Maruti Suzuki: ಮಾರುತಿ ಸುಜುಕಿ ನೆಕ್ಸಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಹಬ್ಬದ ಋತು ಹಿನ್ನಲೆ ವಿವಿಧ ಕಾರು ಕಂಪನಿಗಳು ಆಫರ್ ಘೋಷಣೆ ಮಾಡಿದ್ದು, ಮಾರುತಿ ಸುಜುಕಿ ಕೂಡಾ ತನ್ನ ಪ್ರಮುಖ ನೆಕ್ಸಾ ಕಾರುಗಳ ಖರೀದಿಯ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ.

Maruti Suzuki: ಮಾರುತಿ ಸುಜುಕಿ ನೆಕ್ಸಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ
Follow us
|

Updated on: Sep 13, 2023 | 5:48 PM

ದೇಶಾದ್ಯಂತ ಹಬ್ಬದ ಋತು ಹಿನ್ನಲೆ ವಿವಿಧ ಕಾರು ಕಂಪನಿಗಳು ಭರ್ಜರಿ ಆಫರ್ ಘೋಷಣೆ ಮಾಡುತ್ತಿವೆ. ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಬ್ಯಾಕ್ ಡಿಸ್ಕೌಂಟ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಎಕ್ಸ್ ಚೆಂಜ್ ಬೋನಸ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ .

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ಕೂಡಾ ಮುಂಬರುವ ಹಬ್ಬದ ಋತುಗಳಿಗಾಗಿ ಭರ್ಜರಿ ಆಫರ್ ನೀಡುತ್ತಿದೆ. ಹೊಸ ಆಫರ್ ಗಳಲ್ಲಿ ಮಾರುತಿ ಸುಜುಕಿ ಕಂಪನಿಯು ನೆಕ್ಸಾ(Nexa) ಕಾರು ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡುತ್ತಿದ್ದು, ಇಗ್ನಿಸ್, ಬಲೆನೊ ಮತ್ತು ಸಿಯಾಜ್ ಕಾರುಗಳ ಖರೀದಿ ಮೇಲೆ ಹೆಚ್ಚಿನ ಆಫರ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್ ಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಕಾರು ಖರೀದಿಯ ಮೇಲೆ ರೂ. 65 ಸಾವಿರ ಡಿಸ್ಕೌಂಟ್ ನೀಡುತ್ತಿದೆ. ಇದರಲ್ಲಿ ರೂ. 5 ಸಾವಿರ ಮೌಲ್ಯದ ವಿಶೇಷ ಆಫರ್ ಸಹ ಒಳಗೊಂಡಿದ್ದು, ನಿಗದಿತ ಅವಧಿಯಲ್ಲಿ ಬುಕಿಂಗ್ ಸಲ್ಲಿಸುವ ಗ್ರಾಹಕರಿಗೆ ಮಾತ್ರ ವಿಶೇಷ ಆಫರ್ ಅನ್ವಯಿಸಲಿದೆ. ಸೆಪ್ಟೆಂಬರ್ 2ರಿಂದ 19ರ ತನಕ ಬುಕಿಂಗ್ ಸಲ್ಲಿಸುವ ಗ್ರಾಹಕರು ರೂ. 5 ಸಾವಿರ ಮೌಲ್ಯ ವಿಶೇಷ ಆಫರ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಆಫರ್ ಗಳೊಂದಿಗೆ ಮಾರುತಿ ಸುಜುಕಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

ಇಗ್ನಿಸ್ ನಂತರ ಬಲೆನೊ ಹ್ಯಾಚ್ ಬ್ಯಾಕ್ ಕಾರಿನ ಮೇಲೂ ಮಾರುತಿ ಸುಜುಕಿ ಕಂಪನಿ ಅತ್ಯುತ್ತಮ ಆಫರ್ ನೀಡುತ್ತಿದೆ. ಬಲೆನೊ ಕಾರು ಖರೀದಿ ಮೇಲೆ ರೂ. 35 ಸಾವಿರ ಆಫರ್ ಲಭ್ಯವಿದ್ದು, ಇದರಲ್ಲೂ ಕೂಡಾ ರೂ. 5 ಸಾವಿರ ಮೌಲ್ಯದ ವಿಶೇಷ ಆಫರ್ ಒಳಗೊಂಡಿದೆ. ಹ್ಯಾಚ್ ಬ್ಯಾಕ್ ಕಾರಿನ ಮಾರಾಟದಲ್ಲಿ ಬಲೆನೊ ಕಾರು ಸದ್ಯ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಆಫರ್ ಗಳು ವಿವಿಧ ವೆರಿಯೆಂಟ್ ಗಳ ಮೇಲೆ ಅನ್ವಯಿಸಲಿವೆ.

ಹಾಗೆಯೇ ಮಾರುತಿ ಸುಜುಕಿ ನೆಕ್ಸಾ ಕಾರುಗಳಲ್ಲಿ ಪ್ರಮುಖವಾಗಿರುವ ಸಿಯಾಜ್ ಸೆಡಾನ್ ಮೇಲೂ ಅತ್ಯುತ್ತಮ ಆಫರ್ ನೀಡಲಾಗುತ್ತಿದೆ. ಸಿಯಾಜ್ ಕಾರು ಖರೀದಿದಾರರು ರೂ. 48 ಸಾವಿರ ಆಫರ್ ಪಡೆದುಕೊಳ್ಳಬಹುದಾಗಿದ್ದು, ಇದು ವಿಶೇಷ ಆಫರ್ ಜೊತೆಗೆ ಎಕ್ಸ್ ಚೆಂಜ್ ಬೋನಸ್ ಒಳಗೊಂಡಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ 2023ರ ಟಾಟಾ ನೆಕ್ಸಾನ್ ಇವಿ ಅನಾವರಣ

ಇನ್ನು ಮಾರುತಿ ಸುಜುಕಿ ಕಂಪನಿಯು ಕಾರು ಮಾರಾಟಕ್ಕಾಗಿ ಅರೆನಾ ಮತ್ತು ನೆಕ್ಸಾ ಎನ್ನುವ ಎರಡು ಮಾದರಿಯ ಮಾರಾಟ ಮಳಿಗೆಗಳನ್ನು ಹೊಂದಿದ್ದು, ಇದರಲ್ಲಿ ಪ್ರೀಮಿಯಂ ಕಾರುಗಳ ಮಾರಾಟಕ್ಕಾಗಿ ನೆಕ್ಸಾ ಪ್ಲ್ಯಾಟ್ ಫಾರ್ಮ್ ಹೊಂದಿದ್ದರೆ ಸಾಮಾನ್ಯ ಕಾರು ಮಾದರಿಗಳಾಗಿ ಅರೆನಾ ಪ್ಲ್ಯಾಟ್ ಫಾರ್ಮ್ ಹೊಂದಿದೆ. ನೆಕ್ಸಾ ಶೋರೂಂಗಳಲ್ಲಿ ಇಗ್ನಿಸ್, ಬಲೆನೊ, ಸಿಯಾಜ್, ಎಕ್ಸ್ಎಲ್6, ಫ್ರಾಂಕ್ಸ್, ಜಿಮ್ನಿ, ಗ್ರ್ಯಾಂಡ್ ವಿಟಾರಾ ಮತ್ತು ಇನ್ವಿಕ್ಟೊ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಅರೆನಾ ಶೋರೂಂನಲ್ಲಿ ಇಕೋ, ಎಸ್-ಪ್ರೊಸ್ಸೊ, ಆಲ್ಟೊ, ಆಲ್ಟೊ ಕೆ10, ವ್ಯಾಗನ್ಆರ್, ಸೆಲೆರಿಯೊ, ಸ್ವಿಫ್ಟ್, ಡಿಜೈರ್, ಬ್ರೆಝಾ ಮತ್ತು ಎರ್ಟಿಗಾ ಕಾರುಗಳನ್ನು ಮಾರಾಟ ಮಾಡುತ್ತಿದೆ.

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!