MG Windsor EV: ಬಜೆಟ್ ಬೆಲೆಗೆ ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ವಿಂಡ್ಸರ್ ಇವಿ

ಎಂಜಿ ಮೋಟಾರ್ ಹೊಸ ಎಲೆಕ್ಟ್ರಿಕ್ ಕಾರು ವಿಂಡ್ಸರ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ.

MG Windsor EV: ಬಜೆಟ್ ಬೆಲೆಗೆ ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ವಿಂಡ್ಸರ್ ಇವಿ
ಎಂಜಿ ವಿಂಡ್ಸರ್ ಇವಿ
Follow us
|

Updated on: Aug 11, 2024 | 10:27 PM

ಎಂಜಿ ಮೋಟಾರ್ (MG Motor) ಕಂಪನಿಯು ತನ್ನ ಮೂರನೇ ಇವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಕಾರು ಮಾದರಿಯು ವಿಂಡ್ಸರ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ. ಎಂಜಿ ಮೋಟಾರ್ ಕಂಪನಿಯ ಹೊಸ ಕಾರನ್ನು ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ನಡುವಿನ ಸ್ಥಾನದಲ್ಲಿ ಬಿಡುಗಡೆ ಮಾಡಲಿದ್ದು, ಇದು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಇತ್ತೀಚೆಗೆ ಜೆಎಸ್ ಡಬ್ಲ್ಯು ಜೊತೆಗೂಡಿರುವ ಎಂಜಿ ಮೋಟಾರ್ ಕಂಪನಿಯು ಭಾರೀ ಪ್ರಮಾಣದ ಹೊಸ ಹೂಡಿಕೆ ಮಾಡಿದ್ದು, ಹೊಸ ಹೂಡಿಕೆಯ ನಂತರ ಇದೀಗ ಮೊದಲ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಹೊಸದಾಗಿ ಬಿಡುಗಡೆಯಾಗಿರುವ ವಿಂಡ್ಸರ್ ಕಾರು ಮಾದರಿಯು ಸದ್ಯ ಇಂಡೋನೇಷಿಯಾ ಮಾರುಕಟ್ಟೆಯಲ್ಲಿರುವ ಸೈಕ್ ಕಂಪನಿಯ ಕ್ಲೌಡ್ ಇವಿ ಮಾದರಿಯನ್ನು ಆಧರಿಸಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿ ಮಧ್ಯಮ ವರ್ಗದ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸಲಿದೆ.

ಹೊಸ ವಿಂಡ್ಸರ್ ಕಾರು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವು ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದ್ದು, ಇದು 4,295 ಎಂಎಂ ಉದ್ದಳತೆಯೊಂದಿಗೆ ಅತ್ಯಾಧುನಿಕ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿರಲಿದೆ. ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೊಂದಿಗೆ ವಿವಿಧ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ.

ಹಾಗೆಯೇ ಹೊಸ ಇವಿ ಕಾರಿನಲ್ಲಿ ಆಧುನಿಕ ಕಾರುಗಳಲ್ಲಿ ಫೀಚರ್ಸ್ ಗಳಾದ ಎಲ್ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, ಡ್ಯುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್ ಸೇರಿದಂತೆ 135 ಡಿಗ್ರಿಯಲ್ಲಿ ಮಡಿಕೆ ಮಾಡಬಹುದಾದ ಹಿಂಬದಿಯ ಆಸನಗಳನ್ನು ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಸಂಭಾವ್ಯ ಅಪಘಾತಗಳನ್ನು ತಡೆಯುವ ಮೂಲಕ ಪ್ರಾಣಹಾನಿ ಪ್ರಕರಣಗಳನ್ನು ತಡೆಯಲಿದೆ.

ಈ ಮೂಲಕ ಹೊಸ ಇವಿ ಕಾರು ತಂತ್ರಜ್ಞಾನ ಮತ್ತು ಬ್ಯಾಟರಿ ಪ್ಯಾಕ್ ಗಳಿಗೆ ಅನುಗುಣವಾಗಿ ರೂ. 18 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಬೆಲೆ ವಿಚಾರವಾಗಿ ಬಿವೈಡಿ ಇ6 ಎಂಪಿವಿ ಕಾರಿಗೆ ಉತ್ತಮ ಪೈಪೋಟಿ ನೀಡಲಿದೆ.

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ