AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹೊಸ ಟ್ರೆಂಡ್ ಸೃಷ್ಠಿಸಲಿದೆ ಎಂಜಿ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಬ್ಬರ ಹೆಚ್ಚುತ್ತಿದ್ದು, ಎಂಜಿ ಮೋಟಾರ್ ಕಂಪನಿ ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಭಾರತದಲ್ಲಿ ಹೊಸ ಟ್ರೆಂಡ್ ಸೃಷ್ಠಿಸಲಿದೆ ಎಂಜಿ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ
ಕ್ಲೌಡ್ ಎಲೆಕ್ಟ್ರಿಕ್ ಕಾರು
Praveen Sannamani
|

Updated on: Jun 29, 2024 | 9:45 PM

Share

ಎಲೆಕ್ಟ್ರಿಕ್ ವಾಹನಗಳ ಹೆಚ್ಚುತ್ತಿರುವ ಬೇಡಿಕೆಯಿಂದ ಹಲವು ಇವಿ ವಾಹನ ತಯಾರಕ ಕಂಪನಿಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನಗಳನ್ನು ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಶೀಘ್ರದಲ್ಲಿಯೇ ಎಂಜಿ ಮೋಟಾರ್ (MG Motor) ಕಂಪನಿ ಕೂಡಾ ತನ್ನ ಹೊಸ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ ಪರಿಚಯಿಸುತ್ತಿದೆ. ಹೊಸ ಇವಿ ಕಾರನ್ನು ಬಿಡುಗಡೆ ಮಾಡಲು ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮಧ್ಯಮ ಕ್ರಮಾಂಕದ ಕಾರು ಮಾರಾಟ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಸದ್ಯ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ಮೂಲಕ ಎಲೆಕ್ಟ್ರಿಕ್ ಕಾರುಗಳ ವಿಭಾಗಗಳ ಬೇಡಿಕೆ ಅರಿತಿರುವ ಎಂಜಿ ಮೋಟಾರ್ ಕಂಪನಿಯು ಇದೀಗ ಕ್ಲೌಡ್ ಇವಿ ಕಾರನ್ನು ರಸ್ತೆಗಿಳಿಸುತ್ತಿದ್ದು, ಇದು ವಿನೂತನ ಫೀಚರ್ಸ್ ಗಳೊಂದಿಗೆ ಮಾರಾಟಗೊಳ್ಳಲಿದೆ. ಹೊಸ ಕಾರು ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ನಡುವಿನ ಸ್ಥಾನ ಪಡೆದುಕೊಳ್ಳಲಿದ್ದು, ಇದು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಅಭಿವೃದ್ದಿಗೊಂಡಿದೆ.

mg cloud ev (2)

ಚೀನಿ ಮಾರುಕಟ್ಟೆಯಲ್ಲಿ ಸದ್ಯ ಮಾರಾಟದಲ್ಲಿರುವ ವುಲ್ಲಿಂಗ್ ಮೋಟಾರ್ ನಿರ್ಮಾಣದ ಕ್ಲೌಡ್ ಇವಿ ಕಾರು ಮಾದರನ್ನೇ ಎಂಜಿ ಮೋಟಾರ್ ಕಂಪನಿ ಭಾರತದಲ್ಲಿ ಹೊಸ ಬದಲಾವಣೆಗೊಂದಿಗೆ ಬಿಡುಗಡೆ ಮಾಡುತ್ತಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸಲಿದೆ. ಚೀನಾದಲ್ಲಿರುವ ವುಲ್ಲಿಂಗ್ ಮೋಟಾರ್ ಕಂಪನಿ ಸದ್ಯ ಎಂಜಿ ಮಾತೃ ಸಂಸ್ಥೆಯಾದ ಸೈಕ್ ಜೊತೆ ಕಾರ್ಯನಿರ್ವಹಿಸುತ್ತಿದ್ದು, ಉದ್ಯಮ ವಿಸ್ತರಣೆಯ ಭಾಗವಾಗಿ ಎಂಜಿ ಕಂಪನಿಯು ವುಲ್ಲಿಂಗ್ ಕಂಪನಿಯ ಜನಪ್ರಿಯ ಇವಿ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ: ADAS ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ವುಲ್ಲಿಂಗ್ ಕಂಪನಿಯ ಕಾಮೆಟ್ ಇವಿ ನಂತರ ಇದೀಗ ಕ್ಲೌಡ್ ಎಂಪಿವಿ ಕಾರನ್ನು ಕೂಡಾ ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವು ಬದಲಾವಣೆಗಳೊಂದಿಗೆ ಬಿಡುಗಡೆ ಮಾಡುತ್ತಿದ್ದು, ಇದು 4,295 ಎಂಎಂ ಉದ್ದಳತೆಯೊಂದಿಗೆ ಅತ್ಯಾಧುನಿಕ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿರಲಿದೆ. ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೀಡುವ ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ.

mg cloud ev (1)

ಇದನ್ನೂ ಓದಿ: ಸುರಕ್ಷತೆ ಮತ್ತು ಅನುಕೂಲತೆ ಹೊಂದಿರುವ ಇಂತಹ ಕಾರುಗಳನ್ನೇ ಖರೀದಿಸಿ..

ಹಾಗೆಯೇ ಹೊಸ ಇವಿ ಕಾರಿನಲ್ಲಿ ಆಧುನಿಕ ಕಾರುಗಳಲ್ಲಿ ಫೀಚರ್ಸ್ ಗಳಾದ ಎಲ್ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, ಡ್ಯುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್ ಸೇರಿದಂತೆ ವಿವಿಧ ಸೌಲಭ್ಯಗಳಿರಲಿವೆ. ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಸಂಭಾವ್ಯ ಅಪಘಾತಗಳನ್ನು ತಡೆಯುವ ಮೂಲಕ ಪ್ರಾಣಹಾನಿ ಪ್ರಕರಣಗಳನ್ನು ತಡೆಯಲಿದೆ. ಹೀಗಾಗಿ ಹೊಸ ಕ್ಲೌಡ್ ಇವಿ ಕಾರು ತಂತ್ರಜ್ಞಾನ ಮತ್ತು ಬ್ಯಾಟರಿ ಪ್ಯಾಕ್ ಗಳಿಗೆ ಅನುಗುಣವಾಗಿ ರೂ. 18 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಬೆಲೆ ವಿಚಾರವಾಗಿ ಬಿವೈಡಿ ಇ6 ಎಂಪಿವಿ ಕಾರಿಗೆ ಇದು ಪೈಪೋಟಿ ನೀಡಲಿದೆ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ