Maruti Suzuki: ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗೆ ಸಖತ್ ಡಿಮ್ಯಾಂಡ್

ಮಾರುತಿ ಸುಜುಕಿ ಕಂಪನಿಯು ಹೊಸ ಫ್ರಾಂಕ್ಸ್ ಕ್ರಾಸ್ ಓವರ್ ಎಸ್ ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದೆ.

Maruti Suzuki: ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗೆ ಸಖತ್ ಡಿಮ್ಯಾಂಡ್
ಮಾರುತಿ ಸುಜುಕಿ ಫ್ರಾಂಕ್ಸ್
Follow us
Praveen Sannamani
|

Updated on: Oct 03, 2023 | 10:00 AM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ತನ್ನ ಹೊಸ ಫ್ರಾಂಕ್ಸ್(Fronx) ಕಂಪ್ಯಾಕ್ಟ್ ಎಸ್ ಯುವಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವಿಶೇಷ ಫೀಚರ್ಸ್ ಗಳೊಂದಿಗೆ ದಾಖಲೆ ಪ್ರಮಾಣದ ಬುಕಿಂಗ್ ಪಡೆದುಕೊಳ್ಳುತ್ತಿದೆ. ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆ ಹೊಂದಿರುವ ಹೊಸ ಕಾರು ಮಧ್ಯಮ ವರ್ಗದ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದು, ಸಿಎನ್ ಜಿ ವರ್ಷನ್ ಬಿಡುಗಡೆಯ ನಂತರ ಮತ್ತಷ್ಟು ಬೇಡಿಕೆ ಹರಿದುಬರುತ್ತಿದೆ.

ಗ್ರ್ಯಾಂಡ್ ವಿಟಾರಾ ಎಸ್ ಯುವಿ ಮತ್ತು ಬಲೆನೊ ಪ್ರೀಮಿಯಂ ಹ್ಯಾಚ್ ಬ್ಯಾಕ್ ಕಾರಿನ ವಿನ್ಯಾಸ ಆಧರಿಸಿ ಅಭಿವೃದ್ದಿಗೊಂಡಿದೆ ಹೊಸ ಫ್ರಾಂಕ್ಸ್ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 7.47 ಲಕ್ಷದಿಂದ ರೂ. 13.14 ಲಕ್ಷ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 1.2 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಸಿಎನ್ ಜಿ ವರ್ಷನ್ ಆವೃತ್ತಿಯನ್ನು ಪರಿಚಯಿಸಲಾಗಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ 440 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐಎಕ್ಸ್1 ಇವಿ ಕಾರು ಬಿಡುಗಡೆ

ಫ್ರಾಂಕ್ಸ್ ಕಾರಿನ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ ಗೆ 21.79 ಕಿ.ಮೀ ನಿಂದ 22.89 ಕಿ.ಮೀ ಮೈಲೇಜ್ ನೀಡಲಿದ್ದರೆ ಸಿಎನ್ ಜಿ ಮಾದರಿಯು ಪ್ರತಿ ಕೆಜಿಗೆ 28.51 ಕಿ.ಮೀ ಮೈಲೇಜ್ ನೀಡುತ್ತದೆ.

ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯು ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿದ ನಂತರ ಸಂಪೂರ್ಣವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್ ಜಿ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕಂಪನಿಯು ಇದುವರೆಗೆ ಸುಮಾರು 13 ಕಾರು ಮಾದರಿಗಳಲ್ಲಿ ಸಿಎನ್ ಜಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿದೆ. ಇದೀಗ ಹೊಸ ಫ್ರಾಂಕ್ಸ್ ಕಾರು ಮಾದರಿಯಲ್ಲೂ ಕೂಡಾ ಸಿಎನ್ ಜಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಎಸ್-ಸಿಎನ್ ಜಿ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಭರ್ಜರಿ ಮೈಲೇಜ್ ಹಿಂದಿರುಗಿಸುತ್ತಿರುವುದು ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಜೊತೆಗೆ ಆಕರ್ಷಕ ಹೊರಭಾಗದ ವಿನ್ಯಾಸದ ಜೊತೆಗೆ ಐಷಾರಾಮಿ ಅನುಭವ ನೀಡುವ ಡ್ಯುಯಲ್ ಕಲರ್ ಕ್ಯಾಬಿನ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರಲ್ಲಿರುವ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಸ್ಮಾರ್ಟ್ ಪ್ಲೇ ಪ್ರೋ ಸಿಸ್ಟಂ, ಸ್ಟಿರಿಂಗ್ ಮೌಂಟೆಡ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ವೈರ್ ಲೆಸ್ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಸುರಕ್ಷತೆಗಾಗಿ ಡ್ಯುಯಲ್ ಏರ್ ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

ಇದನ್ನೂ ಓದಿ: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ

ಇನ್ನು ಹೊಸ ಫ್ರಾಂಕ್ಸ್ ಸಿಎನ್ ಜಿ ಕಾರು ಮಾದರಿಯು ಸಾಮಾನ್ಯ ಸಿಗ್ಮಾ ಮತ್ತು ಡೆಲ್ಟಾ ಪೆಟ್ರೋಲ್ ಆವೃತ್ತಿಯಂತೆ ಹಲವಾರು ಫೀಚರ್ಸ್ ಹೊಂದಿದ್ದು, ಸಿಎನ್ ಜಿ ಕಿಟ್ ಜೋಡಣೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ರೂ. 95 ಸಾವಿರದಷ್ಟು ದುಬಾರಿಯಾಗಿರಲಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ