ಹೊಸ ಸ್ವಿಫ್ಟ್ ಸೇರಿದಂತೆ ವಿವಿಧ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಹೊಸ ಸ್ವಿಫ್ಟ್ ಸೇರಿದಂತೆ ತನ್ನ ಪ್ರಮುಖ ಅರೆನಾ ಕಾರುಗಳ ಖರೀದಿ ಮೇಲೆ ಜುಲೈ ಅವಧಿಗಾಗಿ ಅತ್ಯುತ್ತಮ ಆಫರ್ ಗಳನ್ನು ಘೋಷಣೆ ಮಾಡಿದೆ.

ಹೊಸ ಸ್ವಿಫ್ಟ್ ಸೇರಿದಂತೆ ವಿವಿಧ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಣೆ
Follow us
Praveen Sannamani
|

Updated on:Jul 04, 2024 | 6:25 PM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ (Maruti Suzuki) ಕಂಪನಿಯು ತನ್ನ ಪ್ರಮುಖ ಅರೆನಾ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್ ನೀಡುತ್ತಿದ್ದು, ಗ್ರಾಹಕರು ವಿವಿಧ ಆಫರ್ ಗಳಲ್ಲಿ ಹೆಚ್ಚಿನ ಉಳಿತಾಯ ಮಾಡಬಹುದಾಗಿದೆ. ಹೊಸ ಆಫರ್ ಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಕ್ಯಾಶ್ ಡಿಸ್ಕೌಂಟ್ ಮತ್ತು ಎಕ್ಸ್ ಚೆಂಜ್ ಆಫರ್ ಗಳನ್ನು ನೀಡುತ್ತಿದೆ. ಹೊಸ ಆಫರ್ ಗಳು ಇತ್ತೀಚೆಗೆ ಬಿಡುಗಡೆಯಾಗಿದ್ದ ಸ್ವಿಫ್ಟ್ ಮೇಲೂ ಲಭ್ಯವಿದ್ದು, ಈ ತಿಂಗಳಾಂತ್ಯದ ತನಕ ಹೊಸ ಆಫರ್ ಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್ ಗಳನ್ನು ಮಾರುತಿ ಸುಜುಕಿ ಕಂಪನಿಯು ಅರೆನಾ ಮಾರಾಟ ಮಳಿಗೆಯಲ್ಲಿ ಖರೀದಿಗೆ ಲಭ್ಯವಾಗುವ ಆಲ್ಟೋ ಕೆ10, ಎಸ್-ಪ್ರೆಸ್ಸೊ, ಸೆಲೆರಿಯೊ, ವ್ಯಾಗನ್ ಆರ್, ಇಕೋ, ಡಿಜೈರ, ಬ್ರೆಝಾ ಮತ್ತು ಸ್ವಿಫ್ಟ್ ಮೇಲೆ ಘೋಷಣೆ ಮಾಡಲಾಗಿದ್ದು, ಎರ್ಟಿಗಾ ಎಂಪಿವಿಯ ಮೇಲೆ ಮಾತ್ರ ಯಾವುದೇ ಆಫರ್ ಗಳನ್ನು ನೀಡಲಾಗಿಲ್ಲ,

ಆಲ್ಟೋ ಕೆ10, ಎಸ್-ಪ್ರೆಸ್ಸೊ, ಸೆಲೆರಿಯೊ ಕಾರುಗಳ ಮೇಲೆ ಮಾರುತಿ ಸುಜುಕಿ ಕಂಪನಿಯು ರೂ. 51,200 ರಿಂದ ರೂ. 66,100 ಮೌಲ್ಯದ ಆಫರ್ ಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ಸಿಎನ್ ಜಿ ಮಾದರಿಗಳಿಗೂ ಹೊಸ ಆಫರ್ ಅನ್ವಯಿಸಲಿದೆ. ಈ ಮೂರು ಕಾರುಗಳಲ್ಲಿ 1.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಲಭ್ಯವಿದ್ದು, ಇವು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡಿವೆ.

ಇದನ್ನೂ ಓದಿ: ಟಾಟಾ ನೆಕ್ಸಾನ್ ಗೆ ಭರ್ಜರಿ ಪೈಪೋಟಿ ನೀಡಲಿದೆ ಸ್ಕೋಡಾ ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿ

ಮಾರುತಿ ಸುಜುಕಿ ಆಲ್ಟೋ ಕೆ10, ಎಸ್-ಪ್ರೆಸ್ಸೊ, ಸೆಲೆರಿಯೊ ನಂತರ ವ್ಯಾಗನ್ಆರ್ ಕಾರು ಖರೀದಿಯ ಮೇಲೆ ರೂ. 55,100 ರಿಂದ ರೂ. 55,100 ಮೌಲ್ಯದ ಆಫರ್ ಗಳನ್ನು ನೀಡಲಾಗುತ್ತಿದ್ದು, ಇಕೋ ವಾಹನದ ಮೇಲೆ ರೂ. 30,100 ರಿಂದ ರೂ. 32,100 ತನಕ ಆಫರ್ ಲಭ್ಯವಿದೆ. ಹಾಗೆಯೇ ಬ್ರೆಝಾ ಕಂಪ್ಯಾಕ್ಟ್ ಎಸ್ ಯುವಿ ಮೇಲೆ ರೂ. 25 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು 15 ಸಾವಿರ ಎಕ್ಸ್ ಚೆಂಜ್ ಆಫರ್ ನೀಡುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಇನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ಹೊಸ ತಲೆಮಾರಿನ ಸ್ವಿಫ್ಟ್ ಕಾರಿನ ಮಾರುತಿ ಸುಜುಕಿ ಕಂಪನಿಯು ರೂ. 10 ಸಾವಿರದಿಂದ ರೂ. 15 ಸಾವಿರ ಮೌಲ್ಯದ ಎಕ್ಸ್ ಚೆಂಜ್ ನೀಡುತ್ತಿದ್ದು, ಡೀಲರ್ಸ್ ಮಟ್ಟದಲ್ಲಿ ಕೆಲವು ಕ್ಯಾಶ್ ಬ್ಯಾಕ್ ಆಫರ್ ನೀಡುಲಾಗುತ್ತಿದೆ. ಇದರೊಂದಿಗೆ ಸ್ಟಾಕ್ ಲಭ್ಯವಿರುವ ಹಳೆಯ ತಲೆಮಾರಿನ ಸ್ವಿಫ್ಟ್ ಕಾರು ಖರೀದಿಯ ಮೇಲೆ ರೂ. 35 ಸಾವಿರದಷ್ಟು ಕ್ಯಾಶ್ ಬ್ಯಾಕ್ ಆಫರ್ ನೀಡಲಾಗುತ್ತಿದ್ದು, ಹ್ಯಾಚ್ ಬ್ಯಾಕ್ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

Published On - 6:18 pm, Thu, 4 July 24

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ