AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upcoming Cars: ಅಗಸ್ಟ್ ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಅಗಸ್ಟ್ ತಿಂಗಳಿನಲ್ಲಿ ಪ್ರಮುಖ ಕಾರು ಕಂಪನಿಗಳು ವಿವಿಧ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರುಗಳು ವಿನೂತನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿವೆ.

Upcoming Cars: ಅಗಸ್ಟ್ ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!
ಅಗಸ್ಟ್ ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!
Praveen Sannamani
Praveen Sannamani|

Updated on: Jul 31, 2024 | 10:26 PM

Share

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ (New Cars) ಮಾರಾಟವು ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಶೀಘ್ರದಲ್ಲಿಯೇ ವಿನೂತನವಾಗಿರುವ ಹಲವು ಹೊಸ ಕಾರುಗಳು ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿವೆ. ಹೊಸ ಕಾರುಗಳಲ್ಲಿ ಹೆಚ್ಚಿನ ಕಾರು ಮಾದರಿಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ನಲ್ಲಿ ಮಾತ್ರವಲ್ಲದೇ ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ರೂಪದಲ್ಲೂ ಬಿಡುಗಡೆಗಾಗಿ ಸಿದ್ದವಾಗುತ್ತಿವೆ. ಹಾಗಾದ್ರೆ ಅಗಸ್ಟ್ ತಿಂಗಳಿನಲ್ಲಿ ಹೊಸದಾಗಿ ಬಿಡುಗಡೆಯಾಗಲಿರುವ ಕಾರುಗಳು ಯಾವುವು? ಅವುಗಳ ಬೆಲೆ ಎಷ್ಟು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಟಾಟಾ ಕರ್ವ್ ಇವಿ

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಟಾಟಾ ಕರ್ವ್ ಇವಿ ಗ್ರಾಹಕರಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ನೆಕ್ಸಾನ್ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಕರ್ವ್ ಕಾರು ಕೂಪೆ ಎಸ್ ಯುವಿ ವೈಶಿಷ್ಟ್ಯತೆ ಹೊಂದಿದ್ದು, ಇದು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲೂ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾತ್ರ ಸದ್ಯಕ್ಕೆ ಬಿಡುಗಡೆ ಮಾಡಲಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳು 2025ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಇವಿ ಆವೃತ್ತಿಯು ಪ್ರತಿಚಾರ್ಜ್ ಗೆ 450 ರಿಂದ 500 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆಗಳನ್ನು ಪಡೆದುಕೊಳ್ಳಲಿದ್ದು, ಇದು ಟಾಟಾ ಕಂಪನಿಯ ಎರಡನೇ ತಲೆಮಾರಿನ ಇವಿ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗುತ್ತಿದೆ.

ನಿಸ್ಸಾನ್ ಎಕ್ಸ್-ಟ್ರಯಲ್

ನಿಸ್ಸಾನ್ ಹೊಸ ಎಕ್ಸ್-ಟ್ರಯಲ್ ಎಸ್ ಯುವಿ ಕಾರು ಅಗಸ್ಟ್ 1ಕ್ಕೆ ಬಿಡುಗಡೆಯಾಗಲಿದ್ದು, ಇದು ಸಂಪೂರ್ಣವಾಗಿ ಆಮದು (ಸಿಬಿಯು) ಮಾದರಿಯಾಗಿ ಮಾರಾಟಗೊಳ್ಳಲಿದೆ. ಹೊಸ ಕಾರು ದುಬಾರಿ ಬೆಲೆ ಹೊಂದಿರುವ ಟೊಯೊಟಾ ಫಾರ್ಚೂನ್ ಗೆ ಉತ್ತಮ ಪೈಪೋಟಿಯಾಗಲಿದ್ದು, ಇದು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಮ್ಯಾನವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಗಳ ಆಯ್ಕೆ ಮೂಲಕ ಗರಿಷ್ಠ 204 ಹಾರ್ಸ್ ಪವರ್ ಮತ್ತು 305 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಮಹೀಂದ್ರಾ ಥಾರ್ ರೊಕ್ಸ್

ಮಹೀಂದ್ರಾ ಕಂಪನಿಯು ಥಾರ್ ಕಾರಿನಲ್ಲಿ ಹೊಸದಾಗಿ ರೊಕ್ಸ್ ಆವೃತ್ತಿಯನ್ನು ಹಲವಾರು ವಿಶೇಷತೆಗಳೊಂದಿಗೆ ಬಿಡುಗಡೆ ಮಾಡುತ್ತಿದೆ. ಇದು ವಿಶೇಷವಾಗಿ 5 ಡೋರ್ ಸೌಲಭ್ಯ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದ್ದು, ಅಗಸ್ಟ್ 15ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಥಾರ್ ಕಾರು ಮಾದರಿಯು 3 ಡೋರ್ ಸೌಲಭ್ಯದೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಇದು ಆಫ್ ರೋಡ್ ಜೊತೆಗೆ ಲೈಫ್ ಸ್ಟೈಲ್ ಮಾದರಿಯಾಗಿ ಗುರುತಿಸಿಕೊಂಡಿದೆ. ಆದರೆ ಥಾರ್ ರೊಕ್ಸ್ ಆವೃತ್ತಿಯಲ್ಲಿ ಹಿಂಬದಿಯ ಸವಾರರಿಗೆ ಅನುಕೂಲಕರವಾಗುವಂತೆ 5 ಡೋರ್ ಸೌಲಭ್ಯವನ್ನು ನೀಡಲಾಗುತ್ತಿದೆ.

ಹ್ಯುಂಡೈ ಅಲ್ಕಾಜರ್ ಫೇಸ್ ಲಿಫ್ಟ್

ಹ್ಯುಂಡೈ ಕಂಪನಿಯು ಕ್ರೆಟಾ ಫೇಸ್ ಲಿಫ್ಟ್ ನಲ್ಲಿ ಪರಿಚಯಿಸಲಾದ ಹೊಸ ಬದಲಾವಣೆಗಳನ್ನು ಇದೀಗ ಅಲ್ಕಾಜರ್ ಫೇಸ್ ಲಿಫ್ಟ್ ಪರಿಚಯಿಸುವುದಕ್ಕೆ ಮುಂದಾಗಿದೆ. ಅಲ್ಕಾಜರ್ ಫೇಸ್ ಲಿಫ್ಟ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಹೊಂದಿರಲಿದ್ದು, ಇದು 7 ಸೀಟರ್ ಇಷ್ಟಪಡುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿರಲಿದೆ.

ಎಂಜಿ ಕ್ಲೌಡ್ ಎಲೆಕ್ಟ್ರಿಕ್

ಭಾರತದಲ್ಲಿ ಸದ್ಯ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ಮೂಲಕ ಎಲೆಕ್ಟ್ರಿಕ್ ಕಾರುಗಳ ವಿಭಾಗಗಳ ಬೇಡಿಕೆ ಅರಿತಿರುವ ಎಂಜಿ ಮೋಟಾರ್ ಕಂಪನಿ ಇದೀಗ ಕ್ಲೌಡ್ ಇವಿ ಕಾರನ್ನು ರಸ್ತೆಗಿಳಿಸುತ್ತಿದೆ. ಇದು ವಿನೂತನ ಫೀಚರ್ಸ್ ಗಳೊಂದಿಗೆ ಮಾರಾಟಗೊಳ್ಳಲಿದ್ದು, ಹೊಸ ಕಾರು ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ನಡುವಿನ ಸ್ಥಾನ ಪಡೆದುಕೊಳ್ಳಲಿದೆ. ಇದು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಅಭಿವೃದ್ದಿಗೊಂಡಿದ್ದು, 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಫೀಚರ್ಸ್ ಗಳಿರಲಿದ್ದು, ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ