ಪ್ರತಿ ಚಾರ್ಜ್ ಗೆ 500 ಕಿ.ಮೀ ಮೈಲೇಜ್ ನೀಡಬಲ್ಲ ಮಾರುತಿ ಸುಜುಕಿ ಇವಿಎಕ್ಸ್ ಎಲೆಕ್ಟ್ರಿಕ್ ರೋಡ್ ಟೆಸ್ಟ್ ಶುರು

ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಪರೀಕ್ಷಿಸಲು ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ.

ಪ್ರತಿ ಚಾರ್ಜ್ ಗೆ 500 ಕಿ.ಮೀ ಮೈಲೇಜ್ ನೀಡಬಲ್ಲ ಮಾರುತಿ ಸುಜುಕಿ ಇವಿಎಕ್ಸ್ ಎಲೆಕ್ಟ್ರಿಕ್ ರೋಡ್ ಟೆಸ್ಟ್ ಶುರು
ಮಾರುತಿ ಸುಜುಕಿ ಇವಿಎಕ್ಸ್ ಎಲೆಕ್ಟ್ರಿಕ್
Follow us
Praveen Sannamani
|

Updated on: Nov 16, 2023 | 4:41 PM

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಹೆಚ್ಚುತ್ತಿರುವ ಬೇಡಿಕೆ ಆಧರಿಸಿ ಮಾರುತಿ ಸುಜುಕಿ (Maruti Suzuki) ಕಂಪನಿಯು ಸಹ ತನ್ನ ಹೊಸ ಇವಿ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಮೊದಲ ಹಂತದಲ್ಲಿ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿಗೆ ಪೈಪೋಟಿಯಾಗಿ ಇವಿಎಕ್ಸ್ ಕಾನ್ಸೆಪ್ಟ್ ಬಿಡುಗಡೆ ಮಾಡುವ ಸುಳಿವು ನೀಡಿದೆ. ಈ ವರ್ಷದ ಆರಂಭದಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇವಿಎಕ್ಸ್ ಕಾರು ಇದೀಗ ಉತ್ಪಾದನಾ ಆವೃತ್ತಿಯ ನಿರ್ಮಾಣದ ಕೊನೆಯ ಹಂತದಲ್ಲಿದೆ.

ಎಸ್ ಯುವಿ ಕೂಪೆ ವಿನ್ಯಾಸ ಹೊಂದಿರುವ ಹೊಸ ಇವಿಎಕ್ಸ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಕಾನ್ಸೆಪ್ಟ್ ಮಾದರಿಯಲ್ಲಿ ಹಲವು ತಾಂತ್ರಿಕ ಅಂಶಗಳನ್ನು ಮುಂದುವರೆಸುವ ಸಾಧ್ಯತೆಗಳಿದ್ದು, ಇದು ಹೆಚ್ಚಿನ ಮಟ್ಟದ ಸ್ಥಳೀಕರಣದೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ.

Maruti Suzuki EVX (1)

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಹೊಸ ಇವಿಎಕ್ಸ್ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 40 ಕೆವಿಹೆಚ್ ಮತ್ತು 60 ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಮಾದರಿಗಳನ್ನು ಬಿಡುಗಡೆ ಮಾಡಬಹುದಾಗಿದ್ದು, ಇದರಲ್ಲಿ ಆರಂಭಿಕ ಮಾದರಿಯು ಪ್ರತಿ ಚಾರ್ಜ್ ಗೆ 300 ರಿಂದ 350 ಕಿ.ಮೀ ಮೈಲೇಜ್ ನೀಡಿದರೆ ಹೈ ಎಂಡ್ ಮಾದರಿಯು ಪ್ರತಿ ಚಾರ್ಜ್ ಗೆ ಗರಿಷ್ಠ 450 ರಿಂದ 500 ಕಿ.ಮೀ ಮೈಲೇಜ್ ನೀಡಬಹುದಾಗಿದೆ.

ಇವಿಎಕ್ಸ್ ಕಾರು ಭರ್ಜರಿ ಮೈಲೇಜ್ ಜೊತೆಗೆ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲೂ ಗಮನಸೆಳೆಯಲಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರಲಿದೆ. ಜೊತೆಗೆ ಹೊಸ ಕಾರು ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಎನ್ನಲಾಗಿದ್ದು, 4200 ಎಂಎಂ ಉದ್ದಳತೆಯೊಂದಿಗೆ ಆರಾಮದಾಯಕ ಒಳಾಂಗಣ ಪಡೆದುಕೊಳ್ಳಲಿದೆ.

ಹೊಸ ಕಾರಿನ ಒಳಭಾಗದಲ್ಲಿ ಆಕರ್ಷಕವಾದ ಡ್ಯಾಶ್ ಬೋರ್ಡ್, ಟ್ವಿನ್ ಸ್ಕ್ರೀನ್ ಸೆಟ್ಅಪ್, ದೊಡ್ಡದಾದ ಇನ್ಪೋಟೈನ್ಮೆಂಟ್ ಸಿಸ್ಟಂ, ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವರ್ಟಿಕಲ್ ಎಸಿ ಮತ್ತು ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವ್ಹೀಲ್ ಸೌಲಭ್ಯಗಳಿರಲಿವೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳಿರಲಿದ್ದು, ಹೊಸ ಕಾರು ಟೊಯೊಟಾ ಇವಿ ಪ್ಲ್ಯಾಟ್ ಫಾರ್ಮ್ ನಿಂದಲೂ ಹಲವು ಫೀಚರ್ಸ್ ಎರವಲು ಪಡೆದುಕೊಳ್ಳಲಿದೆ.

ಇದನ್ನೂ ಓದಿ: ಮಾಲಿನ್ಯಕ್ಕೆ ಬ್ರೇಕ್ ಹಾಕಲು ಪಾರ್ಕಿಂಗ್ ಚಾರ್ಜ್ ನಲ್ಲಿ ಭಾರೀ ಹೆಚ್ಚಳ!

ಹೊಸ ಕಾರುಗಳ ಮಾರಾಟದಲ್ಲಿ ಸದ್ಯ ರೀಬ್ಯಾಡ್ಜ್ ಆವೃತ್ತಿಗಳ ಗಮನಸೆಳೆಯುತ್ತಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಇವಿಎಕ್ಸ್ ಕಾರು ಮಾದರಿಯನ್ನು ಸಹ ವಿವಿಧ ಹೆಸರಿನಲ್ಲಿ ಮಾರಾಟಗೊಳಿಸಲಿವೆ. ಮೊದಲ ಹಂತದಲ್ಲಿ ಮಾರುತಿ ಸುಜುಕಿ ಕಂಪನಿಯು ಹೊಸ ಕಾರನ್ನು ಬಿಡುಗಡೆ ಮಾಡಲಿದ್ದರೆ ಕೆಲವು ಬದಲಾವಣೆಗಳೊಂದಿಗೆ ಟೊಯೊಟಾ ಸಹ ಬದಲಿ ಹೆಸರಿನೊಂದಿಗೆ ದೇಶಿಯ ಮಾರುಕಟ್ಟೆಗೆ ಮತ್ತು ಪ್ರಮುಖ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಿದೆ.

ಮಾಹಿತಿಗಳ ಪ್ರಕಾರ ಮಾರುತಿ ಸುಜುಕಿ ಕಂಪನಿ ಹೊಸ ಕಾರನ್ನು ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಇದು ವಿವಿಧ ವೆರಿಯೆಂಟ್ ಗಳೊಂದಿಗೆ ರೂ. 12 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.