆಳೆಯುತ್ತಿವೆ.

ಇನ್ನು ಹೊಸ ತಲೆಮಾರಿನ ಸ್ವಿಫ್ಟ್ ಸಿಎನ್‌ಜಿ ಆವೃತ್ತಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಹೊಸ ಕಾರು ವಿಎಕ್ಸ್ಐ, ವಿಎಕ್ಸ್ಐ ಆಪ್ಷನ್ ಮತ್ತು ಜೆಡ್ಎಕ್ಸ್ಐ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ. ಇವು ಎಕ್ಸ್ ಶೋರೂಂ ಪ್ರಕಾರ ರೂ. 8.20 ಲಕ್ಷ, ರೂ.8.47 ಲಕ್ಷ ಮತ್ತು ರೂ. 9.20 ಲಕ್ಷ ಬೆಲೆ ಹೊಂದಿದ್ದು, 1.2 ಲೀಟರ್ ಜೆಡ್12ಇ ಪೆಟ್ರೋಲ್ ಎಂಜಿನ್ ಜೊತೆಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಜೋಡಣೆ ಮಾಡಲಾಗಿದೆ.

5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಬರೋಬ್ಬರಿ 32.85 ಕಿ.ಮೀ ಮೈಲೇಜ್ ನೀಡಲಿದ್ದು, ಭರ್ಜರಿ ಮೈಲೇಜ್ ಮಾತ್ರವಲ್ಲದೇ ಸ್ವಿಫ್ಟ್ ಸಿಎನ್‌ಜಿ ಕಾರಿನ ವಿಎಕ್ಸ್ಐ ವೆರಿಯೆಂಟ್ ಗೂ ಅನ್ವಯಿಸುವಂತೆ ಆರು ಏರ್ ಬ್ಯಾಗ್ ಗಳು, ಇಎಸ್ ಸಿ, ರಿಮೋಟ್ ಕಂಟ್ರೋಲ್ ಲಾಕಿಂಗ್, ಹಾಲೋಜೆನ್ ಪ್ರೊಜೆಕ್ಟರ್, 14 ಇಂಚಿನ ಅಲಾಯ್ ವ್ಹೀಲ್ಸ್, ಪವರ್ ವಿಂಡ್ಸೋ ನೀಡಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು