ಕ್ರ್ಯಾಶ್ ಟೆಸ್ಟಿಂಗ್: ಕಳಪೆ ಪ್ರದರ್ಶನ ನೀಡಿದ ಮಾರುತಿ ವ್ಯಾಗನ್ಆರ್ ಮತ್ತು ಆಲ್ಟೊ ಕೆ10

ಮಾರುತಿ ಸುಜುಕಿ ಜನಪ್ರಿಯ ಕಾರು ಮಾದರಿಗಳಾದ ವ್ಯಾಗನ್ಆರ್ ಮತ್ತು ಆಲ್ಟೊ ಕೆ10 ಹ್ಯಾಚ್ ಬ್ಯಾಕ್ ಕಾರು ಮಾದರಿಗಳು ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಕಳಪೆ ಪ್ರದರ್ಶನ ತೋರಿವೆ.

ಕ್ರ್ಯಾಶ್ ಟೆಸ್ಟಿಂಗ್:  ಕಳಪೆ ಪ್ರದರ್ಶನ ನೀಡಿದ ಮಾರುತಿ ವ್ಯಾಗನ್ಆರ್ ಮತ್ತು ಆಲ್ಟೊ ಕೆ10
ಮಾರುತಿ ವ್ಯಾಗನ್ಆರ್ ಮತ್ತು ಆಲ್ಟೊ ಕೆ10
Follow us
Praveen Sannamani
|

Updated on:Apr 04, 2023 | 8:17 PM

ಗ್ಲೋಬಲ್ ಎನ್ ಸಿಎಪಿ(Global NCAP) ಸಂಸ್ಥೆಯು ಭಾರತದಲ್ಲಿ ಮಾರಾಟವಾಗುವ ಪ್ರಮುಖ ಕಾರುಗಳ ಕ್ರ್ಯಾಶ್ ಟೆಸ್ಟಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಮಾರುತಿ ಸುಜುಕಿ(Maruti Suzuki) ನಿರ್ಮಾಣದ ವ್ಯಾಗನ್ಆರ್(Wagon R) ಮತ್ತು ಆಲ್ಟೊ ಕೆ10(Alto K10) ಮಾದರಿಗಳು ಅತಿ ಕಡಿಮೆ ಅಂಕಗಳೊಂದಿಗೆ ಕಳೆಪ ಪ್ರದರ್ಶನ ನೀಡಿವೆ.

ಗ್ಲೋಬಲ್ ಎನ್ ಸಿಎಪಿ ಸಂಸ್ಥೆಯು ಭಾರತದಲ್ಲಿ ಉತ್ಪಾದನೆಯಾಗುವ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ #SAFERCARSFORINDIA ಅಭಿಯಾನ ಕೈಗೊಂಡಿದ್ದು, ಹೊಸ ಸುರಕ್ಷಾ ಅಭಿಯಾನದ ನಂತರ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಣೆ ಕಂಡಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ಕಾರು ಮಾದರಿಯಾಗಿ ಘೋಷಿಸಲು ಕನಿಷ್ಠ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವ ಅವಶ್ಯಕತೆಯಿದ್ದು, ಮೂರಕ್ಕಿಂತ ಕಡಿಮೆ ರೇಟಿಂಗ್ಸ್ ಪಡೆದುಕೊಳ್ಳುವ ಕಾರುಗಳನ್ನು ಕಳಪೆ ಕಾರುಗಳೆಂದು ಕರೆಯಲಾಗುತ್ತದೆ. ಇದೀಗ ಮಾರುತಿ ಸುಜುಕಿ ಜನಪ್ರಿಯ ಕಾರುಗಳಾದ ವ್ಯಾಗನ್ಆರ್ ಮತ್ತು ಆಲ್ಟೊ ಕೆ10 ಕಾರುಗಳು ಕ್ರಮವಾಗಿ 1 ಮತ್ತು 2 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿವೆ.

ಭಾರತದಲ್ಲಿ ಹೊಸ ಕಾರುಗಳ ಸುರಕ್ಷತೆಗಾಗಿ ಹಲವಾರು ಕಡ್ಡಾಯ ಮಾನದಂಡಗಳ ಹೊರತಾಗಿಯೂ ಮಾರುತಿ ಸುಜುಕಿ ಸಣ್ಣ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಕಳಪೆ ಮಾದರಿಗಳಾಗಿ ಗುರುತಿಸಿಕೊಳ್ಳುತ್ತಿದ್ದು, ಪ್ರಯಾಣಿಕ ಸುರಕ್ಷತೆಗೆ ಆದ್ಯತೆ ನೀಡದ ಮಾರುತಿ ಸುಜುಕಿ ವಿರುದ್ದ ಗ್ಲೋಬಲ್ ಎನ್ ಸಿಎಪಿ ಸಂಸ್ಥೆಯು ತೀವ್ರ ಅಸಮಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕ್ರ್ಯಾಶ್ ಟೆಸ್ಟ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ವರ್ಟಸ್!

ಅಪಘಾತದ ಸಂದರ್ಭದಲ್ಲಿ ವ್ಯಾಗನ್ಆರ್ ಕಾರು ಮಾದರಿಯಲ್ಲಿರುವ ಸುರಕ್ಷಾ ಸೌಲಭ್ಯಗಳು ವಯಸ್ಕ ಪ್ರಯಾಣಿಕರಿಗೆ 34 ಅಂಕಗಳಲ್ಲಿ 19.69 ಅಂಕಗಳಷ್ಟು ಮಾತ್ರ ಸುರಕ್ಷತೆ ನೀಡಿದರೆ ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ ಕೇವಲ 3.40 ಅಂಕಗಳನ್ನ ಗಳಿಸಿದೆ. ಈ ಮೂಲಕ ವ್ಯಾಗನ್ಆರ್ ಕಾರಿಗೆ 1 ಸ್ಟಾರ್ ಸೇಫ್ಟಿ ರೇಟಿಂಗ್ಸ್ ನೀಡಲಾಗಿದ್ದು, ಖರೀದಿಗೆ ಯೋಗ್ಯವಲ್ಲದ ಕಾರು ಮಾದರಿಯೆಂದು ಘೋಷಣೆ ಮಾಡಲಾಗಿದೆ.

ಈ ಹಿಂದೆ 2019ರಲ್ಲಿ ವ್ಯಾಗನ್ಆರ್ ಮಾದರಿಗಾಗಿ 2 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದ ಮಾರುತಿ ಸುಜುಕಿಯು ಇದೀಗ ಹೊಸ ಕಾರಿನಲ್ಲಿ ಸುರಕ್ಷಾ ಫೀಚರ್ಸ್ ಗಳನ್ನು ಉನ್ನತೀಕರಿಸುವಲ್ಲಿ ವಿಫಲವಾಗಿದ್ದು, ಕೇವಲ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ ಹೊರತಾಗಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ನೀಡಿಲ್ಲ.

ವ್ಯಾಗನ್ಆರ್ ನಂತರ ಇತ್ತೀಚೆಗೆ ಬಿಡುಗಡೆಯಾಗಿರುವ ಆಲ್ಟೊ ಕೆ10 ಹೊಸ ಮಾದರಿಯು ಕೂಡಾ ಕಳಪೆ ಪ್ರದರ್ಶನ ತೋರಿದ್ದು, ಇದು ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 2 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ. ಆಲ್ಟೊ ಕೆ10 ಮಾದರಿಯಲ್ಲಿರುವ ಸುರಕ್ಷಾ ಫೀಚರ್ಸ್ ಗಳು ವಯಸ್ಕ ಪ್ರಯಾಣಿಕರಿಗೆ ನೀಡಲಾಗುವ 34 ಅಂಕಗಳಲ್ಲಿ 21.67 ಅಂಕಗಳಷ್ಟು ಮಾತ್ರ ಸುರಕ್ಷತೆ ನೀಡಿದರೆ ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ ಕೇವಲ 3.52 ಅಂಕಗಳನ್ನ ಗಳಿಸಿದೆ.

ಇದನ್ನೂ ಓದಿ:  ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಿವು..

ಇನ್ನು ಭಾರತದಲ್ಲಿ ಹೆಚ್ಚುತ್ತಿರುವ ವಾಹನ ಅಪಘಾತಗಳಲ್ಲಿನ ಪ್ರಾಣಹಾನಿ ತಡೆಗಾಗಿ ಕೇಂದ್ರ ಸಾರಿಗೆ ಇಲಾಖೆ ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕಾಗಿ ಹೊಸ ಕಾರುಗಳಲ್ಲಿನ ಸುರಕ್ಷಾ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದ್ದು, ಸುರಕ್ಷಾ ಫೀಚರ್ಸ್ ಗುಣಮಟ್ಟದ ಪರೀಕ್ಷಿಸಲು ಕ್ರ್ಯಾಶ್ ಟೆಸ್ಟಿಂಗ್ ಸಾಕಷ್ಟು ಅನುಕೂಲಕರವಾಗಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈ ವರ್ಷ ಬಿಡುಗಡೆಯಾದ ಹಲವು ಹೊಸ ಕಾರುಗಳು ಉತ್ತಮ ರೇಟಿಂಗ್ಸ್ ಪಡೆದುಕೊಂಡಿವೆ. ಹೀಗಾಗಿ ಗ್ರಾಹಕರು ಅತ್ಯುತ್ತಮ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಕಾರುಗಳತ್ತ ಗಮನಹರಿಸುತ್ತಿದ್ದು, ಕಳಪೆ ಕಾರುಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

Published On - 8:17 pm, Tue, 4 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ