ಜಿಮ್ನಿ ಎಸ್ ಯುವಿ ಖರೀದಿಯ ಮೇಲೆ ದಾಖಲೆಯ ಆಫರ್ ಘೋಷಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿ ಜಿಮ್ನಿ 5 ಡೋರ್ ಆಫ್ ರೋಡ್ ಎಸ್ ಯುವಿ ಮಾದರಿಯ ಮೇಲೆ ಹಲವಾರು ಆಫರ್ ಘೋಷಣೆ ಮಾಡಿದ್ದು, ಆಫ್ ರೋಡ್ ಎಸ್ ಯುವಿ ಖರೀದಿದಾರರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಜಿಮ್ನಿ ಎಸ್ ಯುವಿ ಖರೀದಿಯ ಮೇಲೆ ದಾಖಲೆಯ ಆಫರ್ ಘೋಷಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ ಜಿಮ್ನಿ
Follow us
Praveen Sannamani
|

Updated on: Aug 07, 2024 | 9:06 PM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ (Maruti Suzuki) ತನ್ನ ಪ್ರಮುಖ ನೆಕ್ಸಾ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಗಳನ್ನು ಘೋಷಣೆ ಮಾಡಿದೆ. ಜಿಮ್ನಿ ಆಫ್ ರೋಡ್ ಎಸ್ ಯುವಿ ಕಾರು ಖರೀದಿಯ ಮೇಲೂ ಭರ್ಜರಿ ಆಫರ್ ನೀಡುತ್ತಿದ್ದು, ಹೊಸ ಆಫರ್ ಗಳಲ್ಲಿ ಕ್ಯಾಶ್ ಡಿಸ್ಕೌಂಟ್ ಜೊತೆಗೆ ಹಲವಾರು ಬೋಸನ್ ಆಫರ್ ಗಳನ್ನು ಘೋಷಿಸಿದೆ. ಹೀಗಾಗಿ ಬಜೆಟ್ ಬೆಲೆಯಲ್ಲಿ ಎಸ್ ಯುವಿ ಕಾರು ಖರೀದಿಗೆ ಯೋಜನೆ ರೂಪಿಸುತ್ತಿರುವ ಗ್ರಾಹಕರಿಗೆ ಇದೊಂದು ಅತ್ಯುತ್ತಮ ಆಯ್ಕೆ ಎನ್ನಬಹುದು.

ಪ್ರಸ್ತುತ ಮಾರುಕಟ್ಟೆಯಲ್ಲಿ ಜಿಮ್ನಿ ಎಸ್ ಯುವಿ ಮಾದರಿಯು ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರು ಇದರಲ್ಲಿ ಅಲ್ಫಾ ವೆರಿಯೆಂಟ್ ಖರೀದಿಯ ಹೆಚ್ಚಿನ ಆಫರ್ ಪಡೆದುಕೊಳ್ಳಬಹುದಾಗಿದೆ. ಹೊಸ ಆಫರ್ ನಲ್ಲಿ ಕನಿಷ್ಠ ರೂ. 1.98 ಲಕ್ಷದಿಂದ ಗರಿಷ್ಠ ರೂ. 2.53 ಲಕ್ಷದ ತನಕ ಉಳಿತಾಯ ಮಾಡಬಹುದಾಗಿದ್ದು, ಮಾರುತಿ ಸುಜುಕಿಯ ಸ್ಮಾರ್ಟ್ ಫೈನಾನ್ಸ್ ಮೂಲಕ ಖರೀದಿಸುವ ಗ್ರಾಹಕರಿಗೆ ಇನ್ನು ಹೆಚ್ಚಿನ ಆಫರ್ ಗಳು ದೊರೆಯುತ್ತವೆ.

ಆಫ್ ರೋಡ್ ಪ್ರಿಯರಿಗಾಗಿ ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿರುವ ಜಿಮ್ನಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 12.74 ಲಕ್ಷದಿಂದ ರೂ. 14.79 ಲಕ್ಷ ಬೆಲೆ ಹೊಂದಿದ್ದು, ಇದು ಥಾರ್ ಕಾರಿಗೆ ಉತ್ತಮ ಪ್ರತಿಸ್ಪರ್ಧಿಯಾಗಿದೆ. ಆದರೂ ಕೂಡಾ ಥಾರ್ ಮಾದರಿಗೆ ಮತ್ತಷ್ಟು ಪೈಪೋಟಿ ನೀಡುವ ಉದ್ದೇಶದಿಂದ ಜಿಮ್ನಿ ಕಾರಿನ ಮೇಲೆ ಹೆಚ್ಚಿನ ಆಫರ್ ಗಳನ್ನು ನೀಡಲಾಗುತ್ತಿದ್ದು, ಇದು ಮುಂಬರುವ ಹಬ್ಬದ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಜಿಮ್ನಿ ಕಾರಿನಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು 4 ಸ್ಪೀಡ್ ಟಾರ್ಕ್ ಕನ್ವರ್ಟರ್ ಎಟಿ ಮತ್ತು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಹೊಸ ಕಾರು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ 105 ಹಾರ್ಸ್ ಪವರ್, 134 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಇದರಲ್ಲಿ ಮ್ಯಾನುವಲ್ ಮಾದರಿಯಲ್ಲಿ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಲಿದೆ.

ಜೊತೆಗೆ ಹೊಸ ಕಾರು ಆಫ್ ರೋಡ್ ಪ್ರಯಾಣಕ್ಕೆ ಅನೂಕೂಲಕರವಾಗುವಂತೆ 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳನ್ನು ನೀಡಲಾಗಿದೆ. ಥಾರ್‌ಗೆ ಹೋಲಿಸಿದರೆ ಜಿಮ್ನಿ ಕಾರು ದೈನಂದಿನ ಬಳಕೆಗೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದ್ದು, ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್ ಮತ್ತು ಆಕರ್ಶಕ ಇಂಟಿರಿಯರ್ ಪಡೆದುಕೊಂಡಿದೆ.

ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ