ಸ್ಮಾರ್ಟ್ ಕೀ ಜೊತೆ ವಿಶೇಷ ಫೀಚರ್ಸ್ ಹೊಂದಿರುವ ಹೊಸ ಹೋಂಡಾ ಡಿಯೋ ಸ್ಕೂಟರ್ ಬಿಡುಗಡೆ

ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ವಿಭಾಗವು ಭಾರತದಲ್ಲಿ ಹೊಸ ಮಾಲಿನ್ಯ ನಿಯಂತ್ರಣ ಮಾನದಂಡ ಪೂರೈಸಿರುವ ವಿವಿಧ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಿದ್ದು, ಇದೀಗ ಡಿಯೋ ಹೊಸ ಆವೃತ್ತಿಯನ್ನು ಪರಿಚಯಿಸಿದೆ.

ಸ್ಮಾರ್ಟ್ ಕೀ ಜೊತೆ ವಿಶೇಷ ಫೀಚರ್ಸ್ ಹೊಂದಿರುವ ಹೊಸ ಹೋಂಡಾ ಡಿಯೋ ಸ್ಕೂಟರ್ ಬಿಡುಗಡೆ
ಹೊಸ ಹೋಂಡಾ ಡಿಯೋ ಸ್ಕೂಟರ್ ಬಿಡುಗಡೆ
Follow us
Praveen Sannamani
|

Updated on: Jun 13, 2023 | 7:10 PM

ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿರುವ ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್(Honda Motorcycle & Scooter) ವಿಭಾಗವು ನವೀಕೃತ ಡಿಯೋ(Dio) ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 70,211 ಆರಂಭಿಕ ಬೆಲೆ ಪಡೆದುಕೊಂಡಿದೆ.

ನವೀಕೃತ ಡಿಯೋ ಆವೃತ್ತಿಯು ಫೀಚರ್ಸ್ ಗಳಿಗೆ ಅನುಗುಣವಾಗಿ ಸ್ಟ್ಯಾಂಡರ್ಡ್, ಡಿಲಕ್ಸ್ ಮತ್ತು ಸ್ಮಾರ್ಟ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಸ್ಟ್ಯಾಂಡರ್ಡ್ ವೆರಿಯೆಂಟ್ ರೂ. 70,211 ಬೆಲೆ ಹೊಂದಿದ್ದರೆ ಡಿಲಕ್ಸ್ ವೆರಿಯೆಂಟ್ ರೂ. 74,212 ಬೆಲೆ ಹೊಂದಿದೆ. ಹಾಗೆಯೇ ಸ್ಮಾರ್ಟ್ ಫೀಚರ್ಸ್ ಹೊಂದಿರುವ ಸ್ಮಾರ್ಟ್ ವೆರಿಯೆಂಟ್ ರೂ. 77,712 ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಈ ಹಿಂದೆಗಿಂತಲೂ ಹೆಚ್ಚಿನ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Honda Dio Scooter

ಇದನ್ನೂ ಓದಿ: 2023ರ ಹೀರೋ ಪ್ಯಾಶನ್ ಪ್ಲಸ್ ಬೈಕ್ ಬಿಡುಗಡೆ

ಸ್ಮಾರ್ಟ್ ಎಂಜಿನ್ ಜೊತೆ ಸ್ಮಾರ್ಟ್ ಫೀಚರ್ಸ್ ಹೋಂಡಾ ಕಂಪನಿಯು ನವೀಕೃತ ಡಿಯೋ ಮಾದರಿಯಲ್ಲಿ ಕಳೆದ ಏಪ್ರಿಲ್ ನಿಂದ ಜಾರಿಗೆ ಬಂದಿರುವ ಬಿಎಸ್6 ಎರಡನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸಿರುವ ಎಂಜಿನ್ ಜೋಡಣೆ ಮಾಡಿದೆ. ಹೊಸ ಸ್ಕೂಟರ್ ನಲ್ಲಿರುವ 109.5 ಸಿಸಿ ಏರ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಈ ಹಿಂದಿಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಉನ್ನತೀಕರಣಗೊಂಡಿದ್ದು, ಇದು 7.65 ಹಾರ್ಸ್ ಪವರ್ ಮತ್ತು 9 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಸ್ಕೂಟರ್ ನಲ್ಲಿ ಎಂಜಿನ್ ಮಾತ್ರವಲ್ಲದೇ ಹೊಸದಾಗಿ ಪರಿಚಯಿಸಿರುವ ಸ್ಮಾರ್ಟ್ ವೆರಿಯೆಂಟ್ ನಲ್ಲಿ ಆಕರ್ಷಕ ಫೀಚರ್ಸ್ ನೀಡಲಾಗಿದ್ದು, ಇದರಲ್ಲಿ ಸ್ಮಾರ್ಟ್ ಕೀ, ಸ್ಮಾರ್ಟ್ ಫೈಂಡ್, ಸ್ಮಾರ್ಟ್ ಅನ್ ಲಾಕ್, ಸ್ಮಾರ್ಟ್ ಸ್ಟಾರ್ಟ್ ಮತ್ತು ಸ್ಮಾರ್ಟ್ ಸೇಫ್ ಸೌಲಭ್ಯಗಳಿವೆ. ಇವು ಹೊಸ ಸ್ಕೂಟರ್ ಗೆ ಹೆಚ್ಚಿನ ಸುರಕ್ಷತೆ ನೀಡುವುದರ ಜೊತೆಗೆ ಸ್ಕೂಟರ್ ನಿರ್ವಹಣೆಯನ್ನು ಮತ್ತಷ್ಟು ಸುಲಭಗೊಳಿಸುತ್ತದೆ.

ಇದನ್ನೂ ಓದಿ: ಬಜೆಟ್ ಬೆಲೆಯ ಎಥರ್ 450ಎಸ್ ಇವಿ ಸ್ಕೂಟರ್ ಬಿಡುಗಡೆ

ಇನ್ನು ಹೊಸ ಸ್ಕೂಟರ್ ನಲ್ಲಿ ಹೋಂಡಾ ಕಂಪನಿಯು ನವೀಕೃತ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್ ನೀಡಿದ್ದು, ಇದರಲ್ಲಿ ಎಂಟಿ ಟು ಡಿಸ್ಟೆನ್ಸ್, ರಿಯಲ್ ಟೈಮ್ ಫ್ಯೂಲ್ ಎಪಿಫಿಯೆನ್ಷಿ ಮತ್ತು ಅವರೇಜ್ ಫ್ಯೂಲ್ ಎಪಿಫಿಯೆನ್ಷಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಇದರೊಂದಿಗೆ ಹೊಸ ಸ್ಕೂಟರ್ ನಲ್ಲಿ 12 ಇಂಚಿನ ಫ್ರಂಟ್ ವ್ಹೀಲ್ ಜೊತೆಗೆ ಟೆಲಿಸ್ಕೊಫಿಕ್ ಫ್ರಂಟ್ ಸಸ್ಷೆಂಷನ್, 3 ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ರಿಯರ್ ಸಸ್ಷೆಂಷನ್, ಪಾಸ್ ಸ್ವಿಚ್‌, ಎಂಜಿನ್ ಸ್ಟಾರ್ಟ್/ಸ್ಟಾಪ್, ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಡಿಆರ್ ಎಲ್ಎಸ್, 18 ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸ್ಟೊರೇಜ್ ಮತ್ತು ವಿವಿಧ ಏಳು ಬಣ್ಣಗಳ ಆಯ್ಕೆ ಹೊಂದಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ