MG Hector, Hector Plus: ಎಂಜಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

|

Updated on: Sep 23, 2023 | 10:00 AM

ಎಂಜಿ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಎಸ್ ಯುವಿ ಕಾರು ಮಾದರಿಗಳಾದ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿದೆ.

MG Hector, Hector Plus: ಎಂಜಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ
ಎಂಜಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ
Follow us on

ಎಂಜಿ ಮೋಟಾರ್(MG Motor) ಕಂಪನಿಯು ತನ್ನ ಜನಪ್ರಿಯ ಎಸ್ ಯುವಿ ಕಾರು ಮಾದರಿಗಳಾದ ಹೆಕ್ಟರ್(Hector) ಮತ್ತು ಹೆಕ್ಟರ್ ಪ್ಲಸ್(Hector Plus) ಕಾರುಗಳ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿದೆ. ಮಧ್ಯಮ ಕ್ರಮಾಂಕದ ಪ್ರೀಮಿಯಂ ಎಸ್ ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು, ಹೊಸ ಕಾರುಗಳ ಬೆಲೆಯಲ್ಲಿ ರೂ. 1.37 ಲಕ್ಷದಷ್ಟು ದರ ಕಡಿತ ಮಾಡಲಾಗಿದೆ.

ಎಂಜಿ ಮೋಟಾರ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ದರ ಪಟ್ಟಿಯಲ್ಲಿ 5 ಸೀಟರ್ ಸೌಲಭ್ಯದ ಹೆಕ್ಟರ್ ಎಸ್ ಯುವಿ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 14.73 ಲಕ್ಷದಿಂದ ರೂ. 21.51 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ರೂ. 27 ಸಾವಿರದಿಂದ 1.29 ಲಕ್ಷ ಬೆಲೆ ಕಡಿತ ಮಾಡಲಾಗಿದೆ.

ಇದನ್ನೂ ಓದಿ: ಹೋಂಡಾ ಎಲಿವೇಟ್ Vs ಸಿಟ್ರನ್ ಸಿ3 ಏರ್‌ಕ್ರಾಸ್: ಹೊಸ ಎಸ್ ಯುವಿಗಳಲ್ಲಿ ಯಾವುದು ಖರೀದಿಗೆ ಬೆಸ್ಟ್?

ಹಾಗೆಯೇ 7 ಸೀಟರ್ ಸೌಲಭ್ಯದ ಹೆಕ್ಟರ್ ಪ್ಲಸ್ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 17.50 ಲಕ್ಷದಿಂದ ರೂ. 22.21 ಲಕ್ಷ ಬೆಲೆ ಹೊಂದಿದ್ದು, ಇದು ಈ ಹಿಂದಿನ ಬೆಲೆಗಿಂತ ರೂ. 50 ಸಾವಿರದಿಂದ ರೂ. 1.37 ಲಕ್ಷದಷ್ಟು ಬೆಲೆ ಇಳಿಕೆ ಪಡೆದುಕೊಂಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳಿಗೆ ಪ್ರತಿಸ್ಪರ್ಧಿಗಳು ಹೆಚ್ಚುತ್ತಿದ್ದು, ಮಹೀಂದ್ರಾ ಎಕ್ಸ್ ಯುವಿ700, ಸ್ಕಾರ್ಪಿಯೋ ಎನ್, ಟಾಟಾ ಸಫಾರಿ, ಜೀಪ್ ಕಂಪಾಸ್, ಮತ್ತು ಹ್ಯುಂಡೈ ಅಲ್ಕಾಜರ್ ಕಾರುಗಳಿಂದ ಹೆಚ್ಚಿನ ಪೈಪೋಟಿ ಎದುರಿಸುತ್ತಿವೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಎಂಜಿ ಮೋಟಾರ್ ಕಂಪನಿಯು ಬೆಲೆ ಇಳಿಕೆ ಘೋಷಿಸಿದ್ದು, ಇದು ಮುಂಬರುವ ದಿನಗಳಲ್ಲಿ ಉತ್ತಮ ಬೇಡಿಕೆ ದಾಖಲಿಸಲು ಸಹಕಾರಿಯಾಗುವ ನೀರಿಕ್ಷೆಗಳಿವೆ.

ಇದನ್ನೂ ಓದಿ:  ಭರ್ಜರಿ ಮೈಲೇಜ್ ನೀಡುವ ರೂ. 10 ಲಕ್ಷ ಬಜೆಟ್ ಒಳಗಿನ ಕಾರುಗಳಿವು!

ಇನ್ನು ಎಂಜಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳು ಒಂದೇ ಮಾದರಿಯ ಎಂಜಿನ್ ಆಯ್ಕೆ ಹೊಂದಿದ್ದು, ಎರಡು ಕಾರುಗಳಲ್ಲೂ 143 ಹಾರ್ಸ್ ಪವರ್ ಉತ್ಪಾದನಾ ಸಾಮರ್ಥ್ಯದ 1.5 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 170 ಹಾರ್ಸ್ ಪವರ್ ಉತ್ಪಾದನಾ ಸಾಮರ್ಥ್ಯದ 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಇವು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಜೊತೆ ಉತ್ತಮ ಇಂಧನ ದಕ್ಷತೆ ಹೊಂದಿವೆ.