Maruti Suzuki Invicto: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇನ್ವಿಕ್ಟೊ ಎಂಪಿವಿ ಬಿಡುಗಡೆ

ಮಾರುತಿ ಸುಜುಕಿ ಕಂಪನಿ ತನ್ನ ಬಹುನೀರಿಕ್ಷಿತ ಇನ್ವಿಕ್ಟೊ ಎಂಪಿವಿ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

Follow us
Praveen Sannamani
|

Updated on:Jul 05, 2023 | 9:06 PM

ದೇಶದ ಅತಿದೊಡ್ಡ ಕಾರು ಉತ್ಪಾದನೆ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ತನ್ನ ಹೊಚ್ಚ ಹೊಸ ಇನ್ವಿಕ್ಟೊ(Invicto) ಎಂಪಿವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.79 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಹೊಸ ಇನ್ವಿಕ್ಟೊ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಜಿಟಾ ಪ್ಲಸ್(7 ಸೀಟರ್) ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ರೂ. 24.79 ಲಕ್ಷ ಬೆಲೆ ಹೊಂದಿದೆ. ಹಾಗೆಯೇ ಜಿಟಾ ಪ್ಲಸ್(8 ಸೀಟರ್) ವೆರಿಯೆಂಟ್ ರೂ. 24.84 ಲಕ್ಷ ಮತ್ತು ಆಲ್ಫಾ ಪ್ಲಸ್(7 ಸೀಟರ್) ವೆರಿಯೆಂಟ್ ರೂ. 28.42 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದು ಟೊಯೊಟಾ ಕಂಪನಿ ಜೊತೆಗಿನ ಪಾಲುದಾರಿಕೆ ಯೋಜನೆ ಅಡಿ ಮಾರಾಟಗೊಳ್ಳಲಿದೆ.

Maruti Suzuki Invicto (2)

ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಾಗಿ ಒಂದಾಗಿರುವ ಜಪಾನ್ ದೈತ್ಯ ಕಾರು ಉತ್ಪಾದನಾ ಕಂಪನಿಗಳಾಗಿರುವ ಟೊಯೊಟಾ ಮತ್ತು ಸುಜುಕಿ ಕಂಪನಿಗಳು ಭಾರತದಲ್ಲಿ ರೀಬ್ಯಾಡ್ಜ್ ಮಾದರಿಗಳ ಉತ್ಪಾದನೆ ಮೇಲೆ ಹೆಚ್ಚಿನ ಹೂಡಿಕೆ ಮಾಡುತ್ತಿವೆ. ಇದರ ಭಾಗವಾಗಿ ಈಗಾಗಲೇ ಗ್ಲಾಂಝಾ, ಅರ್ಬನ್ ಕ್ರೂಸರ್, ಅರ್ಬನ್ ಕ್ರೂಸರ್ ಹೈರೈಡರ್ ಕಾರುಗಳನ್ನು ಪರಿಚಯಿಸಿದ್ದು, ಇದೀಗ ಹೊಸದಾಗಿ ಇನ್ವಿಕ್ಟೊ ಕಾರು ಮಾದರಿಯನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಎಥೆನಾಲ್‌ ಪ್ರೇರಿತ ವಾಹನಗಳ ಬಿಡುಗಡೆಗೆ ದಿನಗಣನೆ- ನಿತಿನ್ ಗಡ್ಕರಿ

ಇನ್ವಿಕ್ಟೊ ಕಾರು ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿದ್ದ ಇನೋವಾ ಹೈಕ್ರಾಸ್ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿದ್ದು, ಇದು ವಿನ್ಯಾಸದ ತುಸು ಬದಲಾವಣೆಗಳನ್ನು ಹೊರತುಪಡಿಸಿ ಬಹುತೇಕ ಹೈಕ್ರಾಸ್ ಮಾದರಿಯಲ್ಲಿಯೇ ಎಂಜಿನ್ ಮತ್ತು ತಾಂತ್ರಿಕ ಅಂಶಗಳನ್ನು ಹಂಚಿಕೊಂಡಿದೆ. ಆದರೆ ಹೊಸ ಕಾರನ್ನು ಮಾರುತಿ ಸುಜುಕಿ ಕಂಪನಿಯು ಸಂಪೂರ್ಣವಾಗಿ ಹೈಬ್ರಿಡ್ ಆವೃತ್ತಿಯಲ್ಲಿ ಮಾತ್ರ ಪರಿಚಯಿಸಿದ್ದು, ಹೈಕ್ರಾಸ್ ಕಾರು ಮಾದರಿಯು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎರಡರಲ್ಲೂ ಖರೀದಿ ಲಭ್ಯವಿದೆ.

ಎಂಜಿನ್ ಮತ್ತು ಮೈಲೇಜ್

ಮಾರುತಿ ಸುಜುಕಿ ಕಂಪನಿಯು ಹೊಸ ಇನ್ವಿಕ್ಟೊ ಕಾರನ್ನು 2.0 ಲೀಟರ್ ಪೆಟ್ರೋಲ್ ಹೈಬ್ರಿಡ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆ ಮಾಡಿದ್ದು, ಇದು ಇ-ಸಿವಿಟಿ ಗೇರ್ ಬಾಕ್ಸ್ ನೊಂದಿಗೆ 184 ಹಾರ್ಸ್ ಪವರ್ ಉತ್ಪಾದಿಸುತ್ತಿದೆ. ಈ ಮೂಲಕ ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್ ಗೆ ಎಲೆಕ್ಟ್ರಿಕ್ ಮೋಡ್ ಸಂಯೋಜನೆಯೊಂದಿಗೆ ಬರೋಬ್ಬರಿ 23.24 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Maruti Suzuki Invicto (3)

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಇನ್ವಿಕ್ಟೊ ಕಾರಿನ ವಿನ್ಯಾಸವು ಮೇಲ್ನೊಟಕ್ಕೆ ಹೈಕ್ರಾಸ್ ಮಾದರಿಯೆಂತೆ ಕಂಡರೂ ಕೂಡಾ ಮುಂಭಾಗದಲ್ಲಿನ ಕ್ರೊಮ್ ಸ್ಲಾಟ್ ಸ್ಪೋರ್ಟಿ ಗ್ರಿಲ್, ಎಲ್ ಇಡಿ ಹೆಡ್ ಲೈಟ್ಸ್, ಸುಜುಕಿ ಬ್ಯಾಡ್ಜಿಂಗ್, 17 ಇಂಚಿನ ಅಲಾಯ್ ವ್ಹೀಲ್ ಮತ್ತು ಸ್ಪೋರ್ಟಿಯಾಗಿರುವ ಟೈಲ್ ಗೇಟ್ ಪ್ರಮುಖ ಆಕರ್ಷಣೆಯಾಗಿವೆ. ಹಾಗೆಯೇ ಹೊಸ ಕಾರಿನ ಒಳಭಾಗವೂ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಅನುಭವ ನೀಡುವ ಲೆದರ್ ಆಸನಗಳು, ಮುಂಭಾಗದ ಆಸನಗಳಲ್ಲಿ ವೆಂಟಿಲೆಷನ್ ಸಿಸ್ಟಂ, 8 ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಆಸನ, ಮಲ್ಟಿ ಲೆಯರ್ಡ್ ಡ್ಯಾಶ್ ಬೋರ್ಡ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸರ್ಪೊಟ್ ಮಾಡಬಹುದಾದ 10.1 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, ಪನೊರಮಿಕ್ ಸನ್ ರೂಫ್, ಆ್ಯಂಬಿಯೆಂಟ್ ಲೈಟಿಂಗ್ಸ್, ಪ್ರೀಮಿಯಂ ಆಡಿಯೋ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಪವರ್ಡ್ ಟೈಲ್ ಗೇಟ್, ವೈರ್ ಲೆಸ್ ಫೋನ್ ಚಾರ್ಜರ್ ಮತ್ತು ಸುಜುಕಿ ಕನೆಕ್ಟ್ ಸೂಟ್ ಜೋಡಿಸಲಾಗಿದೆ.

ಇದನ್ನೂ ಓದಿ: ವಾಹನಗಳ ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕಿ ಹೊಸ ದಾಖಲೆ ಸೃಷ್ಠಿಸಿದ ಭಾರತ!

ಸುರಕ್ಷಾ ಸೌಲಭ್ಯಗಳು

ಮಾರುತಿ ಸುಜುಕಿ ಕಂಪನಿ ಇನ್ವಿಕ್ಟೊ ಕಾರಿನಲ್ಲಿ ಹೈಕ್ರಾಸ್ ಮಾದರಿಯಲ್ಲಿರುವ ಹಲವಾರು ಪ್ರೀಮಿಯಂ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಇದರಲ್ಲಿ ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಅಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

Maruti Suzuki Invicto (4)

ಆದರೆ ಹೊಸ ಕಾರಿನಲ್ಲಿ ಗ್ರಾಹಕರು ನೀರಿಕ್ಷೆ ಮಾಡಿದ್ದ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿಲ್ಲ. ಹೈಕ್ರಾಸ್ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೌಲಭ್ಯವಿದ್ದರೂ ಇನ್ವಿಕ್ಟೊ ಕಾರಿನ ಬೆಲೆ ಇಳಿಕೆಗಾಗಿ ಎಡಿಎಎಸ್ ಕೈಬಿಡಲಾಗಿದ್ದು, ಇನ್ವಿಕ್ಟೊ ಹೈಎಂಡ್ ಮಾದರಿಯ ಹೈಕ್ರಾಸ್ ಹೈ ಎಂಡ್ ಮಾದರಿಗಿಂತ ರೂ. 1.50 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿದೆ. ಹೀಗಾಗಿ ಬೆಲೆ ವಿಚಾರದಲ್ಲಿ ಹೊಸ ಕಾರು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಇದು ಮಾರುತಿ ಸುಜುಕಿ ನೆಕ್ಸಾ ಶೋರೂಂಗಳ ಮೂಲಕ ಮಾರಾಟಗೊಳ್ಳಲಿದೆ.

Published On - 7:53 pm, Wed, 5 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ