Maruti Suzuki Fronx: ಭರ್ಜರಿ ಮೈಲೇಜ್ ನೀಡುತ್ತದೆ ಮಾರುತಿ ಸುಜುಕಿ ಫ್ರಾಂಕ್ಸ್!
ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಫ್ರಾಂಕ್ಸ್ ಕಂಪ್ಯಾಕ್ಟ್ ಎಸ್ ಯುವಿ ಮಾದರಿಯನ್ನ ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಇಂಧನ ದಕ್ಷತೆ ಹೊಂದಿರಲಿದೆ.
ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ(Maruti Suzuki) ಕಂಪನಿಯು ಶೀಘ್ರದಲ್ಲಿಯೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳಲ್ಲಿ ಫ್ರಾಂಕ್ಸ್(Fronx) ಕಂಪ್ಯಾಕ್ಟ್ ಎಸ್ ಯುವಿ ಮಾದರಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಫ್ರಾಂಕ್ಸ್ ಕಾರನ್ನ ಮಾರುತಿ ಸುಜುಕಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ವಿಟಾರಾ ಮತ್ತು ಬಲೆನೊ ಹ್ಯಾಚ್ ಬ್ಯಾಕ್ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುತ್ತಿದ್ದು, ಕ್ರಾಸ್ ಓವರ್ ಎಸ್ ಯುವಿ ಮಾದರಿಯಾಗಿ ಬಿಡುಗಡೆಯಾಗಲಿದೆ. ಹೊಸ ಕಾರು ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಸುಮಾರು 15 ಸಾವಿರಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದೆ.
ಇದನ್ನೂ ಓದಿ: ಅತ್ಯುತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಬೆಸ್ಟ್ ಕಾರುಗಳಿವು!
ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.2 ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಇದರಲ್ಲಿ 1.2 ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಲೀಟರ್ ಗೆ ಗರಿಷ್ಠ 22.89 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
ಹಾಗೆಯೇ ಹೊಸ ಕಾರಿನ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಗೆ ಗರಿಷ್ಠ 21.79 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದರಲ್ಲಿ ಟರ್ಬೊ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ 20.01 ಕಿ.ಮೀ ನಿಂದ 21.05 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಇದರೊಂದಿಗೆ ಹೊಸ ಕಾರು ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯಲಿದ್ದು, ಇದರಲ್ಲಿ 1.2 ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು 88.5 ಹಾರ್ಸ್ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಮಾದರಿಯು 98.06 ಹಾರ್ಸ್ ಪವರ್ ಮತ್ತು 147.6 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಇದನ್ನೂ ಓದಿ: ಬಜೆಟ್ ಬೆಲೆಯ ಬೆಸ್ಟ್ ಸಿಎನ್ ಜಿ ಕಾರುಗಳಿವು!
ಇದರೊಂದಿಗೆ ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಹೈ ಎಂಡ್ ಮಾದರಿಯಲ್ಲಿ 6 ಏರ್ ಬ್ಯಾಗ್, ಇಎಸ್ ಪಿ, ಸ್ಪೀಡ್ ಅಲರ್ಟ್, ಎಬಿಎಸ್ ಜೊತೆಗೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 360 ಡಿಗ್ರಿ ಸರೌಂಡ್ ವ್ಯೂ ಕ್ಯಾಮೆರಾ ಸೌಲಭ್ಯಗಳನ್ನು ಜೋಡಿಸಿದ್ದು, ಈ ಮೂಲಕ ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಗಳಿವೆ.
Published On - 1:12 pm, Fri, 7 April 23