ದಾಖಲೆ ನಿರ್ಮಿಸಲು ಸಜ್ಜಾದ ಮಾರುತಿ ಸುಜುಕಿ ಹೊಸ ಜಿಮ್ನಿ ಮತ್ತು ಫ್ರಾಂಕ್ಸ್!

|

Updated on: Mar 29, 2023 | 9:00 PM

ಪ್ರಯಾಣಿಕರ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಶೀಘ್ರದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಹೊಸ ಕಾರು ಮಾದರಿಗಳ ಮೂಲಕ ಮಿಂಚುತ್ತಿರುವ ಮಾರುತಿ ಸುಜುಕಿ(Maruti Suzuki) ಕಂಪನಿ ಶೀಘ್ರದಲ್ಲಿಯೇ ಮತ್ತಷ್ಟು ಕಾರುಗಳನ್ನ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ. ಗ್ರಾಹಕರ ಬೇಡಿಕೆಯೆಂತೆ ಸಾಮಾನ್ಯ ಕಾರುಗಳ ಜೊತೆ ಪ್ರೀಮಿಯಂ ಕಾರುಗಳ ಮಾರಾಟದ ಮೇಲೂ ಹೆಚ್ಚಿನ ಗಮನಹರಿಸುತ್ತಿದ್ದು, ಶೀಘ್ರದಲ್ಲಿಯೇ ಎರಡು ಹೊಚ್ಚ ಹೊಸ ಕಾರುಗಳನ್ನು ರಸ್ತೆಗಿಳಿಸುತ್ತಿದೆ.

ಮಾರುತಿ ಸುಜುಕಿ ಹೊಸ ಕಾರುಗಳು ಬಿಡುಗಡೆಗೂ ಮುನ್ನವೇ ಗ್ರಾಹಕರಲ್ಲಿ ಸಾಕಷ್ಟು ಕ್ರೆಜ್ ಹುಟ್ಟುಹಾಕಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೊಸ ಕಾರು ಕಾರು ಮಾದರಿಗಳಿಗಾಗಿ ಈಗಾಗಲೇ 35 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದ್ದು, ಇವು ಹೊಸ ಪ್ಲ್ಯಾಟ್ ಫಾರ್ಮ್ ಆಧರಿಸಿ ಬಿಡುಗಡೆಯಾಗುತ್ತಿವೆ.

ಹೌದು, ಭಾರತದಲ್ಲಿ ಸದ್ಯ ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟವು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ವಿಭಾಗದಲ್ಲಿ ಇತ್ತೀಚೆಗೆ ಹಲವು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಇದರಿಂದ ಮಾರುತಿ ಸುಜುಕಿ ಕಂಪನಿ ಸಹ ಗ್ರಾಹಕರ ಬೇಡಿಕೆ ಆಧರಿಸಿ ಫ್ರಾಂಕ್ಸ್ ಕಂಪ್ಯಾಕ್ಟ್ ಎಸ್ ಯುವಿ ಮತ್ತು ಜಿಮ್ನಿ ಎಸ್ ಯುವಿ ಮಾದರಿಯನ್ನ ಬಿಡುಗಡೆ ಮಾಡುತ್ತಿದೆ.

ಹೊಸ ಫ್ರಾಂಕ್ಸ್ ಕಾರನ್ನ ಮಾರುತಿ ಸುಜುಕಿ ಕಂಪನಿಯು ಗ್ರ್ಯಾಂಡ್ ವಿಟಾರಾ ಮತ್ತು ಬಲೆನೊ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುತ್ತಿದೆ. ಹೊಸ ಫ್ರಾಂಕ್ಸ್ ಕಾರು ಕ್ರಾಸ್ ಓವರ್ ಎಸ್ ಯುವಿ ಮಾದರಿಯಾಗಿದ್ದು, ಇದು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಬಹುದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಸುಮಾರು 13 ಸಾವಿರಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದೆ.

ಇದನ್ನೂ ಓದಿ: ಬಹುನೀರಿಕ್ಷಿತ 2023ರ ಹ್ಯುಂಡೈ ವೆರ್ನಾ ಸೆಡಾನ್ ಬಿಡುಗಡೆ

ಹೊಸ ಕಾರಿನಲ್ಲಿ ಕಂಪನಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗುತ್ತಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ಇದು ರೂ. 8 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಈ ಮೂಲಕ ಹೊಸ ಕಾರು ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ನಿಸ್ಸಾನ್ ಮ್ಯಾಗ್ನೈಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಇನ್ನು ಮಾರುತಿ ಸುಜುಕಿ ಬಹುನೀರಿಕ್ಷಿತ ಕಾರುಗಳಲ್ಲಿ ಜಿಮ್ನಿ ಎಸ್ ಯುವಿ ಕೂಡಾ ಒಂದಾಗಿದೆ . ಹೊಸ ಕಾರಿನ ಬೆಲೆಯನ್ನ ಮೇ ಹೊತ್ತಿಗೆ ಘೋಷಣೆ ಮಾಡಲಿದ್ದು, ಬಿಡುಗಡೆಗೂ ಮುನ್ನವೇ ಜಿಮ್ನಿ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೊಸ ಕಾರು ಖರೀದಿಗಾಗಿ ಈಗಾಗಲೇ 23 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕಿಂಗ್ ಸಲ್ಲಿಸಿದ್ದು, ಹೊಸ ಕಾರು ವಿಶೇಷವಾಗಿ ಆಫ್ ರೋಡ್ ಪ್ರಿಯರಿಗಾಗಿ ನಿರ್ಮಾಣಗೊಂಡಿದೆ. ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದೆ.

ಇದನ್ನೂ ಓದಿ: ಹೊಸ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾದ ಸಿಟ್ರನ್ ಇಂಡಿಯಾ

ಜೊತೆಗೆ ಹೊಸ ಜಿಮ್ನಿ ಕಾರು ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿದ್ದು, 4 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಮತ್ತು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ. ಇದರಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗಿದ್ದು, ಈ ಮೂಲಕ ಇದು 105 ಹಾರ್ಸ್ ಪವರ್ ಮತ್ತು 134 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಹೊಸ ಕಾರು ಆಫ್ ರೋಡ್ ಚಾಲನೆಗೆ ಸಹಕಾರಿಯಾಗುವಂತೆ 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Published On - 9:00 pm, Wed, 29 March 23