ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್

ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಿಡುಗಡೆಗೂ ಮುನ್ನ ಹೊಸ ಕಾರಿನ ಪ್ರೀಮಿಯಂ ಫೀಚರ್ಸ್ ಗಳ ಕುರಿತಾಗಿ ವಿವಿಧ ಟೀಸರ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್
ಎಂಜಿ ವಿಂಡ್ಸರ್ ಎಲೆಕ್ಟ್ರಿಕ್
Follow us
Praveen Sannamani
|

Updated on: Aug 27, 2024 | 8:56 PM

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಪ್ರಬಲ ಪೈಪೋಟಿಯಾಗಿರುವ ಎಂಜಿ ಮೋಟಾರ್ (MG Motor) ಕಂಪನಿಯು ಶೀಘ್ರದಲ್ಲಿಯೇ ವಿಂಡ್ಸರ್ ಇವಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಹೊಸ ಕಾರು ಟಾಟಾ ಮೋಟಾರ್ಸ್ ಪ್ರಮುಖ ಇವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಇದು ಮಧ್ಯಮ ಗಾತ್ರದ ಎಸ್ ಯುವಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಅತ್ಯುತ್ತಮ ಆಯ್ಕೆಯಾಗಲಿದೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಇತ್ತೀಚೆಗೆ ಜೆಎಸ್ ಡಬ್ಲ್ಯು ಜೊತೆಗೂಡಿರುವ ಎಂಜಿ ಮೋಟಾರ್ ಕಂಪನಿಯು ಭಾರೀ ಪ್ರಮಾಣದ ಹೊಸ ಹೂಡಿಕೆ ಮಾಡಿದ್ದು, ಹೊಸ ಹೂಡಿಕೆಯ ನಂತರ ಇದೀಗ ಮೊದಲ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಹೊಸದಾಗಿ ಬಿಡುಗಡೆಯಾಗಿರುವ ವಿಂಡ್ಸರ್ ಕಾರು ಮಾದರಿಯು ಸದ್ಯ ಇಂಡೋನೇಷಿಯಾ ಮಾರುಕಟ್ಟೆಯಲ್ಲಿರುವ ಸೈಕ್ ಕಂಪನಿಯ ಕ್ಲೌಡ್ ಇವಿ ಮಾದರಿಯನ್ನು ಆಧರಿಸಿ ಬಿಡುಗಡೆಯಾಗುತ್ತಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿನ ಮಧ್ಯಮ ವರ್ಗದ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸಲಿದೆ.

ವಿಂಡ್ಸರ್ ಕಾರು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವು ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಸೆಪ್ಟೆಂಬರ್ 11ರಂದು ಹೊಸ ಕಾರು ಭಾರತದಲ್ಲಿ ಅಧಿಕೃತವಾಗಿ ಅನಾವರಣಗೊಳ್ಳಲಿದೆ. ಇದು 4,295 ಎಂಎಂ ಉದ್ದಳತೆಯೊಂದಿಗೆ ಅತ್ಯಾಧುನಿಕ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿರಲಿದೆ. ಹೊಸ ಇವಿ ಕಾರಿನಲ್ಲಿ ಅತ್ಯಾಧುನಿಕ ಫೀಚರ್ಸ್ ಗಳಾದ ಎಲ್ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, 18 ಇಂಚಿನ ಅಲಾಯ್ ವ್ಹೀಲ್ಸ್, ಆ್ಯಪಲ್ ಕಾರ್ ಪ್ಲೇ ಮತ್ತು ಆ್ಯಂಡ್ರಾಯಿಡ್ ಆಟೋ ಸರ್ಪೋಟ್ ಹೊಂದಿರುವ 15.6 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್, 135 ಡಿಗ್ರಿಯಲ್ಲಿ ಮಡಿಕೆ ಮಾಡಬಹುದಾದ ಹಿಂಬದಿಯ ಆಸನಗಳನ್ನು ಸೇರಿದಂತೆ ದೊಡ್ಡದಾದ ಪನೊರಮಿಕ್ ಸನ್ ರೂಫ್ ಸಹ ಜೋಡಿಸಲಾಗಿದೆ.

ಜೊತೆಗೆ ಹೊಸ ಕಾರಿನಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೀಡುವ ವಿವಿಧ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಸಂಭಾವ್ಯ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಯುವ ಮೂಲಕ ಪ್ರಾಣಹಾನಿ ಪ್ರಕರಣಗಳನ್ನು ತಡೆಯಲಿದೆ. ಈ ಮೂಲಕ ವಿಂಡ್ಸರ್ ಕಾರು ಬೆಲೆಯಲ್ಲೂ ಕೂಡಾ ಗಮನಸೆಳೆಯಲಿದ್ದು, ಇದು ರೂ. 18 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?