ಹೊಸ ಕಾರುಗಳ ಬಿಡುಗಡೆಗೆ ನಾ ಮುಂದು ತಾ ಮುಂದು.. ಪ್ರಮುಖ ಕಂಪನಿಗಳ ನಡುವೆ ಶುರುವಾಗಿದೆ ಭಾರೀ ಪೈಪೋಟಿ!

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಪ್ರಮಾಣ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹಲವು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಹೀಗಾಗಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಯ ನೀರಿಕ್ಷೆಯಲ್ಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ಶುರುವಾಗಿದೆ.

ಹೊಸ ಕಾರುಗಳ ಬಿಡುಗಡೆಗೆ ನಾ ಮುಂದು ತಾ ಮುಂದು.. ಪ್ರಮುಖ ಕಂಪನಿಗಳ ನಡುವೆ ಶುರುವಾಗಿದೆ ಭಾರೀ ಪೈಪೋಟಿ!
ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಹೊಸ ಕಾರುಗಳು
Follow us
|

Updated on: Jul 11, 2024 | 5:05 PM

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ (New Cars) ಮಾರಾಟವು ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಶೀಘ್ರದಲ್ಲಿಯೇ ವಿನೂತನವಾಗಿರುವ ಹಲವು ಹೊಸ ಕಾರುಗಳು ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿವೆ. ಹೊಸ ಕಾರುಗಳಲ್ಲಿ ಹೆಚ್ಚಿನ ಕಾರು ಮಾದರಿಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ನಲ್ಲಿ ಮಾತ್ರವಲ್ಲದೇ ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ರೂಪದಲ್ಲೂ ಬಿಡುಗಡೆಗಾಗಿ ಸಿದ್ದವಾಗುತ್ತಿವೆ. ಹಾಗಾದ್ರೆ ಹೊಸದಾಗಿ ಬಿಡುಗಡೆಯಾಗಲಿರುವ ಕಾರುಗಳು ಯಾವುವು? ಅವುಗಳ ಬೆಲೆ ಎಷ್ಟು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಟಾಟಾ ಕರ್ವ್ ಇವಿ

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಕರ್ವ್ ಇವಿ ಗ್ರಾಹಕರಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ನೆಕ್ಸಾನ್ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಕರ್ವ್ ಕಾರು ಕೂಪೆ ಎಸ್ ಯುವಿ ವೈಶಿಷ್ಟ್ಯತೆ ಹೊಂದಿದ್ದು, ಇದು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲೂ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾತ್ರ ಸದ್ಯಕ್ಕೆ ಬಿಡುಗಡೆ ಮಾಡಲಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳು 2025ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಇವಿ ಆವೃತ್ತಿಯು ಪ್ರತಿಚಾರ್ಜ್ ಗೆ 500 ಕಿ.ಮೀ ಗೂ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಟಾಟಾ ಕಂಪನಿಯ ಎರಡನೇ ತಲೆಮಾರಿನ ಇವಿ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗುತ್ತಿದೆ.

ಬಿವೈಡಿ ಸೀಗಲ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಬಿವೈಡಿ ಕಂಪನಿಯು ಭಾರತದಲ್ಲಿ ತನ್ನ ನಾಲ್ಕನೇ ಇವಿ ಕಾರು ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಭಾರತದಲ್ಲಿ ಸದ್ಯ ಇ6, ಅಟ್ಟೊ 3 ಮತ್ತು ಸೀಲ್ ಎನ್ನುವ ಮೂರು ಕಾರುಗಳನ್ನು ಮಾರಾಟಮಾಡುತ್ತಿದ್ದು, ಇದೀಗ ಬಜೆಟ್ ಬೆಲೆಯಲ್ಲಿ ಹೊಸದಾಗಿ ಸೀಗಲ್ ಎನ್ನುವ ಎಲೆಕ್ಟ್ರಿಕ್ ಹ್ಯಾಚ್ ಬ್ಯಾಕ್ ಬಿಡುಗಡೆ ಮಾಡುತ್ತಿದೆ. ಇದು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ವಿವಿಧ ಬ್ಯಾಟರಿ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 310 ರಿಂದ 410 ಕಿ.ಮೀ ಮೈಲೇಜ್ ನೀಡಬಹುದಾಗಿದೆ. ಹಾಗೆಯೇ ಇದು ರೂ. 10 ಲಕ್ಷದಿಂದ ರೂ. 12 ಲಕ್ಷ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಇದು ಇವಿ ಕಾರು ಮಾರಾಟದಲ್ಲಿ ಕ್ರಾಂತಿಕಾರಿ ಬೆಳವಣಿಗೆ ಸಾಧಿಸಲಿದೆ. ಬಿಡುಗಡೆಗೊಂಡ ನಂತರ ಇದು ಟಾಟಾ ಟಿಯಾಗೋ ಇವಿ, ಎಂಜಿ ಕಾಮೆಟ್, ಸಿಟ್ರನ್ ಇಸಿ3 ಎಲೆಕ್ಟ್ರಿಕ್ ಕಾರುಗಳಿಂತಲೂ ಹೆಚ್ಚಿನ ಮೈಲೇಜ್ ಮಚ್ಚು ಫೀಚರ್ಸ್ ನೊಂದಿಗೆ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ನಿಸ್ಸಾನ್ ಎಕ್ಸ್-ಟ್ರಯಲ್

ಹೊಸ ಎಕ್ಸ್-ಟ್ರಯಲ್ ಕಾರು ಈಗಾಗಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಸಾಕಷ್ಟು ಬೇಡಿಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಇದೀಗ ಭಾರತದಲ್ಲೂ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ. ಹೊಸ ಕಾರಿನಲ್ಲಿರುವ ಫೀಚರ್ಸ್ ಮತ್ತು ಎಂಜಿನ್ ಪರ್ಫಾಮೆನ್ಸ್ ಆಯ್ಕೆ ಕುರಿತಾದ ಪ್ರಮುಖ ಮಾಹಿತಿಗಳು ಬಹಿರಂಗವಾಗಿದ್ದು, ಇದು ಸಂಪೂರ್ಣವಾಗಿ ಆಮದು (ಸಿಬಿಯು) ಮಾದರಿಯಾಗಿ ಮಾರಾಟಗೊಳ್ಳಲಿದೆ. ಹೊಸ ಕಾರು ದುಬಾರಿ ಬೆಲೆ ಹೊಂದಿರುವ ಟೊಯೊಟಾ ಫಾರ್ಚೂನ್ ಗೆ ಉತ್ತಮ ಪೈಪೋಟಿಯಾಗಲಿದ್ದು, ಇದು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಮ್ಯಾನವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಗಳ ಆಯ್ಕೆ ಮೂಲಕ ಗರಿಷ್ಠ 204 ಹಾರ್ಸ್ ಪವರ್ ಮತ್ತು 305 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹ್ಯುಂಡೈ ಅಲ್ಕಾಜರ್ ಫೇಸ್ ಲಿಫ್ಟ್

ಹ್ಯುಂಡೈ ಕಂಪನಿಯು ಕ್ರೆಟಾ ಫೇಸ್ ಲಿಫ್ಟ್ ನಲ್ಲಿ ಪರಿಚಯಿಸಲಾದ ಹೊಸ ಬದಲಾವಣೆಗಳನ್ನು ಇದೀಗ ಅಲ್ಕಾಜರ್ ಫೇಸ್ ಲಿಫ್ಟ್ ಪರಿಚಯಿಸುವುದಕ್ಕೆ ಮುಂದಾಗಿದೆ. ಅಲ್ಕಾಜರ್ ಫೇಸ್ ಲಿಫ್ಟ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಹೊಂದಿರಲಿದ್ದು, ಇದು 7 ಸೀಟರ್ ಇಷ್ಟಪಡುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿರಲಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಎಂಜಿ ಕ್ಲೌಡ್ ಎಲೆಕ್ಟ್ರಿಕ್

ಭಾರತದಲ್ಲಿ ಸದ್ಯ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ಮೂಲಕ ಎಲೆಕ್ಟ್ರಿಕ್ ಕಾರುಗಳ ವಿಭಾಗಗಳ ಬೇಡಿಕೆ ಅರಿತಿರುವ ಎಂಜಿ ಮೋಟಾರ್ ಕಂಪನಿ ಇದೀಗ ಕ್ಲೌಡ್ ಇವಿ ಕಾರನ್ನು ರಸ್ತೆಗಿಳಿಸುತ್ತಿದೆ. ಇದು ವಿನೂತನ ಫೀಚರ್ಸ್ ಗಳೊಂದಿಗೆ ಮಾರಾಟಗೊಳ್ಳಲಿದ್ದು, ಹೊಸ ಕಾರು ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ಕಾರುಗಳ ನಡುವಿನ ಸ್ಥಾನ ಪಡೆದುಕೊಳ್ಳಲಿದೆ. ಇದು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಅಭಿವೃದ್ದಿಗೊಂಡಿದ್ದು, 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಫೀಚರ್ಸ್ ಗಳಿರಲಿದ್ದು, ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್