ADAS ಫೀಚರ್ಸ್ ನೊಂದಿಗೆ ಎಂಟ್ರಿ ನೀಡಲಿದೆ ಮಾರುತಿ ಸುಜುಕಿ ಫೇಮಸ್ ಕಾರು!

ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಕಾರು ಫ್ರಾಂಕ್ಸ್ ಸಬ್ ಕಂಪ್ಯಾಕ್ಟ್ ಎಸ್ ಯುವಿಯು ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ರಸ್ತೆಗಿಳಿಯುತ್ತಿದ್ದು, ಹೊಸ ಕಾರಿನ ಗರಿಷ್ಠ ಸುರಕ್ಷತೆ ನೀಡುವ ಎಡಿಎಎಸ್ ಫೀಚರ್ಸ್ ನೀಡಲಾಗುತ್ತಿದೆ ಎನ್ನಲಾಗಿದೆ.

ADAS ಫೀಚರ್ಸ್ ನೊಂದಿಗೆ ಎಂಟ್ರಿ ನೀಡಲಿದೆ ಮಾರುತಿ ಸುಜುಕಿ ಫೇಮಸ್ ಕಾರು!
ಮಾರುತಿ ಸುಜುಕಿ ಫ್ರಾಂಕ್ಸ್
Follow us
Praveen Sannamani
|

Updated on:Aug 29, 2024 | 9:31 PM

ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ (Maruti Suzuki) ಕಂಪನಿಯು ತನ್ನ ಹೊಸ ಕಾರು ಉತ್ಪನ್ನಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರೀಮಿಯಂ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ಹಂತ-ಹಂತವಾಗಿ ಉನ್ನತೀಕರಿಸುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಫ್ರಾಂಕ್ಸ್ ಸಬ್ ಕಂಪ್ಯಾಕ್ಟ್ ಎಸ್ ಯುವಿಯು ಸಹ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುವ ಸುಳಿವು ನೀಡಿದೆ.

ಹೌದು, ಮಾರುತಿ ಸುಜುಕಿ ಪ್ರೀಮಿಯಂ ಕಾರು ಮಾದರಿಯಾಗಿರು ಫ್ರಾಂಕ್ಸ್ ಶೀಘ್ರದಲ್ಲಿಯೇ ಲೆವಲ್ 1 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಪಡೆದುಕೊಳ್ಳುತ್ತಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ಪೂರಕವಾಗಿ ಎಡಿಎಎಸ್ ಸೌಲಭ್ಯ ಹೊಂದಿರುವ ಫ್ರಾಂಕ್ಸ್ ಟೆಸ್ಟಿಂಗ್ ಕಾರು ಮಾದರಿಯು ಹರಿಯಾಣದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಎಡಿಎಎಸ್ ಸೌಲಭ್ಯ ಹೊಂದಿರುವ ಫ್ರಾಂಕ್ಸ್ ಕಾರಿನಲ್ಲಿ 360 ಡಿಗ್ರಿ ಕ್ಯಾಮೆರಾ ಜೊತೆಗೆ ಹಲವು ಆಕ್ಟಿವ್ ಸೇಫ್ಟಿ ಫೀಚರ್ಸ್ ಸೇರ್ಪಡೆ ಮಾಡಲಾಗಿದೆ.

ಎಡಿಎಎಸ್ ಫೀಚರ್ಸ್ ಹೊಂದಿರುವ ಕಾರುಗಳು ಸಾಮಾನ್ಯ ಸುರಕ್ಷಾ ಸೌಲಭ್ಯಗಳಿಂತಲೂ ಹೆಚ್ಚು ಸುಧಾರಿತವಾಗಿದ್ದು, ಇವು ರಡಾರ್ ಸೌಲಭ್ಯದೊಂದಿಗೆ ಸಂಭಾವ್ಯ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಜೊತೆಗೆ ಸುರಕ್ಷಿತ ಚಾಲನಾ ಪ್ರವೃತ್ತಿಯನ್ನು ಬೆಂಬಲಿಸುವ ಮೂಲಕ ಅಪಘಾತಗಳ ತೀವ್ರತೆಯನ್ನು ತಗ್ಗಿಸಲಿದ್ದು, ಅಪಘಾತಗಳಲ್ಲಿನ ಪ್ರಾಣಹಾನಿಯನ್ನು ತಗ್ಗಿಸುವಲ್ಲಿ ನೆರವಾಗುತ್ತದೆ.

ಇತ್ತೀಚೆಗೆ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ ಯುವಿ ಮಾದರಿಗಳಾದ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೊನೆಟ್ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲೂ ಲೆವಲ್ 1 ಎಡಿಎಎಸ್ ಸೌಲಭ್ಯವನ್ನು ನೀಡಲಾಗಿದ್ದು, ಇದೇ ಕಾರಣಕ್ಕೆ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಮಾರುತಿ ಸುಜುಕಿ ಸಹ ಫ್ರಾಂಕ್ಸ್ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ನೀಡುವ ಸಾಧ್ಯತೆಗಳಿವೆ. ಎಡಿಎಎಸ್ ಸೌಲಭ್ಯದ ಕಾರ್ಯಕ್ಷಮತೆ ಕುರಿತು ಸದ್ಯ ವಿವಿಧ ಹಂತದ ಪರೀಕ್ಷೆಗಳನ್ನು ಕೈಗೊಂಡಿರುವ ಮಾರುತಿ ಸುಜುಕಿಯು ಹೊಸ ಸೌಲಭ್ಯ ಹೊಂದಿರುವ ಫ್ರಾಂಕ್ಸ್ ಕಾರನ್ನು 2025ರ ಮಾದರಿಯಲ್ಲಿ ಪರಿಚಯಿಸಬಹುದಾಗಿದೆ.

ಇನ್ನು ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಫ್ರಾಂಕ್ಸ್ ಕಾರು ವಿವಿಧ ಎಂಜಿನ್ ಆಯ್ಕೆಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ಲಭ್ಯವಿದೆ. ಇದರಲ್ಲಿ 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಲೀಟರ್ ಗೆ ಗರಿಷ್ಠ 22.89 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಕಾರಿನಲ್ಲಿ ಇನ್ನು ಹೆಚ್ಚಿನ ಮೈಲೇಜ್ ಬಯಸುವ ಗ್ರಾಹಕರಿಗೆ ಸಿಎನ್ ಜಿ ಆವೃತ್ತಿ ಕೂಡಾ ಲಭ್ಯವಿದ್ದು, ಸಿಎನ್ ಜಿ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಸ್-ಸಿಎನ್ ಜಿ ಕಿಟ್ ಜೋಡಣೆ ಪಡೆದುಕೊಂಡಿದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 77.5 ಹಾರ್ಸ್ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಇದು ಪ್ರತಿ ಲೀಟರ್ ಸಿಎನ್ ಜಿಗೆ ಗರಿಷ್ಠ 28.51 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದು ಈ ವಿಭಾಗದ ಕಾರುಗಳಲ್ಲೇ ಅತಿ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಕಾರು ಮಾದರಿಯಾಗಿ ಹೊರಹೊಮ್ಮಿದೆ.

Published On - 9:30 pm, Thu, 29 August 24

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ