MG ZS EV: ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್- ರೂ. 2.30 ಲಕ್ಷ ಬೆಲೆ ಇಳಿಕೆ..

ಎಂಜಿ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಜೆಡ್ಎಸ್ ಇವಿ ಕಾರಿನ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದೆ.

MG ZS EV: ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್- ರೂ. 2.30 ಲಕ್ಷ ಬೆಲೆ ಇಳಿಕೆ..
ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್
Follow us
Praveen Sannamani
|

Updated on: Oct 06, 2023 | 6:05 PM

ಪ್ರೀಮಿಯಂ ಕಾರು ಮಾದರಿಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್(MG Motor) ಕಂಪನಿಯು ತನ್ನ ಜನಪ್ರಿಯ ಜೆಡ್ಎಸ್ ಇವಿ(ZS EV) ಕಾರಿನ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ್ದು, ಹಬ್ಬದ ಋತುಗಳಲ್ಲಿ ಹೊಸ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದೆ.

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಜೆಡ್ಎಸ್ ಇವಿ ಕಾರಿನ ಬೆಲೆಯಲ್ಲಿ ಎಂಜಿ ಮೋಟಾರ್ ಕಂಪನಿಯು ರೂ.50 ಸಾವಿರದಿಂದ ಬರೋಬ್ಬರಿ ರೂ. 2.30 ಲಕ್ಷದ ತನಕ ಬೆಲೆ ಇಳಿಕೆ ಘೋಷಿಸಿದ್ದು, ಹೊಸ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಎಂಜಿ ಜೆಡ್ಎಸ್ ಇವಿ ಕಾರು ಬ್ಯಾಟರಿ ಸಾಮಾರ್ಥ್ಯಕ್ಕೆ ಅನುಗುಣವಾಗಿ ಎಕ್ಸೈಟ್, ಎಕ್ಸ್​ಕ್ಲೂಸಿವ್ ಮತ್ತು ಎಕ್ಸ್​ಕ್ಲೂಸಿವ್ ಪ್ರೊ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಲೆ ಇಳಿಕೆಯ ನಂತರ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 22.88 ಲಕ್ಷದಿಂದ ರೂ. 25.90 ಲಕ್ಷ ಬೆಲೆ ಪಡೆದುಕೊಂಡಿದೆ.

ಇದನ್ನೂ ಓದಿ: ಹಳೆಯ ವಾಹನಗಳಿಗೆ ಗುಡ್ ಬೈ ಹೇಳಲು ಬೆಂಗಳೂರಿನಲ್ಲಿ ವೆಹಿಕಲ್ ಸ್ಕ್ರ್ಯಾಪಿಂಗ್ ಕೇಂದ್ರ ಆರಂಭ

ಹೊಸ ದರ ಪಟ್ಟಿಯಲ್ಲಿ ಎಕ್ಸೈಟ್ ವೆರಿಯೆಂಟ್ ಬೆಲೆಯನ್ನು ರೂ. 23.38 ಲಕ್ಷದಿಂದ ರೂ.22.80 ಲಕ್ಷಕ್ಕೆ ಇಳಿಕೆ ಮಾಡಲಾಗಿದ್ದರೆ, ಎಕ್ಸ್​ಕ್ಲೂಸಿವ್ ವೆರಿಯೆಂಟ್ ಬೆಲೆಯನ್ನು ರೂ. 27.30 ಲಕ್ಷದಿಂದ ರೂ. 25 ಲಕ್ಷಕ್ಕೆ ಇಳಿಕೆ ಮಾಡಲಾಗಿದೆ. ಹಾಗೆಯೇ ಎಕ್ಸ್​ಕ್ಲೂಸಿವ್ ಪ್ರೊ ವೆರಿಯೆಂಟ್ ಬೆಲೆಯನ್ನು ರೂ. 27.90 ಲಕ್ಷದಿಂದ ರೂ. 25.90 ಲಕ್ಷಕ್ಕೆ ಬೆಲೆ ಇಳಿಕೆ ಮಾಡಲಾಗಿದ್ದು, ಎಕ್ಸ್​ಕ್ಲೂಸಿವ್ ವೆರಿಯೆಂಟ್ ನಲ್ಲಿ ಹೆಚ್ಚಿನ ಮಟ್ಟದ ಬೆಲೆ ಕಡಿತ ಮಾಡಲಾಗಿದೆ.

ಹೊಸ ಎಲೆಕ್ಟ್ರಿಕ್ ಕಾರುಗಳ ಪ್ರಮುಖ ಬಿಡಿಭಾಗಗಳ ಆಮದು ಕಡಿತ ಪರಿಣಾಮ ಸ್ವದೇಶಿ ನಿರ್ಮಿತ ಇವಿ ಕಾರುಗಳ ಬಿಡಿಭಾಗಗಳ ಬಳಕೆ ಹೆಚ್ಚುತ್ತಿದ್ದು, ಉತ್ಪಾದನಾ ಖರ್ಚು ಕಡಿತವಾಗಿರುವ ಹಿನ್ನಲೆಯಲ್ಲಿ ಎಂಜಿ ಕಂಪನಿ ಜೆಡ್ಎಸ್ ಇವಿ ಬೆಲೆ ಇಳಿಕೆ ಮಾಡಿದೆ. ಜೊತೆಗೆ ಜಾಗತಿಕ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆಯಲ್ಲಿ ಯಶಸ್ವಿ 100 ವರ್ಷಗಳ ಸಂಭ್ರಮಾಚರಣೆಯಲ್ಲಿರುವ ಎಂಜಿ ಕಂಪನಿ ಗ್ರಾಹಕರ ಆಕರ್ಷಣೆಗೂ ಬೆಲೆ ಇಳಿಕೆಗೆ ಮಾಡಿದ್ದು, ಬೆಲೆ ಇಳಿಕೆ ಜೊತೆಗೆ ಇನ್ನು ಹಲವಾರು ಆಫರ್ ಗಳನ್ನು ನೀಡಲಾಗುತ್ತಿದೆ.

ಎಂಜಿ ಜೆಡ್ಎಸ್ ಇವಿ ಬ್ಯಾಟರಿ ಮತ್ತು ಮೈಲೇಜ್

ಹೊಸ ಜೆಡ್ಎಸ್ ಇವಿ ಕಾರು ಮಾದರಿಯು 50.3kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 461 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹಾಗೆಯೇ ಹೊಸ ಕಾರು ಫ್ರಂಟ್ ಆಕ್ಸೆಲ್ ಮೌಂಟೆಡ್ ಪರ್ಮನೆಂಟ್ ಮ್ಯಾಗ್ನೈಟ್ ಸಿಂಕ್ರನೈಜ್ ಎಲೆಕ್ಟ್ರಿಕ್ ಮೋಟಾರ್ ಮೂಲಕ 177 ಹಾರ್ಸ್ ಪವರ್, 280 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, 50kW ಡಿಸಿ ಫಾಸ್ಟ್ ಚಾರ್ಜರ್ ಮೂಲಕ ಕೇವಲ ಒಂದು ಗಂಟೆಯಲ್ಲಿ ಸೊನ್ನೆಯಿಂದ ಶೇ.80 ಚಾರ್ಜ್ ಆಗಬಲ್ಲದು. ಹೊಸ ಕಾರಿನಲ್ಲಿ ಗ್ರಾಹಕರಿಗೆ 7.4kW ಚಾರ್ಜರ್ ನೀಡಲಿದ್ದು, ಇದರ ಮೂಲಕ ಚಾರ್ಜ್ ಮಾಡುವುದರೆ ಪೂರ್ತಿಯಾಗಿ ಚಾರ್ಜ್ ಆಗಲು ಗರಿಷ್ಠ 9 ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!

ಇನ್ನು ಹೊಸ ಕಾರು ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದೆ. ಇನ್ನುಳಿದ ಆರಂಭಿಕ ಮಾದರಿಗಳಲ್ಲಿ 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ 10.1 ಇಂಚಿನ ಟಚ್ ಸ್ಕ್ರಿನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ವೈರ್ ಲೇಸ್ ಚಾರ್ಜರ್, 7 ಇಂಚಿನ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, 6 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ