ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಮಾರುತಿ ಸುಜುಕಿ ಇನ್ವಿಕ್ಟೋ ಬಿಡುಗಡೆಗೆ ಸಿದ್ದ..

ಮಾರುತಿ ಸುಜುಕಿ ಕಂಪನಿಯು ತನ್ನ ಹೊಚ್ಚ ಹೊಸ ಇನ್ವಿಕ್ಟೋ ಎಂಪಿವಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಖರೀದಿಗೆ ಇದೀಗ ಬುಕಿಂಗ್ ಆರಂಭಿಸಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಮಾರುತಿ ಸುಜುಕಿ ಇನ್ವಿಕ್ಟೋ ಬಿಡುಗಡೆಗೆ ಸಿದ್ದ..
ಮಾರುತಿ ಸುಜುಕಿ ಇನ್ವಿಕ್ಟೋ ಬಿಡುಗಡೆಗೆ ಸಿದ್ದ
Follow us
Praveen Sannamani
|

Updated on:Jun 19, 2023 | 10:04 PM

ಹೊಸ ಕಾರು ಮಾರಾಟ ದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ(Maruti Suzuki) ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಎಂಪಿವಿ(MPV) ವಿಭಾಗದಲ್ಲಿ ಹೊಚ್ಚ ಹೊಸ ಕಾರು ಪರಿಚಯಿಸಲಿದೆ. ಹೊಸ ಇನ್ವಿಕ್ಟೋ(Invicto) ಕಾರು ಮಾದರಿಯು ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಗೆ ತೀವ್ರ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಖರೀದಿಗಾಗಿ ಇದೀಗ ರೂ.25 ಸಾವಿರ ಮುಂಗಡದೊಂದಿಗೆ ಬುಕಿಂಗ್ ತೆರೆದಿದೆ.

ಮಾರುತಿ ಸುಜುಕಿ ಕಂಪನಿಯು ಹೊಸ ಇನ್ವಿಕ್ಟೊ ಎಂಪಿವಿ ಮಾದರಿಯನ್ನು ಮುಂದಿನ ತಿಂಗಳು ಜುಲೈ 5ರಂದು ಅನಾವರಣಗೊಳಿಸಲು ನಿರ್ಧರಿಸಿದ್ದು, ಹೊಸ ಕಾರನ್ನು ಮಾರುತಿ ಸುಜುಕಿ ಕಂಪನಿಯು ಟೊಯೊಟಾ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಪಡಿಸಿದೆ. ಹೀಗಾಗಿ ಇದು ಇತ್ತೀಚೆಗೆ ಬಿಡುಗಡೆಗೊಂಡಿರುವ ಇನೋವಾ ಹೈಕ್ರಾಸ್‌ ವಿನ್ಯಾಸ ಆಧರಿಸಿದ್ದು, ಅದಕ್ಕಿಂತ ವಿಭಿನ್ನವಾದ ಡಿಸೈನ್ ಮತ್ತು ಫೀಚರ್ಸ್ ಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಇದನ್ನೂ ಓದಿ: ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಅನಾವರಣ

ಹೊಸ ಇನ್ವಿಕ್ಟೊ ಕಾರು ಮಾರುತಿ ಸುಜುಕಿ ನಿರ್ಮಾಣದ ಇತರೆ ಕಾರುಗಳಿಂತಲೂ ತುಸು ವಿಭಿನ್ನವಾಗಿರಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಮತ್ತು ಮಾರ್ಡನ್ ಡಿಸೈನ್ ಪಡೆದುಕೊಂಡಿರಲಿದೆ. ಹೀಗಾಗಿ ಬೆಲೆಯಲ್ಲೂ ತುಸು ದುಬಾರಿ ಎನ್ನಿಸಿದರೂ ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಹೈಕ್ರಾಸ್ ಎಂಪಿವಿಗಿಂತಲೂ ತುಸು ಕಡಿಮೆ ಇದರಲಿದ್ದು, ಇದು ಮಧ್ಯಮ ಕ್ರಮಾಂಕದ ಎಂಪಿವಿ ಕಾರು ಖರೀದಿದಾರರಿಗೆ ಪ್ರಮುಖ ಆಕರ್ಷಣೆಯಾಗಿರಲಿದೆ.

ಮಾರುತಿ ಸುಜುಕಿ ಕಂಪನಿಯು ಹೊಸ ಕಾರನ್ನು ಟೊಯೊಟಾ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಪಡಿಸುತ್ತಿರುವುದರಿಂದ ಹೊಸ ಕಾರು ಬಿಡದಿ ಕಾರು ಉತ್ಪಾದನಾ ಘಟಕದಲ್ಲಿಯೇ ನಿರ್ಮಾಣಗೊಳ್ಳಲಿದ್ದು, ಇದು ಇನೋವಾ ಹೈಕ್ರಾಸ್ ನಲ್ಲಿರುವಂತೆ 2.0-ಲೀಟರ್ ಪೆಟ್ರೋಲ್ ಹಾಗೂ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹೀಗಾಗಿ ಇದರಲ್ಲಿ ಇ-ಸಿವಿಟಿ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರಲಿದ್ದು, ಮ್ಯಾನುವಲ್ ಆಯ್ಕೆ ಲಭ್ಯವಾಗುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಟಾಟಾ ಪಂಚ್ ಗಿಂತ ಹ್ಯುಂಡೈ ಎಕ್ಸ್ ಟರ್ ಯಾಕೆ ಬೆಸ್ಟ್?

ಇನ್ನು ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಇನೋವಾ ಹೈಕ್ರಾಸ್ ಮಾದರಿಯಲ್ಲಿಯೇ ಹಲವಾರು ಪ್ರೀಮಿಯಂ ಫೀಚರ್ಸ್ ಜೋಡಣೆ ಮಾಡಿದ್ದು, ಹೊಸ ಕಾರು 7 ಸೀಟರ್ ಮತ್ತು 8 ಸೀಟರ್ ಆಯ್ಕೆಯೊಂದಿಗೆ 12.8 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಕಾರ್ ಪ್ಲೇ, ಆಲ್ ಎಲ್ಇಡಿ ಹೆಡ್ ಲ್ಯಾಂಪ್ಸ್, 60 ಕ್ಕೂ ಹೆಚ್ಚು ಕಾರ್ ಕನೆಕ್ಟೆಡ್ ಟೆಕ್, ಪನೊರಮಿಕ್ ಸನ್ ರೂಫ್, ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ ಜೋಡಣೆ ಹೊಂದಿರಲಿದೆ. ಈ ಮೂಲಕ ಹೊಸ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ರೂ. 18 ಲಕ್ಷದಿಂದ ರೂ. 20 ಲಕ್ಷ ಬೆಲೆಯ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿದ್ದು, ಅನಾವರಣದ ದಿನದಂದು ಮತ್ತಷ್ಟು ಮಾಹಿತಿ ದೊರಲಿದೆ.

Published On - 10:02 pm, Mon, 19 June 23

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ