AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿ ಹೊಸ ಇವಿ ಕಾರು ಬಿಡುಗಡೆಗೆ ಕ್ಷಣಗಣನೆ.. ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಪಕ್ಕಾ!

ಎಂಜಿ ಮೋಟಾರ್ ಕಂಪನಿ ತನ್ನ ಬಹುನೀರಿಕ್ಷಿತ ವಿಂಡ್ಸರ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಕಾರು ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ.

ಎಂಜಿ ಹೊಸ ಇವಿ ಕಾರು ಬಿಡುಗಡೆಗೆ ಕ್ಷಣಗಣನೆ.. ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಪಕ್ಕಾ!
ವಿಂಡ್ಸರ್ ಎಲೆಕ್ಟ್ರಿಕ್
Praveen Sannamani
|

Updated on:Sep 10, 2024 | 9:33 PM

Share

ಎಂಜಿ ಮೋಟಾರ್ (MG Motor) ಕಂಪನಿಯು ತನ್ನ ಬಹುನೀರಿಕ್ಷಿತ ವಿಂಡ್ಸರ್ ಇವಿ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಇದೇ ತಿಂಗಳು ಸೆಪ್ಟೆಂಬರ್ 11ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ನಡುವಿನ ಸ್ಥಾನದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಇವಿ ಕಾರು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಜೆಎಸ್ ಡಬ್ಲ್ಯು ಜೊತೆಗೂಡಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಬೃಹತ್ ಯೋಜನೆ ಚಾಲನೆ ನೀಡಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಹೂಡಿಕೆಯೊಂದಿಗೆ ವಿಂಡ್ಸರ್ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿ ಮಧ್ಯಮ ವರ್ಗದ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸಲಿದೆ.

ಹೊಸ ವಿಂಡ್ಸರ್ ಕಾರು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇದು 4,295 ಎಂಎಂ ಉದ್ದಳತೆಯೊಂದಿಗೆ ಅತ್ಯಾಧುನಿಕ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿರಲಿದೆ. 5 ಸೀಟರ್ ಮಾದರಿಯಾಗಿರುವ ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೊಂದಿಗೆ ವಿವಿಧ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ.

ಹಾಗೆಯೇ ಹೊಸ ಇವಿ ಕಾರಿನಲ್ಲಿ ಆಧುನಿಕ ಕಾರುಗಳಲ್ಲಿ ಫೀಚರ್ಸ್ ಗಳಾದ ಎಲ್ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, ಡ್ಯುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್ ಸೇರಿದಂತೆ 135 ಡಿಗ್ರಿಯಲ್ಲಿ ಮಡಿಕೆ ಮಾಡಬಹುದಾದ ಹಿಂಬದಿಯ ಆಸನಗಳನ್ನು ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಸಂಭಾವ್ಯ ಅಪಘಾತಗಳನ್ನು ತಡೆಯುವ ಮೂಲಕ ಪ್ರಾಣಹಾನಿ ಪ್ರಕರಣಗಳನ್ನು ತಡೆಯಲಿದೆ.

ಇದರೊಂದಿಗೆ ಹೊಸ ಇವಿ ಕಾರು ತಂತ್ರಜ್ಞಾನ ಮತ್ತು ಬ್ಯಾಟರಿ ಪ್ಯಾಕ್ ಗಳಿಗೆ ಅನುಗುಣವಾಗಿ ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಬೆಲೆ ವಿಚಾರವಾಗಿ ಬಿವೈಡಿ ಇ6 ಎಂಪಿವಿ ಮತ್ತು ಟಾಟಾ ಕರ್ವ್ ಇವಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Published On - 9:33 pm, Tue, 10 September 24

ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ