AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MG EV Cars: ಕಾಮೆಟ್ ಮತ್ತು ಜೆಡ್ಎಸ್ ಇವಿ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಹೊಸ ಕಾಮೆಟ್ ಇವಿ ಮತ್ತು ಜೆಡ್ಎಸ್ ಇವಿ ಕಾರಿನ ಬೆಲೆಯನ್ನು ಕಡಿತ ಮಾಡಿದ್ದು, ಪ್ರತಿಸ್ಪರ್ಧಿ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

MG EV Cars: ಕಾಮೆಟ್ ಮತ್ತು ಜೆಡ್ಎಸ್ ಇವಿ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ ಎಂಜಿ ಮೋಟಾರ್
ಎಂಜಿ ಕಾಮೆಟ್ ಮತ್ತು ಜೆಡ್ಎಸ್ ಇವಿ ಬೆಲೆಯಲ್ಲಿ ಇಳಿಕೆ
Praveen Sannamani
|

Updated on:Feb 06, 2024 | 7:20 PM

Share

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಂಜಿ ಮೋಟಾರ್ (MG Motor) ಕಂಪನಿಯು ತನ್ನ ಹೊಚ್ಚ ಹೊಸ ಕಾಮೆಟ್ ಮತ್ತು ಜೆಡ್ಎಸ್ ಕಾರಿನ ಬೆಲೆಯನ್ನು ಇಳಿಕೆ ಮಾಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಹೊಸ ಇವಿ ಕಾರುಗಳಿಗೆ ಪೈಪೋಟಿಯಾಗಿ ಹೊಸ ದರ ಪಟ್ಟಿ ಪ್ರಕಟಿಸಿದೆ.

ಹೊಸ ದರಪಟ್ಟಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಕಾಮೆಟ್ ಇವಿ ಕಾರಿನ ಬೆಲೆಯನ್ನು ಎಕ್ಸ್ ಶೋರೂಂ ಪ್ರಕಾರ ರೂ. 99 ಸಾವಿರದಿಂದ ರೂ. 1.40 ಲಕ್ಷದ ತನಕ ಬೆಲೆ ಇಳಿಕೆ ಮಾಡಿದ್ದು, ಬೆಲೆ ಇಳಿಕೆ ನಂತರ ಇದು ಎಕ್ಸ್ ಶೋರೂಂ ಪ್ರಕಾರ ರೂ. 6.99 ಲಕ್ಷದಿಂದ ರೂ. 8.58 ಲಕ್ಷ ಬೆಲೆ ಹೊಂದಿದೆ. ಕಾಮೆಟ್ ಇವಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಪೇಸ್, ಪ್ಲೇ ಮತ್ತು ಪ್ಲಶ್ ಎನ್ನುವ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಪೇಸ್ ವೆರಿಯೆಂಟ್ ರೂ. 6.99 ಲಕ್ಷ ಬೆಲೆ ಹೊಂದಿದ್ದರೆ ಪ್ಲೇ ವೆರಿಯೆಂಟ್ ರೂ. 7.88 ಲಕ್ಷ ಮತ್ತು ಟಾಪ್ ಎಂಡ್ ಪ್ಲಶ್ ವೆರಿಯೆಂಟ್ ರೂ. 8.58 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಡ್ಡಾಯವಾಗಿರುವ ಫಾಸ್ಟ್‌ಟ್ಯಾಗ್ ಕೆವೈಸಿ ಮಾಡುವುದು ಹೇಗೆ?

ಸಣ್ಣಗಾತ್ರದ ಎಲೆಕ್ಟ್ರಿಕ್ ಕಾರುಗಳಲ್ಲಿಯೇ ವಿಶೇಷ ಸೌಲಭ್ಯಗಳನ್ನು ಹೊಂದಿರುವ ಕಾಮೆಟ್ ಇವಿ ಕಾರು ಸದ್ಯ 17.3kWh ಬ್ಯಾಟರಿ ಪ್ಯಾಕ್ ಜೊತೆಗೆ ಪ್ರತಿ ಚಾರ್ಜ್ ಗೆ ಗರಿಷ್ಠ 230 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಬಾಕ್ಸಿ ಡಿಸೈನ್ ನೊಂದಿಗೆ ಆಕರ್ಷಕ ಫೀಚರ್ಸ್ ಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

MG EV Cars (1)

ಕಾಮೆಟ್ ಇವಿ ನಂತರ ಎಂಜಿ ಕಂಪನಿಯು ಜೆಡ್ಎಸ್ ಇವಿ ಪ್ರೀಮಿಯಂ ಕಾರಿನ ಬೆಲೆಯಲ್ಲೂ ಇಳಿಕೆ ಮಾಡಿದ್ದು, ಹೊಸ ದರಪಟ್ಟಿಯಲ್ಲಿ ಜೆಡ್ಎಸ್ ಇವಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 92 ಸಾವಿರದಿಂದ ರೂ. 2.90 ಲಕ್ಷ ಬೆಲೆ ಕಡಿತ ಮಾಡಿದೆ. ಬೆಲೆ ಇಳಿಕೆಯ ನಂತರ ಜೆಡ್ಎಸ್ ಇವಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 18.98 ಲಕ್ಷದಿಂದ ರೂ. 24.98 ಲಕ್ಷ ಬೆಲೆ ಹೊಂದಿದ್ದು, ಇದು ಎಕ್ಸಿಕ್ಯೂಟಿವ್, ಎಕ್ಸೈಟ್, ಎಕ್ಸ್ ಕ್ಲೂಸಿವ್ ಮತ್ತು ಎಕ್ಸ್ ಕ್ಲೂಸಿವ್ ಪ್ರೊ ಎನ್ನುವ ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ.

ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕಾಗಿ ಕೇಂದ್ರದಿಂದ ಮಹತ್ವದ ಯೋಜನೆ

ಎಕ್ಸಿಕ್ಯೂಟಿವ್ ವೆರಿಯೆಂಟ್ ರೂ. 18.98 ಲಕ್ಷ ಬೆಲೆ ಹೊಂದಿದ್ದರೆ ಎಕ್ಸೈಟ್ ವೆರಿಯೆಂಟ್ ರೂ. 19.98 ಲಕ್ಷ, ಎಕ್ಸ್ ಕ್ಲೂಸಿವ್ ವೆರಿಯೆಂಟ್ ರೂ. 23.98 ಲಕ್ಷ ಮತ್ತು ಟಾಪ್ ಎಂಡ್ ವೆರಿಯೆಂಟ್ ಎಕ್ಸ್ ಕ್ಲೂಸಿವ್ ಪ್ರೊ ರೂ. 24.98 ಲಕ್ಷ ಬೆಲೆ ಹೊಂದಿದೆ.

ಜೆಡ್ಎಸ್ ಇವಿ ಕಾರು 50.3 kWh ಬ್ಯಾಟರಿ ಪ್ಯಾಕ್ ಜೋಡಣೆಯೊಂದಿಗೆ ಪ್ರತಿ ಚಾರ್ಜ್ ಗೆ 461 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದು ಪ್ರತಿ ಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್ ಗಳೊಂದಿಗೆ ಎಸ್ ಯುವಿ ಪ್ರಿಯರನ್ನು ಸೆಳೆಯುತ್ತಿದೆ.

Published On - 7:09 pm, Tue, 6 February 24

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ