Best Mileage CNG Cars: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

ಸಿಎನ್​ಜಿ ಕಾರುಗಳ ಮಾರಾಟವು ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಹಲವಾರು ಹೊಸ ಕಾರು ಮಾದರಿಗಳಲ್ಲಿ ಇದೀಗ ಸಿಎನ್​ಜಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿವೆ.

Best Mileage CNG Cars: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!
ಅತ್ಯುತ್ತಮ ಮೈಲೇಜ್ ಪ್ರೇರಿತ ಸಿಎನ್​ಜಿ ಕಾರುಗಳು
Follow us
Praveen Sannamani
|

Updated on: Dec 24, 2023 | 5:46 PM

ದುಬಾರಿ ಇಂಧನ ದರ ಮತ್ತು ನಿರ್ವಹಣಾ ವೆಚ್ಚ ಹೆಚ್ಚಳ ಪರಿಣಾಮ ಹೊಸ ಕಾರುಗಳ (New Cars) ಖರೀದಿದಾರರು ಪೆಟ್ರೋಲ್ ಮತ್ತು ಡೀಸೆಲ್ ಕಾರು ಮಾದರಿಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ (Electric) ಮತ್ತು ಸಿಎನ್ ಜಿ (CNG) ಕಾರುಗಳನ್ನು ಖರೀದಿಸುತ್ತಿದ್ದಾರೆ. ಪರಿಸರ ಸ್ನೇಹಿ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳಿಗೆ ಸದ್ಯ ಉತ್ತಮ ಬೇಡಿಕೆಯಿದ್ದರೂ ಬೆಲೆ ತುಸು ದುಬಾರಿಯಾಗಿದ್ದು, ದುಬಾರಿ ಬೆಲೆ ಹಿನ್ನಲೆ ಹಲವು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಎನ್​ಜಿ ಮಾದರಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಸಿಎನ್ ಜಿ ಕಾರುಗಳು ಸದ್ಯ ಎಂಟ್ರಿ ಲೆವಲ್ ಕಾರುಗಳಲ್ಲಿ ಮಾತ್ರವಲ್ಲದೆ ಮಧ್ಯಮ ಗಾತ್ರದ ಎಸ್ ಯುವಿ ಮತ್ತು ಎಂಪಿವಿ ಕಾರುಗಳಲ್ಲೂ ಸಹ ಮಾರಾಟಗೊಳ್ಳುತ್ತಿದ್ದು, ಈ ವರ್ಷ ಬಿಡುಗಡೆಯಾದ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರುವ ಸಿಎನ್​ಜಿ ಮಾದರಿಗಳ ಮಾಹಿತಿ ಇಲ್ಲಿದೆ.

ಹ್ಯುಂಡೈ ಎಕ್ಸ್ಟರ್ 

Best Mileage CNG Cars (2)

ಮೈಕ್ರೊ ಎಸ್ ಯುವಿ ವೈಶಿಷ್ಟ್ಯತೆಯ ಹ್ಯುಂಡೈ ಎಕ್ಸ್ ಟರ್ ಕಾರು ಮಾದರಿಯು ಸಿಎನ್‌ಜಿ ಆಯ್ಕೆ ಹೊಂದಿರುವ ಪ್ರಮುಖ ಕಾರು ಮಾದರಿಗಳಲ್ಲಿ ಒಂದಾಗಿದ್ದು, ಎಕ್ಸ್ ಟರ್ ಸಿಎನ್ ಜಿ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಹೊಂದಿದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ 27 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 8.34 ಲಕ್ಷದಿಂದ ರೂ. 9.06 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಜನಪ್ರಿಯ ಎಸ್​ಯುವಿ ಕಾರುಗಳ ಖರೀದಿ ಮೇಲೆ ಭರ್ಜರಿ ಇಯರ್ ಎಂಡ್ ಆಫರ್ ಘೋಷಣೆ

ಟಾಟಾ ಪಂಚ್ 

Best Mileage CNG Cars (2)

ಹೊಸ ಪಂಚ್ ಸಿಎನ್‌ಜಿ ಮಾದರಿಯು ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ಇದು ರೂ. 7.10 ಲಕ್ಷದಿಂದ ರೂ. 9.68 ಲಕ್ಷ ಬೆಲೆ ಹೊಂದಿದೆ. ಪಂಚ್ ಸಿಎನ್‌ಜಿ ಮಾದರಿಯು 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ವಿಶೇಷ ತಂತ್ರಜ್ಞಾನ ಹೊಂದಿರುವ ಐಸಿಎನ್‌ಜಿ ಕಿಟ್ ಜೋಡಣೆ ಹೊಂದಿದ್ದು, ಇದು ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 26 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಟೊಯೊಟಾ ರೂಮಿಯಾನ್ 

Best Mileage CNG Cars (1)

ಟೊಯೊಟಾ ರೂಮಿಯಾನ್ ಎಂಪಿವಿ ಕಾರು ಮಾರುತಿ ಎರ್ಟಿಗಾ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿದ್ದು, ಇದು ಪೆಟ್ರೋಲ್ ಮತ್ತು ಸಿಎನ್ ಜಿ ಆಯ್ಕೆ ಹೊಂದಿದ್ದು, ಪ್ರತಿ ಕೆಜಿ ಸಿಎನ್ ಜಿಗೆ ಇದು ಗರಿಷ್ಠ 26.11 ಕಿ.ಮೀ ಮೈಲೇಜ್ ನೀಡುತ್ತದೆ. ರೂಮಿಯಾನ್ ಸಿಎನ್ ಜಿ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 11.24 ಲಕ್ಷ ಬೆಲೆ ಹೊಂದಿದ್ದು, ಎರ್ಟಿಗಾದಲ್ಲಿರುವಂತೆ ಹಲವಾರು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮಾರುತಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಹೈರೈಡರ್ 

Best Mileage CNG Cars (4)

ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಹೊಸ ಗ್ರ್ಯಾಂಡ್ ವಿಟಾರಾ ಮತ್ತು ಅರ್ಬನ್ ಕ್ರೂಸರ್ ಹೈರೈಡರ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳನ್ನು ಸಹಭಾಗಿತ್ವ ಯೋಜನೆಯಲ್ಲಿ ಬಿಡುಗಡೆ ಮಾಡಿದ್ದು, ಎರಡು ಕಾರುಗಳಲ್ಲೂ 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಆಯ್ಕೆ ನೀಡಲಾಗಿದೆ. ಎಕ್ಸ್ಎಲ್6 ಮಾದರಿಯಲ್ಲಿಯಲ್ಲಿರುವಂತೆ ಇವು ಕೂಡಾ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿ ಗೆ 26 ಕಿ.ಮೀ ಮೈಲೇಜ್ ನೀಡಲಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 13.05 ಲಕ್ಷದಿಂದ ರೂ. 13.56 ಲಕ್ಷ ಆರಂಭಿಕ ಬೆಲೆ ಹೊಂದಿವೆ. ‘

ಮಾರುತಿ ಸುಜುಕಿ ಬ್ರೆಝಾ 

Best Mileage CNG Cars (4)

ಹೊಸ ಬ್ರೆಝಾ ಸಿಎನ್ ಜಿ ಮಾದರಿಯು ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 9.24 ಲಕ್ಷ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ 1.5 ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್ ನೊಂದಿಗೆ ಸಿಎನ್ ಜಿ ಕಿಟ್ ಜೋಡಿಸಲಾಗಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 88 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 25.51 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಕಾರಿನಲ್ಲಿ 6 ಏರ್ ಬ್ಯಾಗ್ ಗಳು, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದ್ದು, ಇಂಟಿರಿಯರ್ ಫೀಚರ್ಸ್ ಕೂಡಾ ಗಮನಸೆಳೆಯಲಿವೆ.

ಇದನ್ನೂ ಓದಿ: 2023ರಲ್ಲಿ ಬಿಡುಗಡೆಯಾದ ಟಾಪ್ 5 ಬಜೆಟ್ ಕಾರುಗಳಿವು!

ಮಾರುತಿ ಸುಜುಕಿ ಫ್ರಾಂಕ್ಸ್ 

Best Mileage CNG Cars (4)

ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಸಿಎನ್ ಜಿ ಮಾದರಿಯು ಸಿಗ್ಮಾ ಮತ್ತು ಡೆಲ್ಟಾ ಎನ್ನುವ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಸಿಗ್ಮಾ ವೆರಿಯೆಂಟ್ ರೂ. 8.42 ಲಕ್ಷ ಬೆಲೆ ಹೊಂದಿದ್ದರೆ ಡೆಲ್ಟಾ ವೆರಿಯೆಂಟ್ ರೂ. 9.28 ಲಕ್ಷ ಬೆಲೆ ಹೊಂದಿದೆ. ಹೊಸ ಫ್ರಾಂಕ್ಸ್ ಸಿಎನ್ ಜಿ ಆವೃತ್ತಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಸ್-ಸಿಎನ್ ಜಿ ಕಿಟ್ ಹೊಂದಿದ್ದು, ಪ್ರತಿ ಲೀಟರ್ ಸಿಎನ್ ಜಿಗೆ ಗರಿಷ್ಠ 28.51 ಕಿ.ಮೀ ಮೈಲೇಜ್ ನೊಂದಿಗೆ ಇದು ಈ ವಿಭಾಗದ ಕಾರುಗಳಲ್ಲೇ ಅತಿ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಕಾರು ಮಾದರಿಯಾಗಿ ಹೊರಹೊಮ್ಮಿದೆ.