ಅಚ್ಚರಿಯ ಬೆಲೆಯಲ್ಲಿ ಸೂಪರ್ ಫೀಚರ್ಸ್ ಹೊಂದಿರುವ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಬಿಡುಗಡೆ

MG Windsor EV: ಎಂಜಿ ಮೋಟಾರ್ ಕಂಪನಿಯು ತನ್ನ ಬಹುನೀರಿಕ್ಷಿತ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಹಲವು ವಿಶೇಷತೆಗಳೊಂದಿಗೆ ಬಿಡುಗಡೆ ಮಾಡಿದೆ.

ಅಚ್ಚರಿಯ ಬೆಲೆಯಲ್ಲಿ ಸೂಪರ್ ಫೀಚರ್ಸ್ ಹೊಂದಿರುವ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಬಿಡುಗಡೆ
ಎಂಜಿ ವಿಂಡ್ಸರ್ ಎಲೆಕ್ಟ್ರಿಕ್
Follow us
Praveen Sannamani
|

Updated on:Sep 11, 2024 | 2:59 PM

ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್ (MG Motor) ಕಂಪನಿಯು ತನ್ನ ಬಹುನೀರಿಕ್ಷಿತ ವಿಂಡ್ಸರ್ ಇವಿ (Windsor EV) ಮಾದರಿಯನ್ನು ಬಿಡುಗಡೆ ಮಾಡಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ನಡುವಿನ ಸ್ಥಾನದಲ್ಲಿ ಬಿಡುಗಡೆಯಾಗಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ವಿಂಡ್ಸರ್ ಇವಿ ಕಾರು ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಕ್ಸೈಟ್, ಎಕ್ಸ್‌ಕ್ಲೂಸಿವ್ ಮತ್ತು ಎಸೆನ್ಸ್ ಎನ್ನುವ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದು ಸ್ಟಾರ್‌ಬರ್ಸ್ಟ್ ಬ್ಲ್ಯಾಕ್, ಪರ್ಲ್ ವೈಟ್, ಕ್ಲೇ ಬೀಜ್ ಮತ್ತು ಟರ್ಕೋಯಿಸ್ ಗ್ರೀನ್ ಎನ್ನುವ ನಾಲ್ಕು ಬಣ್ಣಗಳ ಆಯ್ಕೆ ಹೊಂದಿದೆ.

MG Windsor Electric (7)

ಹೊಸ ವಿಂಡ್ಸರ್ ಇವಿ ಕಾರು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದ್ದು, ಇದು ಹಲವು ಆಸಕ್ತಿದಾಯಕ ಅಂಶಗಳೊಂದಿಗೆ ಖರೀದಿಗೆ ಲಭ್ಯವಾಗಿದೆ. ಎಂಜಿ ಮೋಟರ್ ಪ್ರಕಾರ ವಿಂಡ್ಸರ್ ಇವಿ ಕಾರು ಖರೀದಿಸುವ ಗ್ರಾಹಕರಿಗೆ ಬ್ಯಾಟರಿ ಸೇವೆಯನ್ನು ರೂ 3.5/ಕಿಮೀ ವೆಚ್ಚದಲ್ಲಿ ನೀಡಲಿದ್ದು, ಇದರ ಜೊತೆಗೆ ಬ್ಯಾಟರಿಯು ಮೊದಲ ಬ್ಯಾಚ್ ಗ್ರಾಹಕರಿಗೆ ಜೀವಮಾನದ ವಾರಂಟಿಯನ್ನು ಸಹ ಘೋಷಣೆ ಮಾಡಿದೆ.

MG Windsor Electric (2)

ಇದನ್ನೂ ಓದಿ: ಎಲೆಕ್ಟ್ರಿಕ್ ಕಾರಿನಲ್ಲಿ ಒಂದೇ ಚಾರ್ಜ್‌ಗೆ 949 ಕಿ.ಮೀ ಪ್ರಯಾಣಿಸಿ ಗಿನ್ನಿಸ್ ದಾಖಲೆ

ವಿಂಡ್ಸರ್ ಇವಿ ಕಾರು ಮಾದರಿಯನ್ನು ಎಂಜಿ ಕಂಪನಿಯು ವಿಶಿಷ್ಟ ವಿನ್ಯಾಸ ಮತ್ತು ಆಕಾರದೊಂದಿಗೆ ಐದು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಿದ್ದು, ಇದು ಮೂಲಭೂತವಾಗಿ ದೊಡ್ಡ ಹ್ಯಾಚ್ಬ್ಯಾಕ್ ಅನ್ನು ಹೋಲುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಫ್ಲಶ್ ಡೋರ್ ಹ್ಯಾಂಡಲ್‌ಗಳು, ಎರಡೂ ಬದಿಯಲ್ಲೂ ಫುಲ್ ವಿಡ್ತ್ ಎಲ್ಇಡಿ ಲೈಟ್ ಬಾರ್‌ ಗಳನ್ನು ನೀಡಲಾಗಿದ್ದು, ಬಂಪರ್‌ನಲ್ಲಿ ಹೆಡ್‌ಲ್ಯಾಂಪ್‌ಗಳನ್ನು ಅಳವಡಿಸುವುದರೊಂದಿಗೆ ಸ್ಟೆಪ್ಡ್ ಫ್ರಂಟ್-ಎಂಡ್ ವಿನ್ಯಾಸವನ್ನು ನೀಡಲಾಗಿದೆ. ಹಾಗೆಯೇ ವಿಶಿಷ್ಟ ವಿನ್ಯಾಸದಲ್ಲಿರುವ ಹಿಂಬದಿಯ ವಿಸ್ತೃತ ಕ್ವಾರ್ಟರ್ ಗ್ಲಾಸ್ ಗಳೊಂದಿಗೆ ಕಡಿದಾದ ಮುಂಭಾಗ ಮತ್ತು ಹಿಂಭಾಗದ ವಿಂಡ್‌ಸ್ಕ್ರೀನ್‌ ಮತ್ತು ದೊಡ್ಡದಾದ ಗ್ಲಾಸ್‌ಹೌಸ್ ಅನ್ನು ಸಹ ಪಡೆದುಕೊಂಡಿದೆ.

MG Windsor Electric (4)

ಇಂಟೀರಿಯರ್‌ ಬಗೆಗೆ ಹೇಳುವುದಾದರೆ ವಿಂಡ್ಸರ್ ಇವಿ ವೈಶಿಷ್ಟ್ಯಗಳು ಮತ್ತು ತಂತ್ರಜ್ಞಾನವು ಸಾಕಷ್ಟು ಸುಧಾರಿತವಾಗಿದೆ. ವಿಶಾಲವಾದ ಕ್ಯಾಬಿನ್ ನೊಂದಿಗೆ ದೊಡ್ಡದಾದ 15.6 ಇಂಚಿನ ಇನ್ಫೋಟೈನ್‌ಮೆಂಟ್ ಪ್ರಮುಖ ಆಕರ್ಷಣೆಯಾಗಿದೆ. ಇದಲ್ಲದೆ ಟು ಸ್ಪೋಕ್ ಸ್ಟೀರಿಂಗ್ ವ್ಹೀಲ್ ಮತ್ತು ಫ್ಲೋಟಿಂಗ್ ಸೆಂಟರ್ ಕನ್ಸೋಲ್, 135 ಡಿಗ್ರಿಗಳಷ್ಟು ಒರಗಿಕೊಳ್ಳುವ ಆಸನಗಳು, ವೈರ್ ಲೆಸ್ ಚಾರ್ಜಿಂಗ್, ದೊಡ್ಡದಾದ ಪನೋರಮಿಕ್ ಸನ್‌ರೂಫ್ ಸೌಲಭ್ಯವು ಐಷಾರಾಮಿ ಡ್ರೈವ್ ಅನುಭವ ನೀಡುತ್ತದೆ.

MG Windsor Electric (3)

ಇದನ್ನೂ ಓದಿ: ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್

ವಿಂಡ್ಸರ್ ಇವಿ ಕಾರಿನಲ್ಲಿ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು 38kWh ಬ್ಯಾಟರಿ ಪ್ಯಾಕ್ ನೀಡಲಾಗಿದ್ದು, ಇದು 136 ಹಾರ್ಸ್ ಪವರ್ ಮತ್ತು 200 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಚಾರ್ಜ್ ಗೆ ಗರಿಷ್ಠ 331 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಇಕೋ ಪ್ಲಸ್, ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್ ಗಳಿದ್ದು, ಹೊಸ ಕಾರು ಖರೀದಿಸುವ ಗ್ರಾಹಕರಿಗೆ ಮೊದಲ ಒಂದು ವರ್ಷ ಉಚಿತ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ 3 ವರ್ಷಕ್ಕೆ ಶೇ.60 ರಷ್ಟು ಬೆಲೆಯ ಬೈಬ್ಯಾಕ್ ಆಫರ್ ನೀಡಿದೆ.

Published On - 2:42 pm, Wed, 11 September 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ