ಸಾರ್ವಜನಿಕ ರಸ್ತೆಯಲ್ಲಿ ಡ್ರಿಫ್ಟ್ ಮಾಡಿದ ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್

ಭಾರತದಲ್ಲಿ ಇತ್ತೀಚೆಗೆ ಸ್ಪೋರ್ಟ್ ವಾಹನಗಳ ಭರಾಟೆ ಹೆಚ್ಚುತ್ತಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಸಾಹಸ ಪ್ರದರ್ಶನದ ಮೂಲಕ ಸಾಮಾನ್ಯ ಜನರ ಜೀವಕ್ಕೆ ಅಪಾಯವನ್ನು ಉಂಟುಮಾಡುವ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ.

ಸಾರ್ವಜನಿಕ ರಸ್ತೆಯಲ್ಲಿ ಡ್ರಿಫ್ಟ್ ಮಾಡಿದ ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್
ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್
Follow us
Praveen Sannamani
|

Updated on:Mar 23, 2023 | 2:32 PM

ದೇಶಾದ್ಯಂತ ರಸ್ತೆ ನಿಯಮಗಳ ಸರಿಯಾದ ಪಾಲನೆಗಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದ್ದು, ಕಠಿಣ ಕ್ರಮಗಳ ಹೊರತಾಗಿಯೂ ನಿಯಮ ಉಲ್ಲಂಘಿಸಿ ಅಪಾಯಕಾರಿ ಚಾಲನಾ ಪ್ರವೃತ್ತಿ ಹೆಚ್ಚುತ್ತಿದೆ. ಇತ್ತೀಚೆಗೆ ಮರ್ಸಿಡಿಸ್ ಬೆಂಝ್(mercedes benz) ಕಾರು ಮಾಲೀಕನೊಬ್ಬ ಕೂಡಾ ಸಾರ್ವಜನಿಕ ಪ್ರದೇಶದಲ್ಲಿಯೇ ಡ್ರಿಫ್ಟ್ ಮಾಡುವ ಮೂಲಕ ಪೊಲೀಸರ ಅತಿಥಿಯಾಗಿದ್ದು, ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

Traffic violation (1)

ಮಧ್ಯಪ್ರದೇಶದ ಇಂದೋರ್‌ ಮೂಲದ 23 ವರ್ಷದ ಯುವಕನೊಬ್ಬ ತನ್ನ ಮರ್ಸಿಡಿಸ್ ಬೆಂಝ್ ಇ400 ಕ್ಯಾಬ್ರಿಯೊಲೆಟ್ ಕಾರಿನ ಮೂಲಕ ಸಾರ್ವಜನಿಕ ರಸ್ತೆಯಲ್ಲಿಯೇ ಡಿಫ್ಟ್ ಮಾಡುವ ಮೂಲಕ ಸಿಕ್ಕಿಬಿದ್ದಿದ್ದು, ಸಾರ್ವಜನಿಕರ ಮಾಹಿತಿ ಮೇರೆಗೆ ಇಂದೋರ್ ಪೊಲೀಸರು ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಕಾರನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಓದಿ: ಸಿಗ್ನಲ್ ಜಂಪ್ ಮಾಡಿ, ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 1.5 ಕಿ.ಮೀ ಎಳೆದೊಯ್ದ ಚಾಲಕ

ಕ್ರಿಮಿನಲ್ ಕೇಸ್ ದಾಖಲು

ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಕಾರು ಚಾಲನೆ ಮಾಡಿದ್ದಕ್ಕಾಗಿ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 (ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ಚಾಲನೆ) ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಡ್ರಿಫ್ಟ್ ಮಾಡಲು ಬಳಸಿದ್ದ ಮರ್ಸಿಡಿಸ್ ಬೆಂಝ್ ಕಾರನ್ನ ಸಹ ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಕುರಿತು ಇಂದೋರ್ ಟ್ರಾಫಿಕ್ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ತಡರಾತ್ರಿ ವೇಳೆ ಟ್ರಾಫಿಕ್ ದಟ್ಟಣೆ ಕಡಿಮೆ ಇರುವಾಗ ಇಂದೋರ್ ನಗರದ ಪ್ರಮುಖ ವೃತ್ತವೊಂದರಲ್ಲಿ ಡ್ರಿಫ್ಟ್ ಮಾಡುತ್ತಿದ್ದು, ಹಿರಿಯ ನಾಗರಿಕರೊಬ್ಬರು ಹೆಚ್ಚುವರಿ ಸಿಪಿ ಟ್ರಾಫಿಕ್ ಮ್ಯಾನೇಜ್‌ಮೆಂಟ್‌ಗೆ ಮಾಹಿತಿ ಕಳುಹಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಮಾಹಿತಿ ಪತ್ತೆಹಚ್ಚಿ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ದೊಡ್ಡ ಮೊತ್ತದ ದಂಡ ವಿಧಿಸುವ ಸಾಧ್ಯತೆಗಳಿವೆ.

Published On - 2:05 pm, Thu, 23 March 23

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್